ಶುಕ್ರವಾರ ಬೆಳಗ್ಗೆ 9 ಕ್ಕೆ ಪ್ರಧಾನಿ ಮೋದಿ ಅವರಿಂದ ವಿಡಿಯೋ ಸಂದೇಶ

ನವದೆಹಲಿ, ಏ 3, ಪ್ರಧಾನಮಂತ್ರಿ ನರೇಂದ್ರ ಮೋದಿ ದೇಶದ ಜನತೆಯೊಂದಿಗೆ ಶುಕ್ರವಾರ ಬೆಳಗ್ಗೆ 9 ಗಂಟೆಗೆ ವಿಡಿಯೋ ಸಂದೇಶ ಹಂಚಿಕೊಳ್ಳಲಿದ್ದಾರೆ.ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ದೇಶವಾಸಿಗಳೊಂದಿಗೆ ಶುಕ್ರವಾರ ಬೆಳಗ್ಗೆ 9 ಗಂಟೆಗೆ ಪುಟ್ಟ ವಿಡಿಯೋ ಸಂದೇಶ ಹಂಚಿಕೊಳ್ಳಲಿದ್ದೇನೆ” ಎಂದು ಹೇಳಿದ್ದಾರೆ.