ವೆನಿಜುವೆಲಾ : ಭಾರತ ತೀವ್ರ ಕಳವಳ, ಮಾತುಕತೆಗೆ ಒತ್ತಾಯ
Venezuela: India expresses deep concern, urges dialogue
ನವದೆಹಲಿ: ವೆನಿಜುವೆಲಾದ ಮೇಲೆ ಅಮೆರಿಕ ನಡೆಸಿದ ದಾಳಿಗಳ ಬಗ್ಗೆ ಭಾರತ ರವಿವಾರ ತೀವ್ರ ಕಳವಳ ವ್ಯಕ್ತಪಡಿಸಿ, ಬದಲಾಗುತ್ತಿರುವ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಹೇಳಿದೆ.
ಜನವರಿ 4, 2026 ರಂದು ಬಿಡುಗಡೆಯಾದ ಪತ್ರಿಕಾ ಪ್ರಕಟಣೆಯ ಪ್ರಕಾರ, ವೆನಿಜುವೆಲಾದ ಜನರ ಯೋಗಕ್ಷೇಮ ಮತ್ತು ಸುರಕ್ಷತೆಗಾಗಿ ಸರಕಾರ ತನ್ನ ಬೆಂಬಲವನ್ನು ಪುನರುಚ್ಚರಿಸಿದೆ. ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು, ಸಂವಾದದ ಮೂಲಕ ಶಾಂತಿಯುತವಾಗಿ ಸಮಸ್ಯೆಗಳನ್ನು ಪರಿಹರಿಸಲು ಎಲ್ಲಾ ಸಂಬಂಧಪಟ್ಟವರಿಗೆ ಕರೆ ನೀಡಿದೆ.
ಕ್ಯಾರಕಾಸ್ನಲ್ಲಿರುವ ತನ್ನ ರಾಯಭಾರ ಕಚೇರಿಯು ಭಾರತೀಯ ಸಮುದಾಯದ ಸದಸ್ಯರೊಂದಿಗೆ ಸಂಪರ್ಕದಲ್ಲಿದೆ ಮತ್ತು ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುವುದನ್ನು ಮುಂದುವರಿಸುತ್ತದೆ ಎಂದು ಭಾರತ ಹೇಳಿದೆ.
ವೆನಿಜುವೆಲಾದಿಂದ ತನ್ನಲ್ಲಿಗೆ ಭಾರೀ ಪ್ರಮಾಣದಲ್ಲಿ ಮಾದಕ ದ್ರವ್ಯ ಕಳ್ಳಸಾಗಣೆಯಾಗುತ್ತಿದೆ ಎಂದು ಆರೋಪಿಸುತ್ತ ಬಂದಿದ್ದ ಅಮೆರಿಕವು ಶುಕ್ರ ವಾರ ತಡರಾತ್ರಿ ವೈಮಾನಿಕ ದಾಳಿ ನಡೆಸಿದ ಅಮೆರಿಕವು ವೆನಿಜುವೆಲಾವನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿದೆ.
ತಡರಾತ್ರಿ 2.15ರ ಸುಮಾರಿನಲ್ಲಿ ರಾಜ ಧಾನಿ ಕರಾಕಸ್ ಸಹಿತ ಹಲವು ನಗರಗಳ ಮೇಲೆ ಯುದ್ಧವಿಮಾನ, ಹೆಲಿಕಾಪ್ಟರ್ಗಳ ಮೂಲಕ ಕ್ಷಿಪಣಿ, ರಾಕೆಟ್ಗಳ ಮಳೆಯನ್ನೇ ಸುರಿಸಲಾಗಿದೆ. ಕರಾಕಸ್ನಲ್ಲಿ ಕನಿಷ್ಠ 7 ಸ್ಫೋಟಗಳು ಸಂಭವಿಸಿವೆ. ಅಮೆರಿಕದ ಪಡೆಗಳು ವೆನಿಜುವೆಲಾ ಅಧ್ಯಕ್ಷ ನಿಕೋಲಸ್ ಮಡುರೋ ಅವರ ಮನೆಗೇ ನುಗ್ಗಿ ಅವರ ಪತ್ನಿಯ ಸಮೇತ ಬಂಧಿಸಿ ಕರೆದೊಯ್ದಿದೆ.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 