ವಿಜಯಪುರ: ಏತನೀರಾವರಿ ಯೋಜನೆ ನೀರು ಹರಿಸಲು ಸಿದ್ಧತೆಗಳು ಸಂಪೂರ್ಣ: ಪಾಟೀಲ್
ಲೋಕದರ್ಶನ ವರದಿ
ವಿಜಯಪುರ 13: ಮುಳವಾಡ ಏತನೀರಾವರಿ ಯೋಜನೆ ವಿಜಯಪುರ ಮುಖ್ಯ ಕಾಲುವೆಯಿಂದ ಬುಧವಾರದಿಂದ ನೀರು ಹರಿಸಲು ಎಲ್ಲ ಸಿದ್ಧತೆಗಳು ಪೂರ್ಣಗೊಳ್ಳುತ್ತಿವೆ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.
ಚಿಂಚೋಳಿ ಉಪಚುನಾವಣೆಯಲ್ಲಿ ಪ್ರಚಾರಕಾರ್ಯದಲ್ಲಿ ತೊಡಗಿರುವ ಅವರು, ವಿಜಯಪುರ ಮುಖ್ಯ ಕಾಲುವೆಗೆ ನೀರು ಹರಿಸಲು ವಿನಂತಿಸಿ, ವಿವಿಧ ಗ್ರಾಮಗಳ ರೈತರ ಮನವಿಗೆ ಪ್ರತಿಕ್ರಿಯಿಸಿರುವ ಅವರು, "ವಿಜಯಪುರ ಮುಖ್ಯ ಕಾಲುವೆಯ ಕೂಡಗಿ ಹತ್ತಿರದ ರೈಲ್ವೆಲೈನ್ ಪಾಸಿಂಗ್ ಕಾಮಗಾರಿ ತಾಂತ್ರಿಕ ತೊಂದರೆಯಿಂದ ವಿಳಂಬದಿಂದ ಸಾಗಿದ್ದು, ಈಗಾಗಲೇ ಗುತ್ತಿಗೆ ಅವಧಿ 18ತಿಂಗಳು ಪೂರ್ಣಗೊಂಡು, ಅವಧಿ ವಿಸ್ತರಣೆಯ 6ತಿಂಗಳು ಸಹ ಮುಗಿದರೂ ಕಾಮಗಾರಿ ಪೂರ್ಣಗೊಳ್ಳುತ್ತಿಲ್ಲ. ಚಲಿಸುವ ರೈಲ್ವೆಲೈನ್ಗಳ ಕೆಳಭಾಗದಲ್ಲಿಯೇ ಬೃಹತ್ ಕಾಮಗಾರಿ ನಡೆಯುತ್ತಿರುವದು ವಿಳಂಬಕ್ಕೆ ಕಾರಣವಾಗಿದೆ. ರೈಲುಗಳನ್ನು ತಾತ್ಕಾಲಿಕವಾಗಿ ನಿಲ್ಲಿಸಲು ಇಲಾಖೆಯವರು ಒಪ್ಪುತ್ತಿಲ್ಲ. ಕಳೆದ ವರ್ಷದಂತೆ ಈ ಬಾರಿಯೂ ತಾತ್ಕಾಲಿಕ ಪುಸ್ಸಿಂಗ್ ಕಾಮಗಾರಿ ಮೂಲಕ ನೀರು ಹರಿಸಲು ಸೂಚಿಸಲಾಗಿದ್ದು, ಇದಕ್ಕಾಗಿ 60ಲಕ್ಷ ರೂ. ಹೆಚ್ಚುವರಿ ಅನುದಾನ ಒದಗಿಸಲಾಗಿದೆ" ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.
"93ಕ್ಯೂಮೆಕ್ಸ್ ನೀರು ಹರಿಸುವ ಸಾಮರ್ಥ್ಯ ಹೊಂದಿರುವ ವಿಜಯಪುರ ಮುಖ್ಯ ಕಾಲುವೆಯಲ್ಲಿ ತಾತ್ಕಾಲಿಕ ಪೈಪ್ಪುಸ್ಸಿಂಗ್ನಿಂದ 22ಕ್ಯೂಮೆಕ್ಸ್ ನೀರು ಮಾತ್ರ ಹರಿಯಲಿದ್ದು, ವಿಜಯಪುರ ಮುಖ್ಯ ಕಾಲುವೆಯಲ್ಲಿ 136ಕಿ.ಮೀ ಜಾಲವಾದವರೆಗೆ ನೀರು ಹರಿಸಿ, ಕಗ್ಗೋಡ, ಕುಮಟಗಿ, ಪಡಗಾನೂರ, ದೇವರಹಿಪ್ಪರಗಿ, ಮಣೂರ, ಮಾರ್ಕಬ್ಬಿನಹಳ್ಳಿ, ಬೊಮ್ಮನಜೋಗಿ ಕೆರೆಗಳನ್ನು ಹೂವಿನ ಹಿಪ್ಪರಗಿ ಶಾಖಾ ಕಾಲುವೆಯಿಂದ 40ಕಿ.ಮೀ ವರೆಗೆ ನೀರು ಹರಿಸಿ, ನಾಗವಾಡ, ಮಣೂರ, ಮುಖತರ್ಿಹಾಳ, ಅಲಕೊಪ್ಪರ, ರೂಡಗಿ ಹಾಗೂ ಬಸವನ ಬಾಗೇವಾಡಿ ಶಾಖಾ ಕಾಲುವೆಯಿಂದ 40ಕಿ.ಮೀ ನೀರು ಹರಿಸಿ, ಡೋಣುರ, ಬಿಸನಾಳ, ರೆಬಿನಾಳ, ಸಾತಿಹಾಳ ಕೆರೆಗಳನ್ನು ಮತ್ತು ತಿಡಗುಂದಿ ಶಾಖಾ ಕಾಲುವೆಗೆ 2.7ಕಿ.ಮೀ ವರೆಗೆ ನೀರು ಹರಿಸಿ, ಮದಭಾವಿ, ನಾಗಠಾಣ ಕೆರೆಗಳನ್ನು ಕುಡಿಯುವ ನೀರಿನ ಅಗತ್ಯಕ್ಕೆ ಮಾತ್ರ ತುಂಬಿಸಲು ಉದ್ದೇಶಿಸಲಾಗಿದೆ. ಅಲ್ಲದೇ ಕೆಲವು ಕೆರೆಗಳ ಮೇಲೆ ಬಹುಹಳ್ಳಿಗಳ ಕುಡಿಯುವ ನೀರಿನ ಯೋಜನೆಗಳು ಅವಲಂಬಿತವಾಗಿದ್ದು, ಆ ಎಲ್ಲ ಯೋಜನೆಗಳಿಗೆ ವಿಜಯಪುರ ಮುಖ್ಯ ಕಾಲುವೆಗಳಿಂದ ನೀರು ಹರಿಸುವದರಿಂದ ಅನುಕೂಲವಾಗಲಿದೆ" ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ನೀಡಿರುವ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ನೀರಿನ ತೀವ್ರ ಅಭಾವ ಇರುದರಿಂದಾಗಿ ವಾರಾಬಂಧಿ ಪದ್ಧತಿಯನ್ನು ಕಟ್ಟು ನಿಟ್ಟಾಗಿ ಅನುಸರಿಸಿ ನೀರು ಹರಿಸಲಾಗುತ್ತಿದ್ದು, ರೈತರು ಸಹಕರಿಸಬೇಕು ಎಂದು ಸಚಿವ ಪಾಟೀಲ್ ರೈತರಲ್ಲಿ ಮನವಿ ಮಾಡಿದ್ದಾರೆ.
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ 