ನಿಖರ ಫಲಾನುಭವಿಗಳ ಮಾಹಿತಿ ಪಡೆಯಲು ಪರಿಶೀಲನೆ : ಸಚಿವ ಕೃಷ್ಣ ಭೈರೇಗೌಡ ಮಾಹಿತಿ
Verification to obtain accurate beneficiary information: Minister Krishna Bhairegowda information
ಸಾಮಾಜಿಕ ಭದ್ರತಾ ಯೋಜನೆಗಳ ಫಲಾನುಭವಿಗಳ ಆಧಾರ್ ಜೋಡಣೆ ಸಂದರ್ಭದಲ್ಲಿ ನಿಗದಿ ಪಡಿಸಿದ ವಯೋಮಿತಿಗೂ ಕಡಿಮೆ ವಯಸ್ಸಿನವರು ಸೌಲಭ್ಯ ಪಡೆಯುತ್ತಿದ್ದಾರೆ. ಇದರೊಂದಿಗೆ ಸುಮಾರು 10 ಸಾವಿರಕ್ಕೂ ಅಧಿಕ ಆದಾಯ ತೆರಿಗೆ ಪಾವತಿದಾರರು, ಹೆಚ್.ಆರ್.ಎಂ.ಎಸ್‍ನಲ್ಲಿ ಮಾಹಿತಿ ಇರುವ ಸರ್ಕಾರಿ ನೌಕರರು ಸಹ ಸಾಮಾಜಿಕ ಭದ್ರತಾ ಯೋಜನೆಯ ಸೌಲಭ್ಯ ಪಡೆಯುತ್ತಿರುವುದು ಗಮನಕ್ಕೆ ಬಂದಿದೆ. ಅಕ್ರಮ ಫಲಾನುಭವಿಗಳ ಪರಿಶೀಲನೆ ಕಾರ್ಯ ಪ್ರಗತಿಯಲ್ಲಿದೆ. ಕೂಡಲೇ ಪತ್ತೆ ಹಚ್ಚಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಸಚಿವ ಕೃಷ್ಣ ಭೈರೇಗೌಡ ಹೇಳಿದರು.
ವೃದ್ದಾಪ್ಯ ವೇತನ, ಸಂಧ್ಯಾ ಸುರಕ್ಷಾ ಯೋಜನೆಗೆ ಅರ್ಜಿಸಲ್ಲಿಸುವ ಆದಾಯ ಮಿತಿಯನ್ನು ಬಿ.ಪಿ.ಎಲ್. ಕಾರ್ಡು ಮಾದರಿಯಲ್ಲಿ 1.2 ಲಕ್ಷಕ್ಕೆ ಹೆಚ್ಚಿಸುವಂತೆ ಮನವಿಗಳು ಕೇಳಿಬಂದಿವೆ. ಸದ್ಯ ಸರ್ಕಾರದ ಗೃಹಲಕ್ಷ್ಮಿ ಸೇರಿದಂತೆ ಪಂಚ ಗ್ಯಾರಂಟಿ ಹಾಗೂ ಇತರೆ ಯೋಜನೆಗಳಿಂದಲೇ ಪ್ರತಿ ಕುಟುಂಬಕ್ಕೆ 32,000 ಕ್ಕಿಂತಲೂ ಹೆಚ್ಚು ಹಣ ಜಮೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ರಾಜ್ಯದಲ್ಲಿ ಕುಟುಂಬದ ಆದಾಯಮಿತಿ ನಿಖರವಾಗಿ ನಿರ್ಧರಿಸುವ ವ್ಯವಸ್ಥೆ ಜಾರಿಗೊಳಿಸಿದ ಬಳಿಕ ವೃದ್ದಾಪ್ಯ ವೇತನ, ಸಂಧ್ಯಾ ಸುರಕ್ಷಾ ಯೋಜನೆಗೆ ಆದಾಯ ಮಿತಿ ಹೆಚ್ಚಿಸುವುದಾಗಿ ಸಚಿವ ಕೃಷ್ಣ ಭೈರೇಗೌಡ ಅವರು ಶಾಸಕ ಡಾ.ಭರತ್ ಶೆಟ್ಟಿ ವೈ ಅವರಿಗೆ ಉತ್ತರಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 