ಹುತಾತ್ಮ ಸ್ಮರಣಾರ್ಥ ಜಿಲ್ಲಾಡಳಿತದಿಂದ ಮೌನಾಚರಣೆ

ಹಾವೇರಿ30: ಭಾರತದ ಸ್ವಾತಂತ್ರ್ಯಕ್ಕಾಗಿ ಪ್ರಾಣತೆತ್ತು ಹುತಾತ್ಮರಾದವರ ಸ್ಮರಣಾರ್ಥವಾಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರ ನೇತೃತ್ವದಲ್ಲಿ ಮೌನಾಚರಣೆ ನಡೆಸಲಾಯಿತು.

ಮಹಾತ್ಮಗಾಂಧೀಜಿ ಅವರು ಹುತಾತ್ಮರಾದ ದಿನದ ಹಾಗೂ ಭಾರತದ ಸ್ವಾತಂತ್ರ್ಯಕ್ಕಾಗಿ ಪ್ರಾಣತೆತ್ತು ಹುತಾತ್ಮರಾದವರ ಸ್ಮರಣಾರ್ಥವಾಗಿ ಮೌನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಇದೇ ಸಂದರ್ಭದಲ್ಲಿ ಗಾಂಧೀಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಲಾಯಿತು. ಇದೇ ಸಂದರ್ಭದಲ್ಲಿ  ಗಾಂಧೀಜಿಯವರಿಗೆ ಪ್ರೀಯವಾದ ಹಾಡುಗಳ ಭಜನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಗಾಯಕಿ ಶ್ರೀಮತಿ ವಂದನಾ ಭಾಸ್ಕರ್ ಹಾಗೂ ತಂಡದವರಿಂದ ಗಾಂಧೀಜಿ ಅವರಿಗೆ ಪ್ರಿಯವಾದ ಗೀತೆಗಳ ಗಾಯನ ಕಾರ್ಯಕ್ರಮಮ ಜರುಗಿತು.

ಅಪರ ಜಿಲ್ಲಾಧಿಕಾರಿ ಯೋಗೇಶ್ವರ, ಚುನಾವಣಾ ತಹಶೀಲ್ದಾರ ಪ್ರಶಾಂತ ನಾಲವಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿದರ್ೆಶಕಿ ಶ್ರೀಮತಿ ಶಶಿಕಲಾ ಹುಡೇದ,  ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು ಶಾಲೆಗೆ ಕೀತರ್ಿ ತನ್ನಿ: ಶೋಭಾ