ಬಿಜೆಪಿ ನಗರ ಘಟಕದ ಅಧ್ಯಕ್ಷರಾಗಿ ವಿಜಯಕುಮಾರ ಕುಂಬಾರ ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ ಭೋಮಲೆ ಆಯ್ಕೆ

ಬಿಜೆಪಿ ನಗರ ಘಟಕದ ಅಧ್ಯಕ್ಷರಾಗಿ ವಿಜಯಕುಮಾರ ಕುಂಬಾರ ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ ಭೋಮಲೆ ಆಯ್ಕೆ  Vijayakumar Kumbara elected as BJP city unit president, Praveen Bhomale as general secretary

ಲಕ್ಷ್ಮೇಶ್ವರ" 04:  ಪಟ್ಟಣದ ಯುವ ಮುಖಂಡರು ಹಾಗೂ ಬಿಜೆಪಿ ಪಕ್ಷದ ಎಲ್ಲ ಸಂಘಟನೆಗಲ್ಲಿ ತಮ್ಮನ್ನು ತಾವು ಸಕ್ರಿಯವಾಗಿ ತೊಡಗಿಸಿಕೊಂಡು ಪಕ್ಷದ ತತ್ವ ಸಿದ್ಧಾಂತಗಳೊಂದಿಗೆ ಪಕ್ಷದಲ್ಲಿ ಕೆಲಸ ಮಾಡುತ್ತಾ ಹಿರಿಯರೊಂದಿಗೆ ಪಕ್ಷದ ಕಾರ್ಯಕರ್ತರೊಂದಿಗೆ ತಮ್ಮನ್ನು ತಾವು ತೊಡಗಿಸಿಕೊಂಡು ನಿರಂತರ ಸೇವೆ ಸಲ್ಲಿಸುವುದರ ಮೂಲಕ ಪಕ್ಷ ಬಡವರಿಗಾಗಿ ಜಾರಿಗೆ ತಂದಿರುವ ಹಲವಾರು ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸಲು ನಿರಂತರ ಪ್ರಯತ್ನ ಮಾಡುವ ಮೂಲಕ ಪಕ್ಷ ಗುರುತಿಸಿದ ಅಭ್ಯರ್ಥಿಗಳ ಪರವಾಗಿ ನಿರಂತರ ಪ್ರಚಾರ ಮಾಡುತ್ತಾ ಅಭ್ಯರ್ಥಿಗಳ ಗೆಲುವಿಗೆ ನಿರಂತರವಾಗಿ ಶ್ರಮವಹಿಸುತ್ತಿರುವುದನ್ನು ಗುರುತಿಸಿ ಮುಂಬರುವ ಪುರಸಭೆ ಪಟ್ಟಣ ಪಂಚಾಯಿತಿ ಗ್ರಾಮ ಪಂಚಾಯತಿ ತಾಲೂಕು ಪಂಚಾಯಿತಿ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷ ಗುರುತಿಸಿದ ಅಭ್ಯರ್ಥಿಗಳ ಗೆಲುವಿಗೆ ಶ್ರಮವಹಿಸಲಿ ಪಕ್ಷದ ಚಟುವಟಿಕೆಯಲ್ಲಿ ಸಕ್ರಿಯವಾಗಿ ಮುಂದುವರಿಯಲಿ ಎಂಬ ಉದ್ದೇಶದಿಂದ ಇವರ ಕ್ರಿಯಾಶೀಲ ಚಟುವಟಿಕೆಗಳನ್ನು ಗುರುತಿಸಿ  ಶಿರಹಟ್ಟಿ ಮಂಡಲ ಅಧ್ಯಕ್ಷರಾದ ಸುನೀಲ ಮಹಾಂತಶೆಟ್ಟರ ಅವರು ಶಿರಹಟ್ಟಿ ಮಂಡಲ ಲಕ್ಷ್ಮೇಶ್ವರ ನಗರ ಘಟಕದ ಅಧ್ಯಕ್ಷರನ್ನಾಗಿ ವಿಜಯಕುಮಾರ ಮಹದೇವಪ್ಪ ಕುಂಬಾರ ಅವರನ್ನು ಹಾಗೂ ಶಿರಹಟ್ಟಿ ಮಂಡಲ ಲಕ್ಷ್ಮೇಶ್ವರ ನಗರ ಘಟಕದ ಪ್ರಧಾನ ಕಾರ್ಯದರ್ಶಿಯನ್ನಾಗಿ ಪ್ರವೀಣ್ ಕಾಶಿನಾಥ್ ಭೋಮಲೆ ಅವರನ್ನು ಆಯ್ಕೆ ಮಾಡಿ ಆದೇಶ ಹೊರಡಿಸಿದ್ದಾರೆ