ವೀರಶೈವ ಲಿಂಗಾಯತ ಮಹಾಸಭಾದ ಸದಸ್ಯತ್ವ ನೋಂದಣಿ ಅಭಿಯಾನ: ಕೆ.ಬಿ.ಶ್ರೀನಿವಾಸರೆಡ್ಡಿ

Veerashaiva Lingayat Mahasabha Membership Registration Campaign: KB Srinivasa Reddy

ಕೊಪ್ಪಳ 29: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಜ್ಯದ 31 ಜಿಲ್ಲೆಗಳಲ್ಲಿ 28 ಜಿಲ್ಲೆಗಳಲ್ಲಿ ಜಿಲ್ಲಾ ಸಮಿತಿಯನ್ನು ರಚಿಸಲಾಗಿದೆ,ಕೊಪ್ಪಳ ಜಿಲ್ಲೆಯ ಯುವ ಘಟಕ ಹಾಗೂ ಜಿಲ್ಲಾ ಯುವ ಮಹಿಳಾ ಘಟಕ ಹಾಗೂ ತಾಲೂಕ ಯುವ ಮತ್ತು ಮಹಿಳಾ ಘಟಕಗಳನ್ನು ರಚಿಸುವ ಮತ್ತು ಸದಸ್ಯತ್ವ ನೋಂದಣಿ ಅಭಿಯಾನ ಕಾರ್ಯಕ್ರಮಕ್ಕೆ ಇಂದು ನಗರದ ರೇಣುಕಾಚಾರ್ಯ ಕಲ್ಯಾಣ ಮಂಟಪದಲ್ಲಿ ಚಾಲನೆ ನೀಡಲಾಗುವುದು ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯ ಉಪಾಧ್ಯಕ್ಷ ಕೆ.ಬಿ.ಶ್ರೀನಿವಾಸ ರೆಡ್ಡಿ ಹೇಳಿದರು. 

ಅವರು ಶುಕ್ರವಾರದಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ ವೀರಶೈವ ಲಿಂಗಾಯತ ಮಹಾಸಭಾ ಸಂಸ್ಥೆಯಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಿದ್ಯಾರ್ಥಿ ನಿಲಯಗಳನ್ನು ಸ್ಥಾಪಿಸಿ ಲೋಕಾರೆ​‍್ಣ ಮಾಡಲಾಗಿದೆ, ಕೊಪ್ಪಳ ನಗರದಲ್ಲಿ  ವಿದ್ಯಾರ್ಥಿ  ವಸತಿ ನಿಲಯ ಸ್ಥಾಪಿಸಲು ಎರಡು ರಿಂದ ಮೂರು ಎಕರೆ ಸರ್ಕಾರಿ  ಜಮೀನು ಮಂಜೂರು ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು, ಬಡ ವಿದ್ಯಾರ್ಥಿನಿಯರ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲು ವಸತಿ ನಿಲಯ ಸ್ಥಾಪನೆಗೆ ಅನುಕೂಲವಾಗುತ್ತದೆ ಎಂದು  ಜಿಲ್ಲಾಧಿಕಾರಿಗಳಿಗೆ ಮಂಜೂರು ಮಾಡುವಂತೆ ಮನವಿ ಸಲ್ಲಿಸಲಾಗುವುದು ಎಂದ ಅವರು ಮಹಾಸಭಾ ವನ್ನು ಎಲ್ಲಾರ ಸಹಕಾರದೊಂದಿಗೆ  ಬಲಿಷ್ಠ ಗೊಳಿಸಲಾಗುವುದು ಎಂದರು. ಸುದ್ದಿಗೋಷ್ಠಿಯಲ್ಲಿ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಅಧ್ಯಕ್ಷ ಕಳಕನಗೌಡ ಪಾಟೀಲ್, ಪ್ರಧಾನ ಕಾರ್ಯದರ್ಶಿ ಶಿವಪುತ್ರ​‍್ಪ ಕಾಡಪ್ಪನವರ್ , ಕೊಪ್ಪಳ ತಾಲೂಕ ಅಧ್ಯಕ್ಷ ನಾಗಭೂಷಣ ಸಾಲಿಮಠ, ಜಿಲ್ಲಾ ಕಾರ್ಯದರ್ಶಿ ರಮೇಶ್ ಕವಲೂರು ಉಪಸ್ಥಿತರಿದ್ದರು.