ವಿಜೃಂಭಣೆಯಿಂದ ಜರುಗಿದ ವೀರಭದ್ರೇಶ್ವರ ರಥೋತ್ಸವ
Veerabhadreshwara chariot festival celebrated with grandeur
ಯರಗಟ್ಟಿ, 04 : ಉತ್ತರ ಕರ್ನಾಟಕದ ಧರ್ಮಸ್ಥಳದ ಎಂಬ ಖ್ಯಾತಿ ಹೊಂದಿರುವ ಗೊಡಚಿ ಕ್ಷೇತ್ರದ ಶ್ರೀ ವೀರಭದ್ರೇಶ್ವರ ರಥೋತ್ಸವವು ಹೊಸ್ತಿಲ ಹುಣ್ಣಿಮೆ ದಿನ ಗುರುವಾರ ಅತ್ಯಂತ ವಿಜೃಂಭಣೆಯಿಂದ ಜರುಗಿತು. ಪ್ರತಿ ಸಲದಂತೆ ಈ ಸಲವೂ ಗುರುವಾರ ಸಂಜೆ 5ಕ್ಕೆ ವೀರಭದ್ರೇಶ್ವರನ ರಥೋತ್ಸವ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ಜರುಗಿತು. ಈ ನಿಟ್ಟಿನಲ್ಲಿ ರಾತ್ರಿಯಿಂದಲೇ 11 ಜನ ಶಾಸ್ತ್ರಿಗಳಿಂದ ವೀರಭದ್ರ ದೇವರು, ಭದ್ರಕಾಳಿ ಮಾತೆಗೆ ಮಹಾಮಸ್ತಕಾಭಿಷೇಕ, ಸಹಸ್ರ ಬಿಲ್ವಾರ್ಚನೆ, ಅಮ್ಮನಿಗೆ ಕುಂಕುಮಾರ್ಚನೆ, ಮಹಾ ಮಂಗಳಾರತಿ ಕಾರ್ಯಕ್ರಮಗಳು ಜರುಗಿದವು.
ಕಲಿಯುಗದಲ್ಲಿಯೂ ನಂಬಿದ ಭಕ್ತರ ಇಷ್ಟಾರ್ಥಗಳನ್ನು ಈಡೇರಿಸಬಲ್ಲ ದೈವಾದಿ ಪುರಷನಾಗಿ ಪ್ರಸಿದ್ದಿ ಪಡೆದು ಭಕ್ತರ ಮನದಲ್ಲಿ ಮನೆ ಮಾಡಿರುವ ವೀರಭದ್ರನ ಜಾತ್ರೆ ಈ ಭಾಗದಲ್ಲಿಯೇ ಖ್ಯಾತಿ ಪಡೆದಿದೆ. ಗೊಡಚಿಯ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ನಿರಂತರ ಅನ್ನದಾಸೋಹ ನಡೆಸುತ್ತ ಉತ್ತರ ಕರ್ನಾಟಕದ ಧರ್ಮಸ್ಥಳ ಎಂಬ ಹೆಗ್ಗಳಿಕೆಗೆ ಈ ದೇವಸ್ಥಾನವು ಪಾತ್ರವಾಗಿದೆ.ಈ ವೇಳೆ ನಂದಿಕೋಲು, ವೀರಗಾಸೆ ಪುರವಂತರ ಕುಣಿತ, ಸಕಲವಾದ್ಯ ಗೋಷ್ಠಿಗಳೊಂದಿಗೆ ಜರುಗಿತು.
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್ 