7ರಂದು ವೀರವಿರಾಗಿಣಿ ಅಕ್ಕಮಹಾದೇವಿ ಜಯಂತಿ ಮಹೋತ್ಸವ
ಬೆಳಗಾವಿ 02: ಶಿವಬಸವನಗರ ಕಾರಂಜಿಮಠದ ಶಿವಾನುಭವ ಮಂಟಪದಲ್ಲಿ 285ನೇ ಶಿವಾನುಭವ ಹಾಗೂ ವೀರವಿರಾಗಿಣಿ ಅಕ್ಕಮಹಾದೇವಿ ಜಯಂತಿ ಮಹೋತ್ಸವ ಕಾರ್ಯಕ್ರಮವು ಸೋಮವಾರ ದಿ. 7ರಂದು ಸಾಯಂಕಾಲ 6 ಗಂಟೆಗೆ ಜರುಗುವುದು. ಕಾರ್ಯಕ್ರಮದ ಸಾನ್ನಿಧ್ಯವನ್ನು ಗುರುಸಿದ್ಧ ಮಹಾಸ್ವಾಮಿಗಳು ವಹಿಸಲಿದ್ದು, ವಿದ್ಯಾ ಹುಂಡೇಕರ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಡಾ. ವಿಜಯಲಕ್ಷ್ಮಿ ಪುಟ್ಟಿ ಅವರು ಸ್ತುತಿನಿಂದೆಗಳು ಬಂದರೆ ಮನದಲ್ಲಿ ಕೋಪವ ತಾಳದೆ ಸಮಾಧಾನಿಯಾಗಿರಬೇಕು ಎಂಬ ವಿಷಯ ಕುರಿತು ಉಪನ್ಯಾಸ ನೀಡುವರು. ಬೆಳಗಾವಿ ಮಹಾನಗರ ಪಾಲಿಕಗೆ ಉಪಮಹಾಪೌರರಾಗಿ ಆಯ್ಕೆಯಾದ ವಾಣಿ ವಿಲಾಸ ಜೋಶಿ ಹಾಗೂ ಶ್ರೀಮತಿ ಶೈಲಜಾ ಭಿಂಗೆ ಅವರಿಗೆ ಸನ್ಮಾನ ಕಾರ್ಯಕ್ರಮ ನೆರವೇರುವುದು. ಕಾರಂಜಿಮಠದ ಕುಮಾರೇಶ್ವರ ಸಂಗೀತ ಪಾಠಶಾಲೆಯ ಮಕ್ಕಳಿಂದ ಪ್ರಾರ್ಥನೆ ಜರುಗುವುದು ಎಂದು ಶ್ರೀಮಠದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.