ಡಿ.6 ರಂದು ವೆಂಕಟೇಶ್ವರ ಜಾತ್ರಾ ಮಹೋತ್ಸವ: ನೂತನ ಕಟ್ಟಡ ಉದ್ಘಾಟನೆ

Venkateswara Jatra Mahotsava on December 6: Inauguration of new building

ದೇವರಹಿಪ್ಪರಗಿ 04 : ತಾಲೂಕಿನ ಮಣೂರ ಗ್ರಾಮದ ಹತ್ತಿರ ಇರುವ  ವೆಂಕಟೇಶ್ವರ ದೇವಾಲಯದ ನೂತನ ಕಟ್ಟಡ ಉದ್ಘಾಟನೆ ನೆರವೇರಿಸಿದ್ದು. ಪ್ರತಿ ವರ್ಷದಂತೆ ಈ ವರ್ಷವೂ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ಆಚರಿಸಲು ಸಕಲ ಸಿದ್ಧತೆ ಪೂರ್ಣಗೊಂಡಿದೆ.ಡಿ.6 ಶುಕ್ರವಾರ ಬೆಳಗ್ಗೆ 10 ಗಂಟೆಗೆ ಜಾತ್ರಾ ಮಹೋತ್ಸವದ ಪ್ರಯುಕ್ತ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳು ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ವೆಂಕಟೇಶ್ವರ ದೇವಾಸ್ಥಾನದ ಸೇವಾ ಸಮಿತಿಯ ಅಧ್ಯಕ್ಷರಾದ ಎಲ್‌.ಆರ್‌.ಅಂಗಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಸ್ಥಳೀಯ ಹಿರೇಮಠದ ಷ.ಬ್ರ  ಮರುಳಾರಾಧ್ಯ ಶಿವಾಚಾರ್ಯರು ವಹಿಸಲಿದ್ದಾರೆ. ಸಾನಿಧ್ಯವನ್ನು ತಿಂಥಣಿಯ ವೀರಗೋಟದ ಪರಮಪೂಜ್ಯ  ಅಡವಿ ಲಿಂಗ ಮಹಾರಾಜರರು. ಬಾಲಗಾವಿ ಗುರುದೇವ ಆಶ್ರಮದ ಅಮೃತಾನಂದ ಮಹಾಸ್ವಾಮಿಗಳು ಹಾಗೂ ತಳೆವಾಡದ ಪ.ಪೂ ಅಭಿನವ ಸಿದ್ದರತ್ನ ಮದಗೊಂಡೇಶ್ವರ ಮಹಾರಾಜರು ವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಣೂರ ಗ್ರಾಮದ ವೆಂಕಟೇಶ್ವರ ದೇವಸ್ಥಾನ ಸೇವಾ ಸಮಿತಿಯ ಅಧ್ಯಕ್ಷರಾದ ಎಲ್‌.ಆರ್‌.ಅಂಗಡಿ ವಹಿಸಲಿದ್ದು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ವಿಜಯಪುರ ಲೋಕಸಭಾ ಸದಸ್ಯರು ಹಾಗೂ ಮಾಜಿ ಕೇಂದ್ರ ಸಚಿವರಾದ ರಮೇಶ ಜಿಗಜಿಣಗಿ, ಸ್ಥಳೀಯ ಶಾಸಕರಾದ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ, ಜಿಲ್ಲಾಧಿಕಾರಿ ಟಿ. ಭೂಬಾಲನ, ಸಿಇಒ ರಿಷಿ ಆನಂದ, ಎಸ್ ಪಿ ಲಕ್ಷ್ಮಣ್ಣ ನಿಂಬಾಳ್ಕರ್, ಗ್ರಾಪಂ ಅಧ್ಯಕ್ಷರು ವಹಿಸಲಿದ್ದು. ಅದ್ದೂರಿ ಜಾತ್ರಾ ಮಹೋತ್ಸವದಲ್ಲಿ ಸುತ್ತಮುತ್ತಲಿನ ಗ್ರಾಮದ ಭಕ್ತಾದಿಗಳು ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಈ ಮೂಲಕ ತಿಳಿಸಿದ್ದಾರೆ.ಇದೇ ಸಂದರ್ಭದಲ್ಲಿ ಮುಖಂಡರಾದ ಎಸ್‌.ಎನ್‌.ಬಸವರಡ್ಡಿ,ಪಿ.ಕೆ.ನಾಯಕ ಹಾಗೂ ಸೇವಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.