ವಿಜಯನಗರ (ಹೊಸಪೇಟೆ): ಮೆದುಳಿನ ಆರೋಗ್ಯದ ಬಗ್ಗೆ ಜಾಗೃತಿ ಅಗತ್ಯ: ಡಾ. ಟಿ. ಲಿಂಗರಾಜು
Vijayanagara (Hosapete): Awareness about brain health is essential: Dr. T. Lingaraju
ವಿಜಯನಗರ (ಹೊಸಪೇಟೆ), ಆಗಸ್ಟ್ 04: ಮೆದುಳು ಮಾನವ ದೇಹದ ನಿಯಂತ್ರಣ ಕೇಂದ್ರವಾಗಿದ್ದು, ಮೆದುಳಿಗೆ ತೊಂದರೆ ಉಂಟಾದರೆ ಅದು ಕೇವಲ ವ್ಯಕ್ತಿಯ ಆರೋಗ್ಯದ ಮೇಲಷ್ಟೇ ಅಲ್ಲದೆ, ಕುಟುಂಬದ ಆರ್ಥಿಕ ಹಾಗೂ ಮಾನಸಿಕ ನೆಮ್ಮದಿಯ ಮೇಲೂ ಪರಿಣಾಮ ಬೀರುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಟಿ. ಲಿಂಗರಾಜು ಹೇಳಿದರು.
ನಗರದ ಜಿಲ್ಲಾ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ, ಜಿಲ್ಲಾ ಆರೋಗ್ಯ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಸೋಮವಾರ ಆಯೋಜಿಸಿದ್ದ ವಿಶ್ವ ಮೆದುಳು ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಮಾನಸಿಕ ಒತ್ತಡ, ರಕ್ತದೊತ್ತಡ, ಮಧುಮೇಹ, ದುಶ್ಚಟಗಳು, ಅಸಮರ್ಕ ಆಹಾರ ಪದ್ಧತಿ ಹಾಗೂ ದೈಹಿಕ ಚಟುವಟಿಕೆಗಳ ಕೊರತೆಯಿಂದ ಮೆದುಳಿಗೆ ಸಂಬಂಧಿಸಿದ ಕಾಯಿಲೆಗಳು ಹೆಚ್ಚಾಗುತ್ತಿವೆ.
ಪಾರ್ಶ್ವವಾಯು, ಮೆದುಳಿನ ರಕ್ತಸ್ರಾವ, ನರಗಳ ದೌರ್ಬಲ್ಯ ಹಾಗೂ ಮರೆವು ಕಾಯಿಲೆಗಳಂತಹ ಸಮಸ್ಯೆಗಳು ಹೆಚ್ಚಾಗಿ ಕಂಡುಬರುತ್ತಿದ್ದು, ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಪಡೆಯುವುದು ಮತ್ತು ಜಾಗೃತಿ ಮೂಡಿಸುವುದು ಅತ್ಯಂತ ಅಗತ್ಯವಾಗಿದೆ ಎಂದು ತಿಳಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 