ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ವಿದ್ಯಾಗಿರಿಯ ಜೆಎಸ್‌ಎಸ್‌ಎಸ್‌ಎಮ್ ಪಿಯು ವಿದ್ಯಾರ್ಥಿಗಳ ಉತ್ತಮ ಸಾಧನೆ
Vidyagiri JSSSM PU students perform well in the second PUC examination
ಲೋಕದರ್ಶನ ವರದಿ
ಧಾರವಾಡ 10: ನಗರದ ವಿದ್ಯಾಗಿರಿಯ ಜೆಎಸ್‌ಎಸ್ ಶ್ರೀ ಮಂಜುನಾಥೇಶ್ವರ ಪದವಿಪೂರ್ವ ಕಲಾ ಮತ್ತು ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನ ಮಾರ್ಚ 2025-26 ರಲ್ಲಿ ಜರುಗಿದ ದ್ವಿತೀಯ ಪಿ.ಯು ವಾರ್ಷಿಕ ಪರೀಕ್ಷೆ ಫಲಿತಾಂಶ ಈ ಕೆಳಗಿನಂತಿದೆ.
ಒಟ್ಟು ಹಾಜರಾದ 466 ವಿದ್ಯಾರ್ಥಿಗಳಲ್ಲಿ 374 ವಿದ್ಯಾರ್ಥಿಗಳು ಪಾಸಾಗಿ ಸರಾಸರಿ ಒಟ್ಟು 80.26ಅ ಸಾಧಿಸಿದೆ ಎಂದು ತಿಳಿಸಲು ಅತ್ಯಂತ ಹರ್ಷವೆನಿಸುತ್ತದೆ. ಈ ಫಲಿತಾಂಶದಲ್ಲಿ 54 ವಿದ್ಯಾರ್ಥಿಗಳು ಡಿಷ್ಟಿಂಕ್ಷನ್ನಲ್ಲಿ , 211 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಪಾಸಾಗಿ ನಮ್ಮ ಮಹಾವಿದ್ಯಾಲಯದ ಕೀರ್ತಿಯನ್ನು ಬೆಳಗಿಸಿದ್ದಾರೆ.
ಈ ವರ್ಷದ ವಿಜ್ಞಾನ ವಿಭಾಗದಲ್ಲಿ ಒಟ್ಟು 254 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಅದರಲ್ಲಿ 25 ವಿದ್ಯಾರ್ಥಿಗಳು ಡಿಷ್ಟಿಂಕ್ಷನ್, 126 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿದ್ದು, ಈ ವಿಭಾಗದ ಫಲಿತಾಂಶವು 78.74ಅ ಬಂದಿದೆ.
ವಾಣಿಜ್ಯ ವಿಭಾಗದಲ್ಲಿ ಒಟ್ಟು 157 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಅದರಲ್ಲಿ 23 ವಿದ್ಯಾರ್ಥಿಗಳು ಡಿಷ್ಟಿಂಕ್ಷನ್, 66 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿದ್ದು, ಈ ವಿಭಾಗದ ಫಲಿತಾಂಶವು 86.62ಅ ಬಂದಿದೆ ಎಂದು ತಿಳಿಸಲು ತುಂಬಾ ಸಂತೋಷವೆನಿಸುತ್ತದೆ.
ಕಲಾ ವಿಭಾಗದ ಒಟ್ಟು 55 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಅದರಲ್ಲಿ 6 ವಿದ್ಯಾರ್ಥಿಗಳು ಡಿಷ್ಟಿಂಕ್ಷನ್, 19 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿದ್ದು, ಹಾಗೂ ಇದೇ ವಿಭಾಗದ ಕುಮಾರಿ ಶ್ರಾವಣಿ ಪಾಟೀಲ ವಿದ್ಯಾರ್ಥಿನಿಯು ರಾಜ್ಯಕ್ಕೆ ದ್ವಿತೀಯ ರಾ್ಯಂಕ್ ಪಡೆದಿದ್ದಾಳೆ ಎಂದು ತಿಳಿಸಲು ತುಂಬಾ ಸಂತೋಷವೆನಿಸುತ್ತದೆ.
ಇದಲ್ಲದೆ ವಿವಿಧ ವಿಷಯಗಳಲ್ಲಿ ಒಟ್ಟು 8 ವಿದ್ಯಾರ್ಥಿಗಳು 100ಕ್ಕೆ 100 ಅಂಕಗಳನ್ನು ಪಡೆದಿರುವುದು ನಮಗೆ ಹೆಮ್ಮೆಯ ವಿಷಯವಾಗಿದೆ. ಕಲಾ ವಿಭಾಗದಲ್ಲಿ ಶ್ರಾವಣಿ ಪಾಟೀಲ (595) 99.16ಅ ಪ್ರತಿಶತ ಅಂಕಗಳೊಂದಿಗೆ ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದಿರುತ್ತಾಳೆ. ವಿದ್ಯಾಶ್ರೀ ಎ. (584)97.33, ರಕ್ಷಿತಾ (569)94.83ಅ ಪ್ರತಿಶತ ಅಂಕಗಳಿಸಿರುತ್ತಾರೆ.
ವಿಜ್ಞಾನ ವಿಭಾಗದಲ್ಲಿ ಶಾಂಭವಿ ಕಂಬಿ (587) 97.83ಅ, ಬಿಂದು ಎನ್ ಗಾಣಿಗ 569 (94.83ಅ), ಲಕ್ಷಣರಾವ್ ಚೊಣಣ್ಣನವರ (565)94.16ಅ ಪ್ರತಿಶತ ಅಂಕಗಳಿಸಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಡ್ವಿಂಕಲ್ ಪುರೋಹಿತ (579) 96.50ಅ, ಸಹನಾ ಸಣ್ಣಪ್ಪನವರ (577) 96.16ಅ, ರಿದ್ಧೀ ಮುನೋತ(575)95.83ಅ ಪ್ರತಿಶತ ಅಂಕಗಳಿಸಿದ್ದಾರೆ.
ಈ ಸಾಧನೆಗೆ ಜನತಾ ಶಿಕ್ಷಣ ಸಮಿತಿಯ ಕಾರ್ಯಾಧ್ಯಕ್ಷರಾದ ಡಾ. ಡಿ ವೀರೇಂದ್ರ ಹೆಗ್ಗಡೆ, ಕಾರ್ಯದರ್ಶಿಗಳಾದ ಡಾ. ಅಜಿತ ಪ್ರಸಾದ, ಆಡಳಿತಾಧಿಕಾರಿಗಳಾದ ಅರಿಹಂತ ಪ್ರಸಾದ ಅವರು ಮತ್ತು ಕಾಲೇಜಿನ ಪ್ರಾಚಾರ್ಯರಾದ ರವಿವರ್ಮ ಜೋಶಿ ಅವರು ಹಾಗೂ ಸಿಬ್ಬಂದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 