ಗೌರಿ ಲಂಕೇಶ್ ಹತ್ಯೆ ಆರೋಪಿಗೆ ಜಯ
Victory for Gauri Lankesh murder accused
ಮುಂಬೈ: ಜಾಲ್ನಾ ಮಹಾನಗರ ಪಾಲಿಕೆ(ಜೆಎಂಸಿ) ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಜಯ ಗಳಿಸಿದ್ದಾರೆ.
ಜೆಎಂಸಿಯ 13ನೇ ವಾರ್ಡ್ನಿಂದ ಶ್ರೀಕಾಂತ್ ಸ್ಪರ್ಧಿಸಿದ್ದಾರೆ. ಬಿಜೆಪಿ ಸೇರಿದಂತೆ ಇತರ ಪಕ್ಷದ ಅಭ್ಯರ್ಥಿಗಳು ಕಣದಲ್ಲಿದ್ದರು. ಆದರೆ ಏಕನಾಥ ಶಿಂದೆ ನೇತೃತ್ವದ ಶಿವಸೇನಾ ಇಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸಿಲ್ಲ.
2024ರ
ವಿಧಾನಸಭಾ ಚುನಾವಣೆಗೂ ಮುನ್ನ, ಶ್ರೀಕಾಂತ್ ಶಿವಸೇನಾಗೆ ಸೇರ್ಪಡೆಗೊಂಡಿದ್ದರು. ಆದರೆ ತೀವ್ರ ಟೀಕೆ ಎದುರಾದ ಕಾರಣ ಅವರನ್ನು ಪಕ್ಷಕ್ಕೆ ಸೇರಿಸುವ ನಿರ್ಧಾರವನ್ನು ಏಕನಾಥ ಶಿಂದೆ ಅವರು ತಡೆಹಿಡಿದಿದ್ದರು.
ಜಾಲ್ನಾ ನಗರಸಭೆ ಆಗಿದ್ದ ಸಂದರ್ಭದಲ್ಲಿ ಶ್ರೀಕಾಂತ್ ಅವರು 2001ರಿಂದ 2006ರ ಸದಸ್ಯರಾಗಿದ್ದರು. ಅವರು ಅವಿಭಜಿತ ಶಿವಸೇನಾದಿಂದ ಸ್ಪರ್ಧಿಸಿದ್ದರು. 2011ರಲ್ಲಿ ಶಿವಸೇನಾ ಟಿಕೆಟ್ ನೀಡದಿದ್ದಾಗ ಹಿಂದು ಜನಜಾಗೃತಿ ಸಮಿತಿ ಸೇರಿದ್ದರು.
ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಜೈಲಿನಲ್ಲಿದ್ದ ಶ್ರೀಕಾಂತ್ ಅವರಿಗೆ ಕರ್ನಾಟಕ ಹೈಕೋರ್ಟ್ 2024ರ ಸೆಪ್ಟೆಂಬರ್ನಲ್ಲಿ ಜಾಮೀನು ನೀಡಿತ್ತು. 2018ರಲ್ಲಿ ನಲಸೋಪಾರದಲ್ಲಿ ಕಚ್ಚಾ ಬಾಂಬ್ ಮತ್ತು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡ ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ, ಶ್ರೀಕಾಂತ್ ಅವರನ್ನು ಬಂಧಿಸಿ ಸ್ಫೋಟಕ ಕಾಯ್ದೆಯಡಿ ಪ್ರಕರಣ ದಾಖಲಿಸಿತ್ತು. ಈ ಪ್ರಕರಣದಲ್ಲಿಯೂ ಅವರಿಗೆ ಜಾಮೀನು ಸಿಕ್ಕಿದೆ.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 