ವೀರ ರಾಣಿ ಕಿತ್ತೂರು ಚೆನ್ನಮ್ಮ ಜಯಂತಿ ಆಚರಣೆ

ಗದಗ 23:  ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ  ವೀರರಾಣಿ ಕಿತ್ತೂರು ಚೆನ್ನಮ್ಮ ಜಯಂತಿಯನ್ನು  ರವಿವಾರದಂದು  ಕಿತ್ತೂರು ಚೆನ್ನಮ್ಮ ಅವರ ಭಾವಚಿತ್ರಕ್ಕೆ ಪುಷ್ಪ  ನಮನ  ಸಲ್ಲಿಸುವ ಮೂಲಕ ಗೌರವ ಸಮರ್ಪಸುವುದರೊಂದಿಗೆ ಸರಳವಾಗಿ ಆಚರಿಸಲಾಯಿತು. 

           ಗದಗ ಶಾಸಕ ಎಚ್.ಕೆ.ಪಾಟೀಲ ಹಾಗೂ ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಎಂ.ಸಿ.ಎ. ನಿಗಮದ ಅಧ್ಯಕ್ಷ ಎಂ.ಎಸ್. ಕರಿಗೌಡ್ರ, ಅಪರ ಜಿಲ್ಲಾಧಿಕಾರಿ  ಮಾರುತಿ ಎಂ.ಪಿ. ಅವರುಗಳು ಚೆನ್ನಮ್ಮ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಪೂಜೆ ಸಲ್ಲಿಸಿದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿದ್ದಪ್ಪ ಪಲ್ಲೇದ, ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ, ಉಪವಿಭಾಗಾಧಿಕಾರಿ ಅನ್ನಪೂರ್ಣ ಮುದುಕಮ್ಮನವರ,  ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ  ವೀರಯ್ಯಸ್ವಾಮಿ, ತಹಶೀಲ್ದಾರ ಕಿಶನ್ ಕಲಾಲ, ಶಿವಲೀಲಾ ಅಕ್ಕಿ , ಜಯಶ್ರೀ ಉಗಲಾಟದ , ಕವಿತಾ ದಂಡಿನ  ಸೇರಿದಂತೆ ಸಮಾಜದ ಗಣ್ಯರು, ಹಿರಿಯರು  ಇದ್ದರು. 

         ಮೌನಾಚರಣೆ : ರಾಜ್ಯ ವಿಧಾನಸಭಾ ಉಪಾಧ್ಯಕ್ಷರಾದ ಆನಂದ ಮಹಾಮನಿ ಅವರ  ನಿಧನದ   ಹಿನ್ನೆಲೆಯಲ್ಲಿ  ಈ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಹಾಗೂ   ದೈವಾಧೀನರಾದ ಆನಂದ ಮಹಾಮನಿ ಅವರ ಆತ್ಮಕ್ಕೆ ಭಗವಂತನು ಶಾಂತಿ ಪಾಲಿಸಲೆಂದು ಎರಡು ನಿಮಿಷಗಳ ಕಾಲ ಮೌನಾಚರಣೆಯನ್ನು ಆಚರಿಸಲಾಯಿತು.  

        ಕಾರ್ಯಕ್ರಮಕ್ಕೂ ಮುನ್ನ ನಗರದಲ್ಲಿನ ಕಿತ್ತೂರು ಚೆನ್ನಮ್ಮ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.