ಬೆಳಗಾವಿಗೆ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಭೇಟಿ ಮಾ.18 ರಂದು ಅಗತ್ಯ ಸಿದ್ಧತೆ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ

ಬೆಳಗಾವಿಗೆ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಭೇಟಿ ಮಾ.18 ರಂದು  ಅಗತ್ಯ ಸಿದ್ಧತೆ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ

ಬೆಳಗಾವಿ: 08 : ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಲು ಭಾರತದ ಘನತೆವೆತ್ತ ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರು ಮಾರ್ಚ 18 ರಂದು ಆಗಮಿಸಲಿರುವುದರಿಂದ ಆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾನುಕೂಲ ಉಂಟಾಗದಂತೆ ಶಿಷ್ಟಾಚಾರ ಪ್ರಕಾರ ಎಲ್ಲ ರೀತಿಯ ಕ್ರಮಕೈಗೊಳ್ಳಬೇಕು ಎಂದು ಪ್ರಾದೇಶಿಕ ಆಯುಕ್ತರಾದ ಪಿ.ಎ.ಮೇಘಣ್ಣವರ ಹಾಗೂ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬಿ.ಬೊಮ್ಮನಹಳ್ಳಿ ಅವರು ವಿವಿಧ ಇಲಾಖೆಯ ಅಧಿಕಾರಿಗಳಿಗೆ ನಿದರ್ೇಶನ ನೀಡಿದರು.

ಮಾನ್ಯ ಉಪ ರಾಷ್ಟ್ರಪತಿ ಅವರ ಭೇಟಿ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ (ಮಾ.8) ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಘನತೆವೆತ್ತ ಉಪ ರಾಷ್ಟ್ರಪತಿ ಹಾಗೂ ರಾಜ್ಯಪಾಲರು ಆಗಮಿಸಲಿರುವುದರಿಂದ ಯಾವುದೇ ರೀತಿಯ ಗೊಂದಲಕ್ಕೆ ಆಸ್ಪದ ನೀಡದಂತೆ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ವಿಟಿಯು  ಪರಸ್ಪರ ಸಮನ್ವಯದೊಂದಿಗೆ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.

ರಸ್ತೆ ದುರಸ್ತಿಗೆ ಸೂಚನೆ:

   ವಿಮಾನ ನಿಲ್ದಾಣದಿಂದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದವರೆಗಿನ ಮಾರ್ಗವನ್ನು ತಕ್ಷಣ ದುರಸ್ತಿಗೊಳಿಸಬೇಕು. ಪಾಲಿಕೆ, ಲೋಕೋಪಯೋಗಿ ಇಲಾಖೆ, ರಾಷ್ಟ್ರೀಯ ಹೆದ್ದಾರಿ ಹೀಗೆ ವಿವಿಧ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ರಸ್ತೆಯನ್ನು ತಕ್ಷಣವೇ ದುರಸ್ತಿಗೊಳಿಸಬೇಕು ಹಾಗೂ ಅಡೆತಡೆ ಮುಕ್ತ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕು ಎಂದು ತಿಳಿಸಿದರು.

ವೇದಿಕೆಯ ವ್ಯವಸ್ಥೆಯನ್ನು ಲೋಕೋಪಯೋಗಿ ಇಲಾಖೆಯ ಎಂಜಿನಿಯರ್ಗಳು ಪರಿಶೀಲಿಸಬೇಕು. ಅದೇ ರೀತಿ ವಿದ್ಯುಚ್ಛಕ್ತಿ ವ್ಯವಸ್ಥೆ ಹಾಗೂ ಪಯರ್ಾಯ ವ್ಯವಸ್ಥೆಯನ್ನು ಸಮರ್ಪಕವಾಗಿರುವ ಬಗ್ಗೆ ಹೆಸ್ಕಾಂ ಅಧಿಕಾರಿಗಳು ಪರಿಶೀಲಿಸಿ, ಪ್ರಮಾಣಪತ್ರವನ್ನೂ ನೀಡಬೇಕು.

