ಕಲ್ಲು ತೂರಾಟಕ್ಕೆ ತಂದ ವಾಹನಗಳ ವಿಡಿಯೋ ಮಂಗಳೂರಿನ ಗಲಭೆಯದೋ? ಅಥವಾ ಬೇರೆಡೆಯದೋ? :ಹೆಚ್.ಡಿ.ಕುಮಾರಸ್ವಾಮಿ
hdk
ಬೆಂಗಳೂರು, ಡಿ 24 - ಮಂಗಳೂರಿನ ಪ್ರತಿಭಟನೆ ವೇಳೆ ಸೈಜುಗಲ್ಲುಗಳನ್ನು ಹೊತ್ತು ತಂದ ವಿಡಿಯೋಗಳನ್ನು ಇಷ್ಟೊಂದು ತಡವಾಗಿ ಬಿಡುಗಡೆಗೊಳಿಸುತ್ತಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ಜೆಡಿಎಸ್ ನಾಯಕ ಹಾಗೂ ಮಾಜಿಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಕಲ್ಲು ತೂರಾಟ ಪ್ರಕರಣದಲ್ಲಿ ಸರ್ಕಾರ ಯಾರನ್ನು ಬಂಧಿಸಿದೆ? ಎಷ್ಟು ವಾಹನಗಳನ್ನು ವಶಕ್ಕೆ ತೆಗೆದುಕೊಂಡಿದೆ?. ಕಲ್ಲು ತೂರಾಟಕ್ಕೆ ತಂದ ವಾಹನಗಳ ವಿಡಿಯೋ ಮಂಗಳೂರಿನ ಗಲಭೆಯದೋ? ಅಥವಾ ಬೇರೆ ಕಡೆಯದೋ? ಎಂದು ಪ್ರಶ್ನಿಸಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಬೆಂಗಳೂರಿನಲ್ಲಿ ಲಕ್ಷಾಂತರ ಮಂದಿ ಜನ ಸೇರಿದರೂ ಗಲಭೆ ಆಗಲಿಲ್ಲ. ಶಾಂತಿಯುತ ಪ್ರತಿಭಟನೆ ನಡೆಯಿತು. ಆದರೆ ಮಂಗಳೂರಿನಲ್ಲಿ ಪರಿಸ್ಥಿತಿ ವಿಕೋಪಕ್ಕೆ ಹೋಗಲು ಕಾರಣವೇನು?. ಮಂಗಳೂರನ್ನು ಕೋಮು ಪ್ರಯೋಗಶಾಲೆ ಮಾಡಿಕೊಂಡಿರುವ ಬಿಜೆಪಿ ಇಬ್ಬರು ಅಮಾಯಕರನ್ನು ಬಲಿ ತೆಗೆದುಕೊಂಡಿದ್ದು ಹೇಗೆ? ಮತ್ತು ಏಕೆ? ದಾಂಧಲೆಕೋರರಿಗೆ ಗುಂಡಿಕ್ಕಿದ್ದೇವೆ ಎನ್ನುವ ರಾಜ್ಯಸರ್ಕಾರ ಅವರಿಗೆ ಪರಿಹಾರ ಏಕೆ ಘೋಷಿಸಿತು?ಎಂದು ಪ್ರಶ್ನಿಸಿದ್ದಾರೆ.
ಹಿಂಸಾತ್ಮಕ ಪ್ರತಿಭಟನೆಗೆ ನನ್ನ ಬೆಂಬಲ ಖಂಡಿತ ಇಲ್ಲ. ಆದರೆ ವಿರೋಧ ಪಕ್ಷದ ಸದಸ್ಯನಾಗಿ ರಾಜ್ಯದ ಕಾನೂನು-ಸುವ್ಯವಸ್ಥೆಗೆ ಭಂಗ ತರುವ ನಿಟ್ಟಿನಲ್ಲಿ ಸರ್ಕಾರ ಮತ್ತು ಪೊಲೀಸರು ಪಿತೂರಿ ನಡೆಸಿದರೆ ಸುಮ್ಮನೆ ಕೂರುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 