ಹೊಸಪೇಟೆ 04: ಇಂದು ವಿಜಯನಗರ ಜಿಲ್ಲೆಯ ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದ ಒಳಾಂಗಣ ಕ್ರೀಡಾಂಗಣ ಸಭಾಂಗಣದಲ್ಲಿ ಕರ್ನಾಟಕ ಸರ್ಕಾರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಯುವ ಸಬಲೀಕರಣ, ಮತ್ತು ಕ್ರೀಡಾ ಇಲಾಖೆ ವಿಜಯನಗರ ಮತ್ತು ಮೈ ಭಾರತ್ ನೆಹರು, ಯುವ ಕೇಂದ್ರ ವಿಜಯನಗರ, ಹಾಗೂ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು, ವಿಜಯನಗರ ಜಿಲ್ಲೆ ಇವರುಗಳ ಸಂಯುಕ್ತಾಶ್ರಯದಲ್ಲಿ 2024-25 ನೇ ಸಾಲಿನ ವಿಜಯನಗರ ಜಿಲ್ಲಾಮಟ್ಟದ ಯುವ ಜನೋತ್ಸವವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮವನ್ನು ಮುಖ್ಯ ಅತಿಥಿಗಳಾಗಿ ಆಗಮಿಸಿದ ಹೊಸಪೇಟೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್ ಎನ್ ಮಹಮ್ಮದ್ ಇಮಾಮ್ ನಿಯಾಜಿ ರವರು ಹಾಗೂ ವೇದಿಕೆಯ ಮೇಲಿನ ಗಣ್ಯರು ಸಸಿಗಳಿಗೆ ನೀರು ಎರೆಯುವುದರ ಮೂಲಕ ಉದ್ಘಾಟಿಸಿದರು.
ಕಾರ್ಯಕ್ರಮವನ್ನು ಮುಖ್ಯ ಅತಿಥಿಗಳಾಗಿ ಆಗಮಿಸಿದ ಹೊಸಪೇಟೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್. ಎನ್. ಮಹಮ್ಮದ್ ಇಮಾಮ್ ನಿಯಾಜಿ ರವರು ಕಾರ್ಯಕ್ರಮವನ್ನು ಕುರಿತು ಮಾತನಾಡಿ ಯುವಜನರ ಸರ್ವತೋಮುಖ ಅಭಿವೃದ್ಧಿಗೆ ಕೇಂದ್ರ ಸರಕಾರ ಹಾಗೂ ರಾಜ್ಯ ಸರಕಾರ ಗಳು ಹಲವಾರು ಕಾರ್ಯಕ್ರಮ ಗಳನ್ನು ಹಮ್ಮಿಕೊಳ್ಳುತ್ತಾ ಬಂದಿರುತ್ತವೆ.
ಈ ನಿಟ್ಟಿನಲ್ಲಿ ಈ ಒಂದು ಯುವಜನೋತ್ಸವ ಕಾರ್ಯಕ್ರಮದಲ್ಲಿ ಜಾನಪದ ನೃತ್ಯ, ಜಾನಪದ ಗೀತೆ, ವಿಜ್ಞಾನ ವಸ್ತು ಪ್ರದರ್ಶನ, ಫೋಟೋಗ್ರಫಿ, ಕವಿತೆ ರಚನೆ, ಕಥಾ ರಚನೆ, ಪೇಂಟಿಂಗ್, ಭಾಷಣ, ಚಿತ್ರಕಲೆ, ವೈಯಕ್ತಿಕ ಆಯ್ದ ವಿಷಯಗಳ ಬಗ್ಗೆ, ಜೀವನದ ಇತರ ಕೌಶಲ್ಯಗಳು, ಸಾಂಸ್ಕೃತಿಕ ಸ್ಪರ್ಧೆಗಳು, ಹಾಗೂ ಇತರೆ ಹಲವಾರು ಪ್ರತಿಭೆಗಳನ್ನು ಪ್ರದರ್ಶಿಸಲು ಅವಕಾಶವಿರುತ್ತದೆ.
ವಿಜೇತ ತಂಡ ಮತ್ತು ವೈಯಕ್ತಿಕ ಸ್ಪರ್ಧೆ ವಿಜೇತರಿಗೆ ನಿಯಮ ಅನುಸಾರ ನಗದು ಪುರಸ್ಕಾರ ನೀಡಲಾಗುವುದು ಹಾಗೂ ಭಾಗವಹಿಸಿದ ಎಲ್ಲರಿಗೂ ಪ್ರಶಂಸನಾ ಪತ್ರ ಹಾಗೂ ಪ್ರಯಾಣ ಭತ್ಯೆ ನೀಡಲಾಗುತ್ತದೆ ಎಂದರು.
ಈ ಒಂದು ಯುವಜನತ್ಸವ ಕಾರ್ಯಕ್ರಮದಲ್ಲಿ ಗುಂಡಿ ರಮೇಶ್, ಭಾರತಿ ಗುಂಡಿ ರಮೇಶ್, ಸವಿತಾ ಶಂಕೀನ, ರಾಮರಾವ್ ಬಿರಾದರ್, ಬಾಲಾಜಿ ಕಟಗಿ ಪ್ರಕಾಶ್ ಬಾಬು, ಮಹಾರಾಜ ಈರಣ್ಣ, ಜಾಕಿರ್ ಹುಸೇನ್, ಗ್ರೇಸಿ ಮೇಡಂ, ಮೋಟು ಪತ್ತಾರ್, ಕಿರಣ್, ಗುಜ್ಜಲ್, ಸ್ಯಾಮ್ಸಂನ್ ಹಾಗೂ ಶಿಕ್ಷಕರು, ಸಾವಿರಾರು ವಿದ್ಯಾರ್ಥಿಗಳು, ಪಾಲಕರು ಪೋಷಕರು, ಉಪಸ್ಥಿತರಿದ್ದರು.