ವಿಜಯೋತ್ಸವ ದೇಶಾಭಿಮಾನ, ಸೈನಿಕರ ಗೌರವದ ಸಂಕೇತ: ಮಾಗಣಗೇರಿ
Victory celebrations are a symbol of patriotism and respect for soldiers: Maganageri
ವಿಜಯೋತ್ಸವ ದೇಶಾಭಿಮಾನ, ಸೈನಿಕರ ಗೌರವದ ಸಂಕೇತ: ಮಾಗಣಗೇರಿ
ಸಿಂದಗಿ 30: ಕಾರ್ಗಿಲ್ ಯುದ್ಧದಲ್ಲಿ ಭಾರತ ಜಯಗಳಿಸಿ 26ವರ್ಷ ಕಳೆದಿದೆ. ಪಾಕಿಸ್ತಾನ ವಿರುದ್ಧ ಆಪರೇಷನ್ ಸಿಂಧೂರ ನಡೆಸಿ ಮತ್ತೊಮ್ಮೆ ಭಾರತ ಪರಾಕ್ರಮ ಮೆರೆದಿದೆ. ಜು.26ರಂದು ಕಾರ್ಗಿಲ್ ವಿಜಯೋತ್ಸವ ಹಾಗೂ ಆಪರೇಷನ್ ಸಿಂಧೂರ ವಿಜಯೋತ್ಸವ ಜಂಟಿಯಾಗಿ ಆಯೋಜನೆ ಮಾಡಲಾಗಿದೆ ಎಂದು ಬಿಜೆಪಿ ಮುಖಂಡ ಶ್ರೀಶೈಲಗೌಡ ಬಿರಾದಾರ ಮಾಗಣಗೇರಿ ಹೇಳಿದರು.
ಸಿಂದಗಿ ಪಟ್ಟಣದ ಪಿಇಎಸ್ ಕಾಲೇಜಿನಲ್ಲಿ ಯುವ ಬ್ರಿಗೇಡ್ ವತಿಯಿಂದ ಕಾರ್ಗಿಲ್ ವಿಜಯ ದಿವಸ ನಿಮಿತ್ತ ಹಮ್ಮಿಕೊಂಡ ವಿಜಯ ಸಿಂಧೂರ ಕಾರ್ಯಕ್ರವನ್ನು ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಯುದ್ಧ ಯಾವಾಗಲು ನಡೆಯುದಿಲ್ಲ. ಆದರೆ ನಮ್ಮ ಯೋಧರು ಮಾತ್ರ ಯಾವಾಗಲೂ ್ರಾಣಾರೆ್ಪಣಗೆ ಸಿದ್ಧವಾಗಿಯೇ ಇರುತ್ತಾರೆ. ಇಂತಹ ಯೋಧರನ್ನು ಗೌರವಿಸಬೇಕಾದದ್ದು ನಮ್ಮೆಲ್ಲರ ಕರ್ತವ್ಯ. ದೇಶ ಮತ್ತ ದೇಶವಾಸಿಗಳ ಸಂರಕ್ಷಣೆಗಾಗಿ ತಮ್ಮ ಬದುಕನ್ನೇ ತ್ಯಾಗ ಮಾಡಿದ ಹಾಗೂ 26ರ ಕಾರ್ಗಿಲ್ ವಿಜಯೋತ್ಸವ ಅಂಗವಾಗಿ ಆಚರಣೆ ಮಾಡಲಾಗುವ ಈ ಸಂಭ್ರಮ ದೇಶಾಭಿಮಾನ, ಸೈನಿಕರ ಗೌರವದ ಸಂಕೇತ ಎಂದರು.
ಸಾನಿಧ್ಯ ವಹಿಸಿದ ಯಂಕಂಚಿ ಹಿರೇಮಠದ ಅಭಿನವ ರುದ್ರಮುನಿ ಶಿವಾಚಾರ್ಯರು ಮಾತನಾಡಿದ ಅವರು, ಈ ವಿಜಯೋತ್ಸವ ಸಂಭ್ರಮವನ್ನು ಪ್ರತಿವರ್ಷ ಸಂಭ್ರಮ ಸಡಗರಗಳಿಂದ ಆಚರಿಸಿಕೊಂಡು ಬರಲಾಗುತ್ತಿದೆ. ದೇಶಕ್ಕಿಂತ ಪ್ರಮುಖವಾದದ್ದು ಯಾವುದು ಇಲ್ಲ. ದೇಶದ ರಕ್ಷಣೆಯ ವಿಷಯದಲ್ಲಿ ನಮ್ಮ ದೇಶದ ಪ್ರತಿ ಯೋಧರೂ ಕಠಿಬದ್ದರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ದೇಶದ ಪ್ರತಿ ವ್ಯಕ್ತಿಯ ನೆಮ್ಮದಿಯ ಬದುಕಿನ ಹಿಂದೆ ಸೈನಿಕರ ಸಹಕಾರವಿರುವುದನ್ನು ನಾವು ಸದಾ ನೆನಪಿಸಿಕೊಳ್ಳಬೇಕು ಎಂದ ಅವರು, ಕಾರ್ಗಿಲ್ ಯುದ್ಧದ ಸಂದರ್ಭದಲ್ಲಿ ಸಹಸ್ರಾರು ಸಂಖ್ಯೆಯ ನಮ್ಮ ವೀರಯೋಧರು ್ರಾಣಾರೆ್ಪಣ ಮಾಡಿರುವುದು ನೋವನ್ನುಂಟು ಮಾಡುತ್ತದೆ. ಈ ಸಂದರ್ಭದಲ್ಲಿ ದೇಶದ ಪ್ರತಿಯೊಬ್ಬ ನಾಗರಿಕ ಹುತಾತ್ಮರ ಕುಟುಂಬಕ್ಕೆ ಬೆಂಬಲವಾಗಿ ನಿಲ್ಲುವ ಪ್ರಮಾಣ ಕೈಗೊಳ್ಳಬೇಕು ಎಂದು ನುಡಿದರು.
ಯುವ ಬ್ರಿಗೇಡ್ ವಿಭಾಗ ಸಂಚಾಲಕ ರಾಜು ಪಾಟೀಲ ಪ್ರಾಸ್ತಾವಿಕ ಮಾತನಾಡಿದರು. ಆಲಮೇಲ ತಹಶೀಲ್ದಾರ್ ಕೆ.ವಿಜಯಕುಮಾರ, ಕಾಲೇಜಿನ ಪ್ರಾಚಾರ್ಯ ಗುರು ಕಡಣಿ, ನಿವೃತ್ತ ಪ್ರಾಧ್ಯಾಪಕ ಪಿ.ಎಂ.ಮಡಿವಾಳ, ಶ್ರೀಶೈಲ ಜಾಮಾದಾರ, ಸಂಘಟನೆ ಜಿಲ್ಲಾ ಸಂಚಾಲಕ ಮಡಿವಾಳ ವಾಲಿಕಾರ, ನಿಂಗರಾಜ ಪಾಟೀಲ, ಮಹಾಂತೇಶ ಡಿಗ್ರಿ, ಸುರೇಶ ಜೋಗೂರ ಸೇರಿದಂತೆ ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿಗಳು ಹಾಗೂ ಯುವ ಬ್ರಿಗೇಡ್ ಸದಸ್ಯರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 