ಶ್ರೇಷ್ಠ ಉದ್ಯಮಿ ಪ್ರಶಸ್ತಿಗೆ ವೀರಣ್ಣ ಹಾಲಪ್ಪ ಪವಾಡದವರ ಆಯ್ಕೆ
Veeranna Halappa Pavadadavar selected for the 'Outstanding Entrepreneur' award
ಗದಗ, ಆ.12: ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ಉದ್ಯಮ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ ಲಕ್ಷ್ಮೇಶ್ವರ ತಾಲ್ಲೂಕಿನ ಶಿಗ್ಲಿ ಗ್ರಾಮದ ವೀರಣ್ಣ ಹಾಲಪ್ಪ ಪವಾಡದವರನ್ನು ಗದಗ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಯ ವತಿಯಿಂದ **‘ಶ್ರೇಷ್ಠ ಉದ್ಯಮಿ ಪ್ರಶಸ್ತಿ’**ಗೆ ಆಯ್ಕೆ ಮಾಡಲಾಗಿದೆ.
ವೀರಣ್ಣ ಪವಾಡದವರು ನೇಕರ ಕುಟುಂಬದ ಹಿನ್ನೆಲೆಯಿಂದ ಬಂದಿದ್ದು, ಬಾಲ್ಯದಲ್ಲಿಯೇ ನೇಕಾರಿಕೆಯಲ್ಲಿ ತೊಡಗಿಸಿಕೊಂಡರು. ಬಳಿಕ ವಿದ್ಯುತ್ ಮಗ್ಗಗಳನ್ನು ಸ್ಥಾಪಿಸಿ ಹಲವು ಕಾರ್ಮಿಕರಿಗೆ ಉದ್ಯೋಗಾವಕಾಶ ಕಲ್ಪಿಸುವ ಮೂಲಕ ನೇಕಾರ ಕುಟುಂಬಗಳಿಗೆ ನೆರವಾಗಿದ್ದಾರೆ. ಶಿಗ್ಲಿಯಲ್ಲಿ ತಯಾರಾಗುವ ಸೀರೆಗಳಿಗೆ ರಾಜ್ಯದ ವಿವಿಧೆಡೆ ಬೇಡಿಕೆ ಇರುವಂತೆ ಮಾಡುವಲ್ಲಿ ಅವರ ಪಾತ್ರವೂ ಮಹತ್ವದ್ದಾಗಿದೆ.
ಉದ್ಯಮಿಯಾಗಿ ಮಾತ್ರವಲ್ಲದೆ ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲೂ ವೀರಣ್ಣ ಅವರು ಸಕ್ರಿಯವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಶಿಗ್ಲಿ ಸಮೀಪದ ಮುಕ್ತಿಮಂದಿರ ಧರ್ಮಕ್ಷೇತ್ರದ ಸಂಸ್ಥಾಪಕರಾಗಿ ಹಾಗೂ ಬಾಳೇಹೊನ್ನೂರು ರಂಭಾಪುರಿ ಪೀಠದ ಧಾರ್ಮಿಕ ಕಾರ್ಯಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಪಂಚಾಚಾರ್ಯ ಪೀಠಗಳು ಹಾಗೂ ವಿವಿಧ ವಿರಕ್ತಮಠಗಳೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ವೀರಣ್ಣ ಅವರ ಧರ್ಮಪತ್ನಿ ನಿರ್ಮಲಾದೇವಿ ಕೂಡ ಪತಿಯೊಂದಿಗೆ ಧಾರ್ಮಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸೇವಾ ಕಾರ್ಯಗಳಲ್ಲಿ ಕೈಜೋಡಿಸಿದ್ದಾರೆ. ವಿವಿಧ ಮಠ, ದೇವಸ್ಥಾನ ಹಾಗೂ ಧಾರ್ಮಿಕ ಸಂಸ್ಥೆಗಳ ಕಾರ್ಯಕ್ರಮಗಳಲ್ಲಿ ಅವರು ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದಾರೆ.
ರಂಭಾಪುರಿ ಜಗದ್ಗುರುಗಳ ಕುರಿತು ‘ಸಮನ್ವಯಾಚಾರ್ಯ’ ಎಂಬ ಪುಸ್ತಕವನ್ನು ಪ್ರಕಟಿಸಿ ಪಂಚಾಚಾರ್ಯರ ತತ್ವಗಳನ್ನು ಜನರಿಗೆ ಪರಿಚಯಿಸುವ ಕಾರ್ಯವನ್ನೂ ವೀರಣ್ಣ ಪವಾಡದವರು ಮಾಡಿದ್ದಾರೆ. ತಮ್ಮ ತಂದೆ ದಿ. ಹಾಲಪ್ಪ ಪವಾಡದವರ ಕುರಿತು ‘ಕಾಯಕ ಜೀವಿ’ ಎಂಬ ಕೃತಿಯನ್ನು ಪ್ರಕಟಿಸಿ ಪಿತೃಪ್ರೇಮ ಮೆರೆದಿದ್ದಾರೆ.
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 