ವೆಂಕಟೇಶ್ವರ ಸ್ವಾಮಿ ಕಲ್ಯಾಣ ಮಹೋತ್ಸವ
Venkateswara Swamy Kalyana Mahotsav
ಕಂಪ್ಲಿ 28: ಪಟ್ಟಣದ ಮುಖ್ಯ ರಸ್ತೆಯಲ್ಲಿರುವ ಶ್ರೀ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ (ಗುಡ್ಡದ ತಿಮ್ಮಪ್ಪ) ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ 10 ದಿನಗಳ ಕಾಲ ಪ್ರತಿದಿನ ಸ್ವಾಮಿಗೆ ವಿವಿಧ ಉತ್ಸವಗಳನ್ನು ಆಯೋಜಿಸಿದ್ದು, ಶನಿವಾರ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿಯ ಕಲ್ಯಾಣ ಮಹೋತ್ಸವ ಸಡಗರ ಸಂಭ್ರಮಗಳಿಂದ ಜರುಗಿತು.
ಪುರಾತನ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿಯ ಶಿಲಾ ಮೂರ್ತಿಗೆ ವಿವಿಧ ಅಭಿಷೇಕ, ವಿಶೇಷ ಅಲಂಕಾರ ಮಾಡಿ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು. ಉತ್ಸವ ಮೂರ್ತಿಗಳಾದ ಭೂದೇವಿ,ಶ್ರೀದೇವಿ ಸಹಿತ ವೆಂಟಕಟೇಶ್ವರ ಸ್ವಾಮಿಯ ಕಲ್ಯಾಣ ಮಹೋತ್ಸವವು ದೇವಸ್ಥಾನ ಆರ್ಚಕರು ಹಾಗೂ ದೇವಸ್ಥಾನ ಸಮಿತಿಯ ಪದಾಧಿಕಾರಿಗಳ ನೇತ್ರುತ್ವದಲ್ಲಿ ಸಂಭ್ರಮದಿಂದ ಜರುಗಿತು. ಮುರುಳಿ ಮತ್ತು ಅಚ್ಚುತ್ತಾ ದಂಪತಿಗಳು ಕಲ್ಯಾಣ ಮಹೋತ್ಸವ ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಅರ್ಚಕ ಬೋಸಿ ಪಾಂಡುರಂಗಾಚಾರ್, ಮುಖಂಡರಾದ ಶ್ರೀಧರ್ ಶ್ರೇಷ್ಠಿ, ರಾಮಲಿಂಗಯ್ಯ, ಬಾಲವೆಂಕಟೇಶ, ದೇವಸ್ಥಾನದ ಅಧ್ಯಕ್ಷರು, ಪದಾಧಿಕಾರಿಗಳು, ಅರ್ಯವ್ಯೆಶ್ಯ ಸಮಾಜ, ಬ್ರಾಹ್ಮಣ ಸಮಾಜ ಸೇರಿದಂತೆ ವಿವಿಧ ಸಮಾಜಗಳ ಮುಖಂಡರು ಭಾಗವಹಿಸಿದ್ದರು. ಮಹಾಮಂಗಳಾರತಿನಂತರ ಪ್ರಸಾದ ವಿತರಣೆ ಜರುಗಿತು.
ಲಕ್ಷ್ಮೀವೆಂಕಟೇಶ್ವರ ಸ್ವಾಮಿಯ ಕಲ್ಯಾಣ ಮಹೋತ್ಸವದ ಅಂಗವಾಗಿ ಸಕಲ ಸದ್ಭಕ್ತರಿಗೆ ಅನ್ನಾಂತರೆ್ಣ ಜರುಗಿತು.ಭೂದೇವಿ, ಶ್ರೀದೇವಿ ಸಹಿತ ವೆಂಕಟೇಶ್ವರ ಸ್ವಾಮಿಯ ಅದ್ದೂರಿ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಯಲ್ಲಿ ಸಕಲ ಮಂಗಳವಾದ್ಯಗಳೊಂದಿಗೆ ಜರುಗಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 