ವಿದ್ಯಾರ್ಥಿನಿಯರು ಉಜ್ವಲ ಭವಿಷ್ಯಕ್ಕೆ ಪರಿಶ್ರಮಿಸಬೇಕು: ಜಿಲ್ಲಾಧಿಕಾರಿ ಹಿರೇಮಠ

ಗದಗ 23: ಜೀವನದಲ್ಲಿ ಶಿಸ್ತು ಹಾಗೂ ಸತತ ಪರಿಶ್ರಮದಿಂದ ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ವಿಧ್ಯಾರ್ಥಿನಿಯರು ಮುಂದಾಗಬೇಕು ಎಂದು ಗದಗ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ನುಡಿದರು.

ಮಲ್ಲಸಮುದ್ರದ ಮೋರಾರ್ಜಿ  ವಸತಿ ಶಾಲೆಯಲ್ಲಿಂದು ಜರುಗಿದ ಬೇಟಿ ಬಚಾವೋ, ಬೇಟಿ ಪಡಾವೋ ಸಪ್ತಾಹದ ಅಂಗವಾಗಿ ಬಾಲ್ಯ ವಿವಾಹ, ಪೋಸ್ಕೋ ಕಾಯ್ದೆ, ಸ್ವರಕ್ಷೆ, ಮಕ್ಕಳ ಹಕ್ಕುಗಳು ಹಾಗೂ ಉತ್ತಮ ಸ್ಪರ್ಶ ಮತ್ತು ಕೆಟ್ಟ ಸ್ಪರ್ಶ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಹೆಣ್ಣು ಮಕ್ಕಳ ಸವರ್ಾಂಗೀಣ ಅಭಿವೃದ್ಧಿಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಾಕಷ್ಟು ಸೌಲಭ್ಯಗಳನ್ನು ನೀಡುತ್ತಿವೆ. ಇದರ ಸದುಪಯೋಗ ಪಡೆದುಕೊಳ್ಳಬೇಕು. ಸಮಾಜದಲ್ಲಿ ಬದಲಾವಣೆಗೆ ತಕ್ಕಂತೆ ಹೆಣ್ಣು ಮಕ್ಕಳು ಕೂಡಾ ಸನ್ನಿವೇಶ ಎದುರಿಸಲು ಸಮರ್ಥರಾಗಬೇಕು ಎಂದು ಜಿಲ್ಲಾಧಿಕಾರಿಗಳು ನುಡಿದರು.

ಜಿಲ್ಲಾ ಪೋಲಿಸ ವರಿಷ್ಠಾಧಿಕಾರಿ ಶ್ರೀನಾಥ ಜೋಶಿ ಮಾತನಾಡಿ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯಡಿ ಜಿಲ್ಲೆಯು ಎರಡು ಬಾರಿ ರಾಷ್ಟ್ರ ಪ್ರಶಸ್ತಿಗೆ ಭಾಜನವಾಗಿರುವದು ಹೆಮ್ಮೆಯ ವಿಷಯವಾಗಿದೆ ಎಂದರು. ಪೋಲಿಸ ಇಲಾಖೆಯಲ್ಲಿ ಮಹಿಳೆಯರ ಸ್ವಯಂ ರಕ್ಷಣೆ ಕುರಿತು ತರಬೇತಿ ನೀಡಲು ಕಿತ್ತೂರ ಚನ್ನಮ್ಮ ಪಡೆ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಯಾವುದೇ ಪ್ರದೇಶದಲ್ಲಿ 18 ವರ್ಷದ ಒಳಗಿನ ಬಾಲ್ಯ ವಿವಾಹ ನಡೆಯುತ್ತಿದ್ದರೆ ಅಂತಹ ವಿವರಗಳನ್ನು ಮಹಿಳಾ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಬೇಕು. ಕರೆ ಮಾಡಿದವರ ವಿವರಗಳನ್ನು ಗೌಪ್ಯವಾಗಿ ಇಡಲಾಗುವದು. ಹೆಣ್ಣು ಮಕ್ಕಳಿಗಾಗಿ ಅನೇಕ ಯೋಜನೆಗಳು ಜಾರಿಯಲ್ಲಿದ್ದು ಇದರ ಸದುಪಯೋಗ ಪಡೆದು ದೇಶದ ಬೆಳವಣಿಗೆಗೆ ಕೊಡುಗೆ ನೀಡಲು ಮುಂದಾಗಬೇಕು ಎಂದು ಶ್ರೀನಾಥ ಜೋಶಿ ನುಡಿದರು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದ ಕೆ. ಮಾತನಾಡಿ ಹಿಂದಿನಗಿಂತಲೂ ಇಂದು ಹೆಣ್ಣುಮಕ್ಕಳ ಸರ್ವತೋಮುಖ ಅಭಿವೃದ್ಧಿಗಾಗಿ ಅನೇಕ ಯೋಜನೆಗಳ ಅವಕಾಶಗಳನ್ನು ಒದಗಿಸಲಾಗುತ್ತಿದೆ. ಮಕ್ಕಳಿಗೆ ಹಕ್ಕುಗಳಿವೆ ಅವುಗಳ ಬಗ್ಗೆ ತಿಳಿದುಕೊಂಡಿರಬೇಕು. ಮಕ್ಕಳು ಸಮಾಜಕ್ಕಾಗಿ ದೇಶಕ್ಕಾಗಿ ಏನು ನೀಡಲು ಸಾಧ್ಯ ಎನ್ನುವುದರ ಚಿಂತನೆ ಇರಬೇಕು ಎಂದರು.

ಜಿಲ್ಲಾ ಕಾನೂನು ಸೇವೆ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ  ಎಸ್.ಜಿ.ಸಲಗರೆ ಮಾತನಾಡಿ ಎಲ್ಲ ಮಕ್ಕಳಲ್ಲೂ ಪ್ರತಿಭೆ ಹಾಗೂ ವಿಶೇಷ ಶಕ್ತಿ ಇದೆ. ನಂಬಿಕೆ ಹಾಗೂ ಸತತ ಪ್ರಯತ್ನ ಅಗತ್ಯ.  ಮಕ್ಕಳು ಪಠ್ಯದ ಜೊತೆಗೆ  ಪುಸ್ತಕದೊಂದಿಗೆ ಇತರೆ ಚಟುವಟಿಕೆಗಳಲ್ಲಿ ಭಾಗವಹಿಸಿ ಸಾಮಾನ್ಯ ಜ್ಞಾನವನ್ನು ಹೊಂದಬೇಕು ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಎಚ್.ಎಚ್.ಕುಕನೂರ, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ ಗೋಪಾಲ ಲಮಾಣಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಶೈಲಾ ಕುರಹಟ್ಟಿ, ಮಲ್ಲಸಮುದ್ರ ಮೋರಾಜರ್ಿ ವಸತಿ ಶಾಲೆ ಪ್ರಾಚಾರ್ಯ ಮಹಾಂತೇಶ ಲಮಾಣಿ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ತಾಜಮುನ್ನಿ ನಾಯ್ಕರ, ಸದಸ್ಯರುಗಳಾದ ಮಂಜುನಾಥ ಬಮ್ಮನಕಟ್ಟಿ, ಸಿ.ಎಸ್.ಬೊಮ್ಮನಹಳ್ಳಿ, ಅನ್ನಪೂರ್ಣ ಗಾಣಿಗೇರ ಸೇರಿದಂತೆ ವಸತಿ ಶಾಲೆಯ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಹಾಗೂ ಶಿಕ್ಷಕ ವೃಂದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.