ಶಿಕ್ಷಕಿ ಶ್ರೀಮತಿ ಶೈಲಜಾ ಶಿವನಗೌಡ ಪಾಟೀಲರಿಗೆ ವಿದ್ಯಾ ವಾರಧಿ ಪ್ರಶಸ್ತಿ
Vidya Varadhi Award for Teacher Mrs. Shailaja Shivanagowda Patil
ಬೆಳಗಾವಿ 31: ಕರ್ನಾಟಕ ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಬೆಳಗಾವಿ ಜಿಲ್ಲಾ ಘಟಕ, ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘ, ಬೆಳಗಾವಿ ಜಿಲ್ಲಾ ಘಟಕ ಇವರ ಸಹಯೋಗದಲ್ಲಿ ದಿ. 28-03-2026 ರಂದು ನಗರದ ಕುಮಾರ ಗಂಧರ್ವ ಹಾಲ ನಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ 2025-26 ಅಂಗವಾಗಿ ಸರ್ಕಾರಿ ಶಾಲೆಯಲ್ಲಿ ಸಕ್ರಿಯ, ಗುಣಮಟ್ಟದ ಶಿಕ್ಷಣ ಸೇವೆ ಸಲ್ಲಿಸಿದ್ದಕ್ಕಾಗಿ ಕಣಬರ್ಗಿ ಸರ್ಕಾರಿ ಪಬ್ಲಿಕ್ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿಯಾದ ಶ್ರೀಮತಿ ಶೈಲಜಾ ಶಿವನಗೌಡ ಪಾಟೀಲ ಇವರಿಗೆ ಜಿಲ್ಲಾ ಮಟ್ಟದ "ವಿದ್ಯಾ ವಾರಿಧಿ" ಪ್ರಶಸ್ತಿ ಪ್ರಧಾನ ಮಾಡಿ ಸತ್ಕರಿಸಲಾಯಿತು. ಈ ಸಂದರ್ಭದಲ್ಲಿ ಡಿಡಿಪಿಐ ಲೀಲಾವತಿ ಹಿರೇಮಠ, ಮೇಯರ ಪ್ರೀತಿ ಕಾಮಕರ, ರಾಜ್ಯ ರಾಜ್ಯ ಅಧ್ಯಕ್ಷ ಚಂದ್ರಶೇಖರ ನುಗ್ಗುಲಿ, ಶಿಕ್ಷಕರ ಸಂಘದ ಎಮ್ ಎಫ್ ಸಿದ್ದನಗೌಡರ, ಸಂಘದ ಅಧ್ಯಕ್ಷರಾದ ಜಯಕುಮಾರ ಹೆಬಳಿ, ಪ್ರಧಾನ ಕಾರ್ಯದರ್ಶಿ ರಮೇಶ ವಿ ಗೋಣಿ ಹಾಗೂ ಸಂಘದ ಸದಸ್ಯರು, ಬೆಳಗಾವಿ ಜಿಲ್ಲೆಯ ಶಿಕ್ಷಕರು, ಸಂಘದ ಸದಸ್ಯರು ಪಾಲ್ಗೊಂಡಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 