ವಿಜಯಪುರ: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಜಿಲ್ಲಾ ಟಾಸ್ಕಫೋರ್ಸ ಸಮಿತಿ ಸಭೆ

ಲೋಕದರ್ಶನ ವರದಿ

ವಿಜಯಪುರ 21: ಜಿಲ್ಲೆಯಲ್ಲಿ ಬೆಳೆಯುತ್ತಿರುವ ಉತ್ತಮ ಗುಣಮಟ್ಟದ ಬಿಳಿ ಜೋಳಕ್ಕೆ ( ಮಾಲ್ದಂಡಿ)  ಪ್ರೋತ್ಸಾಹಿಸಲು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಬೆಂಬಲ ಬೆಲೆ ಹೆಚ್ಚಿಸುವಂತೆ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ   ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಬಿಳಿ ಜೋಳ ಖರೀದಿ ಪ್ರಕ್ರಿಯೆ ಕುರಿತಂತೆ ನಡೆದ ಜಿಲ್ಲಾ ಟಾಸ್ಕಫೋರ್ಸ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು ,ಪ್ರಸ್ತುತ 2019-20 ನೇ ಸಾಲಿಗೆ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಜಿಲ್ಲೆಯ ಬಿಳಿ ಜೋಳಕ್ಕೆ ಪ್ರತಿ ಕ್ವೀಂಟಲ್ಗೆ 2570 ನಿಗದಿ ಪಡೆಸಿದ್ದು, ಇದು ಅತ್ಯಂತ ಕಡಿಮೆ ಬೆಲೆಯಾದ ಹಿನ್ನಲೆಯಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಬಿಳಿ ಜೋಳಕ್ಕೆ ಬೆಂಬಲ ಬೆಲೆ ಹೆಚ್ಚಿಸುವಂತೆ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದರು.

ಸಭೆಯಲ್ಲಿ  ಮಾರುಕಟ್ಟೆಯಲ್ಲಿ ಇರುವ ದರಕ್ಕೆ ಅನುಗುಣವಾಗಿ ಗರಿಷ್ಠ ಬೆಂಬಲ ಬೆಲೆ ನಿಗಧಿ ಪಡೆಸುವ ಅಗತ್ಯವಿದ್ದು ಮುಂದಿನ ದಿನಗಳಲ್ಲಿ ಹೆಚ್ಚನ ರೈತರು ಈ ಬೆಳೆ ಬೆಳೆಯಲು ಮುಂದೆ ಬರಲು ಅನುಕೂಲವಾಗುವಂತೆ ಸಕರ್ಾರಕ್ಕೆ  ಪ್ರಸ್ತಾವನೆ ಸಲ್ಲಿಸಬೇಕು.  ಬಿಳಿ ಜೋಳ ಖರೀದಿ ಕೇಂದ್ರಗಳ ವ್ಯವಸ್ಥೆ ಮತ್ತು ಜಿಲ್ಲೆಯ ಬಸವನ ಬಾಗೇವಾಡಿ, ಅಲಮೇಲ, ಸಿಂದಗಿ, ವಿಜಯಪುರ ಸೇರಿದಂತೆ ಸಮೀಪದ ಸ್ಥಳಗಳಲ್ಲಿ ಉಗ್ರಾಣಗಳ ವ್ಯವಸ್ಥೆಗಳನ್ನು ಪರಿಶೀಲಿಸಿ ಮಾಡಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. 

ಸಭೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಪ್ರಭಾರಿ ಉಪ ನಿದರ್ೇಶಕಿ ಸುಲೇಖಾ ಸ್ವಾಗತಿಸಿದರು. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಸಹಾಯಕ ನಿರ್ದೇಶಕ ಶ್ರೀ ಛಗನೂರ ಅವರು ಅವಶ್ಯಕ ಮಾಹಿತಿ ನೀಡಿದರು.  ಕೃಷಿ ಜಂಟಿ ನಿದರ್ೇಶಕ ಶಿವಕುಮಾರ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.