ಲೋಕದರ್ಶನ ವರದಿ
ವಿಜಯಪುರ 10: ಇಂಡಿ ತಾಲೂಕಿನ ಇಂಚಗೇರಿ ಗ್ರಾಮದ ಬಾಲಕಿಯನ್ನು ತಾಲೂಕಿನ ಸಾಲೋಟಗಿ ಗ್ರಾಮದಲ್ಲಿ ದಿ; 12-05-2019 ರಂದು ಬಾಲ್ಯವಿವಾಹ ಜರುಗಲಿದೆ ಎಂಬ ಖಚಿತ ಮಾಹಿತಿ ಮೇರೆಗೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಸೂಚಿಸಿದಂತೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳು ಹಾಗೂ ಚಡಚಣ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿಯ ಅಂಗನವಾಡಿ ಮೇಲ್ವಿಚಾರಕಿ, ಹೊತರ್ಿ ಪೋಲಿಸ್ ಠಾಣೆ ಸಿಬ್ಬಂದಿ ಇವರ ಸಹಯೋಗದಲ್ಲಿ ಬಾಲಕಿಯ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ದಿ: 09-05-20196 ರಂದು ಸಂಜೆ ವರನ ಮನೆಗೆ ಕಳುಹಿಸುವ ಸಿದ್ಧತೆಯಲ್ಲಿ ತೊಡಗಿದ್ದರು. ಈ ಸಂದರ್ಭದಲ್ಲಿ ಪಾಲಕರಿಗೆ ಬಾಲ್ಯವಿವಾಹ ನಿಷೇಧ ಕಾಯ್ದೆ ಕುರಿತು ಅರಿವು ಮೂಡಿಸಿ, ಬಾಲ್ಯವಿವಾಹವನ್ನು ತಡೆಗಟ್ಟಿ ಬಾಲಕಿಯನ್ನು ರಕ್ಷಿಸಿಕೊಂಡು ಸಕರ್ಾರಿ ಬಾಲಕಿಯರ ಬಾಲಮಂದಿರ ವಿಜಯಪುರಕ್ಕೆ ಅಭಿರಕ್ಷಣೆಗಾಗಿ ದಾಖಲಿಸಲಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ತಿಳಿಸಿದ್ದಾರೆ