ಲೋಕದರ್ಶನ ವರದಿ
ವಿಜಯಪುರ 16: ಬೆಂಬಲ ಬೆಲೆ ಯೋಜನೆಯಡಿ ಕಡಲೆ ಕಾಳು ಖರೀದಿಗೆ 4620 ರೂ. ಬೆಲೆ ನಿಗದಿಪಡಿಸಿದ್ದು, ಪ್ರತಿ ತಾಲೂಕಿಗೊಂದರಂತೆ ಒಟ್ಟು 5 ಖರೀದಿ ಕೇಂದ್ರಗಳನ್ನು ತಕ್ಷಣ ಸ್ಥಾಪಿಸುವಂತೆ ಜಿಲ್ಲಾಧಿಕಾರಿ ಶ್ರೀಮತಿ ಎಂ.ಕನಗವಲ್ಲಿ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಕೃಷಿ ಉತ್ಪನ್ನ ಮಾರುಕಟ್ಟೆ, ಕೃಷಿ, ಸಹಕಾರ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಜಿಲ್ಲೆಯಲ್ಲಿ ಕಡಲೆ ಕಾಳು ಖರೀದಿಗೆ ನಾಳೆಯಿಂದಲೇ ನೋಂದಣಿ ಕಾರ್ಯ ಪ್ರಾರಂಭಿಸಬೇಕು. ಎಫ್.ಎ.ಕ್ಯೂ ಗುಣಮಟ್ಟದ ಕಡಲೆ ಕಾಳು ಪ್ರತಿ ರೈತರಿಂದ 10 ಕ್ವಿಂಟಲ್ ಮಾತ್ರ ಖರೀದಿಸುವಂತೆ ಸೂಚನೆ ನೀಡಿದರು.
ವಿಜಯಪುರ ಜಿಲ್ಲೆಯ ವಿಜಯಪುರ, ಸಿಂದಗಿ, ಬಸವನಬಾಗೇವಾಡಿ, ಇಂಡಿ, ಮುದ್ದೇಬಿಹಾಳ ತಾಲೂಕಾ ಕೇಂದ್ರಗಳಲ್ಲಿ ಒಂದರಂತೆ ಖರೀದಿ ಕೇಂದ್ರಗಳನ್ನು ಇಂದಿನಿಂದಲೇ ಆರಂಭಿಸುವಂತೆ ಸೂಚನೆ ನೀಡಿದ ಜಿಲ್ಲಾಧಿಕಾರಿಗಳು 2018-19ನೇ ಸಾಲಿನಲ್ಲಿ ರೈತರು ಕಡಲೆ ಬೆಳೆಗಳ ಬಗ್ಗೆ ಪಹಣಿಯಲ್ಲಿ ನೋಂದಾಯಿಸಿಕೊಂಡಿರಬೇಕು. ಅದರಂತೆ ಆಧಾರ ಕಾರ್ಡ್ ಮತ್ತು ಬ್ಯಾಂಕ್ದಿಂದ ಪಡೆದ ಆಧಾರ ನೋಂದಾಯಿತ ಸೀಡಿಂಗ್ ಪ್ರಮಾಣ ಪತ್ರದೊಂದಿಗೆ ಆಯಾ ಖರೀದಿ ಕೇಂದ್ರಗಳಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಅವರು ತಿಳಿಸಿದರು.
ಎಫ್.ಎ.ಕ್ಯೂ ಗುಣಮಟ್ಟದ ಕಡಲೆ ಕಾಳು ಚೆನ್ನಾಗಿ ಒಣಗಿರಬೇಕು. ತೇವಾಂಶವು ಶೇ.12ಕ್ಕಿಂತ ಕಡಿಮೆ ಇರಬೇಕು. ಕಡಲೆಕಾಳು ಉತ್ಪನ್ನದ ಗುಣಮಟ್ಟದ ಗಾತ್ರ, ಬಣ್ಣ ಮತ್ತು ಆಕಾರವನ್ನು ಹೊಂದಿರಬೇಕು. ಗಟ್ಟಿಯಾಗಿರಬೇಕು ಮತ್ತು ಮಣ್ಣಿನಿಂದ ಬೇರ್ಪಡಿಸಲ್ಪಟ್ಟು ಸ್ವಚ್ಛವಾಗಿರಬೇಕು. ಸಾಣಿಗೆಯಿಂದ ಸ್ವಚ್ಛಗೊಳಿಸಿರಬೇಕು. ಕ್ರಿಮಿಕೀಟಗಳಿಂದ ಮುಕ್ತವಾಗಿರಬೇಕು ಎಂದು ಅವರು ಹೇಳಿದರು.
ಬೆಂಬಲೆ ಬೆಲೆ ಯೋಜನೆಯಡಿ ಪ್ರತಿ ರೈತರಿಂದ ಪ್ರತಿ ಎಕರೆಗೆ 3 ಕ್ವಿಂಟಾಲ್ದಂತೆ ಗರಿಷ್ಠ 10 ಕ್ವಿಂಟಲ್ ಪ್ರಮಾಣದ ಎಫ್.ಎ.ಕ್ಯೂ ಗುಣಮಟ್ಟದ ಕಡಲೆಕಾಳುಗಳನ್ನು ಖರೀದಿಸಲಾಗುವುದು. ಯಾವುದೇ ಸಂದರ್ಭದಲ್ಲಿ ರೈತರು ಮಧ್ಯವರ್ತಿಗಳ ಮೊರೆಹೋಗದೇ ನೇರವಾಗಿ ಖರೀದಿ ಕೇಂದ್ರದಲ್ಲಿ ಸಂಪರ್ಕಿಸಿ ಜಿಲ್ಲೆಯ ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಅವರು ತಿಳಿಸಿದರು.
ಸಭೆಯಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವಕುಮಾರ, ಕೃಷಿ ಉತ್ಪನ್ನ ಮಾರುಕಟ್ಟೆ ಕಾರ್ಯದಶರ್ಿಗಳಾದ ವಿ.ರಮೇಶ, ಜಿಲ್ಲಾ ಸಹಕಾರ ಇಲಾಖೆ ಅಧಿಕಾರಿ ಜಿ.ಎಚ್.ಗಚ್ಚಿ,ಮಾರ್ಕೆಟಿಂಗ್ ಫೆಡರೇಶನ್ ಅಧಿಕಾರಿ ವಿ.ವೆಂಕಟೇಶ, ಎಪಿಎಂಸಿ ಸಹಾಯಕ ನಿದರ್ೇಶಕರೂ ಹಾಗೂ ಸಿಂದಗಿ ಪ್ರಭಾರ ಕಾರ್ಯದರ್ಶಿಗಳಾದ ಎಂ.ಡಿ.ಚಬನೂರ, ಇಂಡಿಕಾರ್ಯದರ್ಶಿ ಎಚ್.ಎಸ್. ಅವಟಿ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.