ವಾಹನ ಡಿಕ್ಕಿ:ಕರಡಿ ಸಾವು

ತುಮಕೂರು, ನ.10:    ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಕರಡಿಯೊಂದು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಮಧುಗಿರಿ ತಾಲೂಕಿನ ನಲ್ಲೇಕಾಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ನಲ್ಲೇಕಾಮನಹಳ್ಳಿ ಬಳಿ ಕರಡಿ ರಸ್ತೆ ದಾಟುತ್ತಿದ್ದಾಗ ವಾಹನ ಡಿಕ್ಕಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯಾವ ವಾಹನ ಡಿಕ್ಕಿ ಹೊಡೆದಿದೆ ಎಂಬುದು ತಿಳಿದುಬಂದಿಲ್ಲ. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.