ದೌರ್ಜನ್ಯಕ್ಕೊಳಗಾದವರು ಕಾನೂನು ನೆರವು ಪಡೆದುಕೊಳ್ಳಬೇಕು- ನ್ಯಾ. ಹಿರೇಕುಡಿ
Victims of violence should seek legal assistance - Justice Hirekudi
ಬ್ಯಾಡಗಿ 11 : ಮಹಿಳೆಯರು ಮಕ್ಕಳು ಹಾಗೂ ತುಳಿತಕ್ಕೆ ಒಳಗಾದ ಸಮುದಾಯ ಸಾಮಾಜಿಕ ಆರ್ಥಿಕವಾಗಿ ಹಿಂದುಳಿದವರು ಕಾನೂನು ನೆರವು ಪಡೆಯಬಹುದಾಗಿದೆ. ದೌರ್ಜನ್ಯಕ್ಕೆ ಒಳಗಾದ ಯಾವುದೇ ಸಮುದಾಯ ವ್ಯಕ್ತಿಗಳು ಕಾನೂನು ನೆರವು ಪಡೆಯಬಹುದಾಗಿದೆ ಎಂದು ಜೆ ಎಂ ಎಫ್ ಸಿ ನ್ಯಾಯಾಲಯದ ಹಿರಿಯ ದಿವಾಣಿ ನ್ಯಾಯಾಧೀಶ ಅಮೂಲ್ ಜೆ ಹಿರೇ ಕುಡಿ ಹೇಳಿದರು. ಇಂದು ತಾಲೂಕು ಕಾನೂನು ಸೇವೆಗಳ ಸಮಿತಿ ತಾಲೂಕು ನ್ಯಾಯವಾದಿಗಳ ಸಂಘ ಹಾಗೂ ಶಿಕ್ಷಣ ಇಲಾಖೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ಕಿತ್ತೂರ್ ರಾಣಿ ಚೆನ್ನಮ್ಮ ಶಾಲೆಯಲ್ಲಿ ನಡೆದ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ಅಂಗವಾಗಿ ಸಾಕ್ಷರತಾ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದವರು.
ಉಚಿತ ಕಾನೂನು ಅರಿವು ಮತ್ತು ನೆರವಿನ ಲಭ್ಯತೆಯ ಬಗ್ಗೆ ಜನರಿಗೆ ತಿಳಿಸಲು ರಾಷ್ಟ್ರೀಯ ಕಾನೂನು ಸೇವೆಗಳ ದಿನವನ್ನು ದೇಶಾದ್ಯಂತ ಆಚರಿಸಲಾಗುತ್ತಿದೆ ಪ್ರತಿ ವರ್ಷ ನವೆಂಬರ್ 9ರಂದು ರಾಷ್ಟ್ರೀಯ ಕಾನೂನು ಸೇವೆಗಳ ದಿನವನ್ನು ಆಚರಿಸುತ್ತದೆ 1993 ರಿಂದ ರಾಷ್ಟ್ರೀಯ ಕಾನೂನು ಸೇವೆಗಳ ದಿನ ಆಚರಿಸುತ್ತಾ ಬರಲಾಗುತ್ತಿದೆ ಎಂದು ತಿಳಿಸಿದರು.
ದಿವಾಣಿ ನ್ಯಾಯಾಧೀಶ ಸುರೇಶ್ ವಗ್ಗನವರ್ ಮಾತನಾಡಿ ಕಾನೂನು ಸಾಮಾನ್ಯ ನಾಗರಿಕನು ಕೂಡ ಸಂವಿಧಾನ ನೀಡಿದ ತಮ ಹಕ್ಕುಗಳನ್ನು ಮತ್ತು ಕರ್ತವ್ಯಗಳ ಬಗ್ಗೆ ಮಾಹಿತಿ ತಿಳಿದಿರಬೇಕು ಪ್ರತಿಯೊಬ್ಬರೂ ಹಕ್ಕುಗಳ ಪಡೆಯಬೇಕು ಅದರಂತೆ ಈ ಕರ್ತವ್ಯ ಕೂಡ ಪಾಲನೆ ಮಾಡಬೇಕು. ನ್ಯಾಯವಾದಿ ಸಂಘದ ಅಧ್ಯಕ್ಷ ರಾಜು ಶಿಡೇನೂರು ಮಾತನಾಡಿ ಎಲ್ಲರಿಗೂ ಕಾನೂನಿನ ಮೂಲಕ ದೊರೆಯಬೇಕಾದ ಸೌಲಭ್ಯಗಳನ್ನು ದೊರಕಿಸಿಕೊಡಲು ಕಾನೂನು ಸೇವಾ ಪ್ರಾಧಿಕಾರ ಶ್ರಮಿಸುತ್ತಿದೆ ಎಂದು ತಿಳಿಸಿದರು.ಕಾರ್ಯಕ್ರಮದಲ್ಲಿ ಸರ್ಕಾರಿ ವಕೀಲರಾದ ಪಿ ಸಿ ಸಿಗಿಹಳ್ಳಿ ಕಿತ್ತೂರ್ ರಾಣಿ ಚೆನ್ನಮ್ಮ ವಸತಿ ಶಾಲೆಯ ಪ್ರಾಚಾರ್ಯರಾದ ಶ್ರೀಮತಿ ಪೂರ್ಣಿಮಾ ಚಿನವಾಲ. ಶಿಕ್ಷಕರಾದ ಜೀವರಾಜ್ ಛತ್ರದ. ಉಪಾಧ್ಯಕ್ಷರಾದ ಜಿ.ಬಿ.ಯಲಗಚ್ .ಕಾರ್ಯದರ್ಶಿ ಎಚ್.ಜಿ. ಮುಳುಗುಂದ್ ಸಹಕಾರ್ಯದರ್ಶಿ ಎಮ್ ಎಸ್ ಕುಮ್ಮೂರ್. ಎಸ್ ಎನ್ ಬಾರ್ಕಿ ಹಾಗೂ ಕಾರ್ಯಕ್ರಮದ ಉಪನ್ಯಾಸವನ್ನು ಭಾರತಿ ಕುಲಕರ್ಣಿ ಹಾಗೂ ಕಾರ್ಯಕ್ರಮದಲ್ಲಿ ನ್ಯಾಯವಾದಿಗಳು ಶಾಲೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಮತ್ತು ನ್ಯಾಯಾಲಯದ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 