ವಿಜಯಪುರ 24: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಯುವ ಜನಾಂಗ ತಪ್ಪದೇ ಮತದಾನ ಮಾಡುವ ಜೊತೆಗೆ ನಗರ ಹಾಗೂ ಗ್ರಾಮಾಂತರ ಪ್ರದೇಶದ ನಾಗರಿಕರಲ್ಲಿ ಸಾಮಾಜಿಕ ಸೇವೆ ಎಂದು ಭಾವಿಸಿ ಮತದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿಗಳಾದ ಸಿ.ಬಿ.ಕುಂಬಾರ ಅವರು ಕರೆ ನೀಡಿದರು.
ನಗರದಸರ್ಕಾರಿ ಪ್ರಥಮ ದರ್ಜೆ ಪದವಿ ಕಾಲೇಜ್ದಲ್ಲಿಂದು ಜಿಲ್ಲಾ ಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿ, ನೆಹರು ಯುವ ಕೇಂದ್ರ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ಪದವಿಕಾಲೇಜ್ ಸಹಯೋಗದಲ್ಲಿ ಹಮ್ಮಿಕೊಂಡ ಮತದಾನದ ಜಾಗೃತಿ ಹಾಗೂ ವಿವಿಪ್ಯಾಟ್ ಪ್ರಾತ್ಯಕ್ಷಿಕೆ ಕಾರ್ಯಕ್ರಮಕ್ಕೆ ಸಸಿಗೆ ನೀರುಣಿಸುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಯುವ ಜನಾಂಗ ಮತದಾನದಲ್ಲಿ ಹೆಚ್ಚಿನ ರೀತಿಯಲ್ಲಿ ಪಾಲ್ಗೊಳ್ಳಬೇಕು. ಮತದಾರರ ಪಟ್ಟಿಯಿಂದ ಹೊರಗುಳಿದಲ್ಲಿ ತಕ್ಷಣ ಅರ್ಜಿ ನಮೂನೆ 6ನ್ನು ಭತರ್ಿ ಮಾಡಿ ಚುನಾವಣಾ ಗುರುತಿನ ಚೀಟಿ ಪಡೆದು, ತಮ್ಮ ಮತಗಟ್ಟೆಯನ್ನು ಸಹ ಖಾತ್ರಿಪಡಿಸಿಕೊಂಡು ಮುಂಬರುವ ಚುನಾವಣೆಯಲ್ಲಿ ತಪ್ಪದೇ ಮತದಾನ ಮಾಡಬೇಕು. ವಿಶೇಷವಾಗಿ ಕುಟುಂಬ, ನೆರೆ-ಹೊರೆಯವರು ಹಾಗೂ ನಗರ ಮತ್ತು ಗ್ರಾಮಾಂತರ ಪ್ರದೇಶದ ನಾಗರಿಕರಲ್ಲಿಯೂ ಈ ಕುರಿತು ಸೂಕ್ತ ಅರಿವು ಮೂಡಿಸುವಂತೆ ಕರೆ ನೀಡಿದರು.
ಚುನಾವಣೆಯಲ್ಲಿ ಶೇಕಡಾ ನೂರರಷ್ಟು ಮತದಾನ ಆದಲ್ಲಿ ಯೋಗ್ಯ ಅಭ್ಯಥರ್ಿಗಳ ಆಯ್ಕೆಗೆ ಸಹಕಾರಿಯಾಗಲಿದೆ. ಈ ಹಿನ್ನಲೆಯಲ್ಲಿ ಚುನಾವಣಾ ಆಯೋಗದ ನಿದರ್ೇಶನದನ್ವಯ ಶಾಲಾ-ಕಾಲೇಜುಗಳ ವ್ಯಾಪ್ತಿಯಲ್ಲಿ ಮತದಾರರ ಜಾಗೃತಿ ಕ್ಲಬ್ಗಳನ್ನು ರಚಿಸಿಕೊಂಡು ಸಕ್ರೀಯ ವಿದ್ಯಾರ್ಥಿಗಳ ನೇತೃತ್ವದಲ್ಲಿ ತಂಡಗಳನ್ನು ಸಹ ರಚಿಸಿ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಸದ್ಢಡಗೊಳಿಸಲು ಚಿಂತನ-ಮಂಥನ ನಡೆಸುವ ಕಾರ್ಯಗಳೂ ಸಹ ನಡೆಯುತ್ತಿವೆ. ಕಾರಣ, ಅರ್ಹ ಯುವ ಮತದಾರರು ನಿರ್ಲಕ್ಷ್ಯ ತೋರದೇ ದೇಶದ ಹಿತದೃಷ್ಟಿಯಿಂದ ಮತ್ತು ಜನರ ಉತ್ತಮ ಭವಿಷ್ಯಕ್ಕಾಗಿ ಮತದಾನದಲ್ಲಿ ತಪ್ಪದೇ ಪಾಲ್ಗೊಳ್ಳುವಂತೆ ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ನೆಹರು ಯುವ ಕೇಂದ್ರ ಸಮನ್ವಯಾಧಿಕಾರಿ ಡಿ.ದಯಾನಂದ ಅವರು, ಭಾರತ ಸದೃಢ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಹೊರಹೊಮ್ಮಿದ್ದು, ಪ್ರತಿ ಬಾರಿ ನಡೆಯುವ ಚುನಾವಣೆಗಳಲ್ಲಿ ಅರ್ಹ ಪುರುಷ ಮಹಿಳಾ ಮತದಾರರು ಮತದಾನದ ಹಕ್ಕನ್ನು ಚಲಾಯಿಸುವಂತೆ ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜ್ ಪ್ರಾಂಶುಪಾಲ ಎಂ.ಪಿ.ನಾಯಿಕ ಅವರು ವಹಿಸಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿಗೆ ಮತ್ತು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎಲ್ಲರೂ ಮತದಾನ ಮಾಡುವಂತೆ ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿದರ್ೇಶಕ ಎಸ್.ಜಿ.ಲೋಣಿ ಅವರು ಮತದಾನ ಮಾಡುವ ಕುರಿತಂತೆ ವಿದ್ಯಾಥರ್ಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಮಾಸ್ಟರ್ ಟ್ರೇನರ್ ಸುರೇಶ ಬೆಟಗೇರಿ ಅವರು ವಿವಿಪ್ಯಾಟ್ನ ಮಹತ್ವದ ಕುರಿತು ಪ್ರಾತ್ಯಕ್ಷಿಕೆ ಮೂಲಕ ವಿದ್ಯಾಥರ್ಿಗಳಿಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಭಗತ್ಸಿಂಗ್ ಮತ್ತು ರಾಜ್ಗುರು ಅವರ ಬಲಿದಾನದ ದಿನದ ಅಂಗವಾಗಿ 2 ನಿಮಿಷ ಮೌನಾಚರಣೆ ಮಾಡಿ ಗೌರವ ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಸುಲೇಮಾನ ನದಾಫ್ ಉಪಸ್ಥಿತರಿದ್ದರು. ಕಾಲೇಜಿನ ಉಪನ್ಯಾಸಕ ಹಾಗೂ ಸಿಬ್ಬಂದಿ ಕಾರ್ಯದಶರ್ಿಗಳಾದ ಎಸ್.ಎಸ್.ಸಿದ್ದಾಪುರ ಸ್ವಾಗತಿಸಿ, ಕೊನೆಯಲ್ಲಿ ವಂದಿಸಿದರು.