ಬಿಎಸ್ಎನ್ಎಲ್ ವತಿಯಿಂದ ಸೂಕ್ತ ದೂರವಾಣಿ ಸಂಪರ್ಕ ವ್ಯವಸ್ಥೆ, ಬ್ರಾಡಬ್ಯಾಂಡ್ ಸಂಪರ್ಕ ಕಲ್ಪಿಸಬೇಕು. ವಿಮಾನ ನಿಲ್ದಾಣ, ಕಾರ್ಯಕ್ರಮ ಸ್ಥಳದಲ್ಲಿ ತುತರ್ು ವೈದ್ಯಕೀಯ ವ್ಯವಸ್ಥೆ, ವೈದ್ಯರ ತಂಡ, ಅಂಬ್ಯುಲೆನ್ಸ್ಗಳನ್ನು ನಿಯೋಜಿಸಬೇಕು. ತುತರ್ು ಚಿಕಿತ್ಸೆಗೆ ಆಸ್ಪತ್ರೆಯನ್ನು ಗುರುತಿಸಿ ಅಲ್ಲಿಯೂ ಕೂಡ ವೈದ್ಯರು ಹಾಗೂ ಅಗತ್ಯ ಸೌಲಭ್ಯ ಕಲ್ಪಿಸುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.

ಆಹಾರ ಸುರಕ್ಷತೆ, ಭದ್ರತೆ ಮತ್ತು ಶಿಷ್ಟಾಚಾರ ಪಾಲನೆಗೆ ಪ್ರತ್ಯೇಕ ಅಧಿಕಾರಿಗಳ ತಂಡಗಳನ್ನು ನಿಯೋಜಿಸುವಂತೆ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರು ತಿಳಿಸಿದರು.

ಪೊಲೀಸ್ ಆಯುಕ್ತ ಲೋಕೇಶಕುಮಾರ್ ಅವರು ಮಾತನಾಡಿ, ಭದ್ರತೆಯ ದೃಷ್ಟಿಯಿಂದ ಮಾಧ್ಯಮ ಸೇರಿದಂತೆ ವಿವಿಧ ಬಗೆಯ ಕಾರ್ಯನಿರ್ವಹಿಸಲಿರುವ ಅಧಿಕಾರಿ/ಸಿಬ್ಬಂದಿಗೆ ಸೂಕ್ತ ಪ್ರವೇಶಪತ್ರಗಳನ್ನು ವಿತರಿಸಲಾಗುವುದು ಎಂದು ತಿಳಿಸಿದರು.

ಇದಕ್ಕೂ ಮುಂಚೆ ಮಾತನಾಡಿದ ವಿಟಿಯು ಕುಲಸಚಿವ ಸತೀಶ್ ಅಣ್ಣಿಗೇರಿ ಅವರು, ಘನತೆವೆತ್ತ ಉಪ ರಾಷ್ಟ್ರಪತಿಗಳ ಕಚೇರಿಯಿಂದ ಈಗಾಗಲೇ ಕಾರ್ಯಕ್ರಮ ಪಟ್ಟಿ ಅನುಮೋದನೆಗೊಂಡಿದೆ. ಅಂದು ಬೆಳಿಗ್ಗೆ 9.50 ಗಂಟೆಗೆ ವಿಶ್ವವಿದ್ಯಾಲಯಕ್ಕೆ ಆಗಮಿಸಲಿರುವ ಉಪ ರಾಷ್ಟ್ರಪತಿಗಳು 10 ಗಂಟೆಗೆ ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಿ, 11.30 ಗಂಟೆಗೆ ಹಿಂದಿರುಗಲಿದ್ದಾರೆ ಎಂದು ವಿವರಿಸಿದರು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ಡಾ.ರಾಜೇಂದ್ರ ಕೆ.ವಿ., ಪೊಲೀಸ್ ವರಿಷ್ಠಾಧಿಕಾರಿ ಸುಧೀರಕುಮಾರ್ ರೆಡ್ಡಿ, ಡಿಸಿಪಿ ಸೀಮಾ ಲಾಟ್ಕರ್, ಮಹಾನಗರ ಪಾಲಿಕೆ ಆಯುಕ್ತರಾದ ಇಬ್ರಾಹಿಂ ಮೈಗೂರ, ಅಪರ ಜಿಲ್ಲಾಧಿಕಾರಿ ಡಾ.ಬೂದೆಪ್ಪ ಹೆಚ್.ಬಿ., ವಾಯುಪಡೆಯ ಅಧಿಕಾರಿ ಅಲೋಕ್, ಗುಪ್ತಚರ ಇಲಾಖೆಯ ಎಸ್ಪಿ ಚನ್ನಬಸವಣ್ಣ, ಉಪ ವಿಭಾಗಾಧಿಕಾರಿ ಡಾ.ಕವಿತಾ ಯೋಗಪ್ಪನವರ, ಲೋಕೋಪಯೋಗಿ, ಆರೋಗ್ಯ, ಅಗ್ನಿಶಾಮಕ, ಆಹಾರ, ಸಾಂಬ್ರಾ ವಿಮಾನ ನಿಲ್ದಾಣ, ಬಿಎಸ್ಎನ್ಎಲ್, ಹೆಸ್ಕಾಂ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.