ವಿಜಯಪುರ: ಮಾ.21 ರಿಂದ ಏಪ್ರಿಲ್ 4 ರವರೆಗೆ ಎಸ್.ಎಸ್.ಎಲ್.ಸಿ. ಪರೀಕ್ಷೆ: ಪಾರದರ್ಶಕ-ನಕಲು ಮುಕ್ತ ಪರೀಕ್ಷೆ ನಡೆಸಲು ಸೂಚನೆ

ಲೋಕದರ್ಶನ ವರದಿ

ವಿಜಯಪುರ 12: ಜಿಲ್ಲೆಯಲ್ಲಿ ಇದೇ ಮಾಚರ್್ 21 ರಿಂದ ಏಪ್ರಿಲ್ 4ರವರೆಗೆ ಎಸ್.ಎಸ್.ಎಲ್.ಸಿ. ಪರೀಕ್ಷೆಗಳು ಜರುಗಲಿದ್ದು, ಪಾರದರ್ಶಕ ಹಾಗೂ ನಕಲು ಮುಕ್ತ ಪರೀಕ್ಷೆ ನಡೆಸಲು ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಸೂಚನೆ ನೀಡಿದರು. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಜರುಗಿದ ಎಸ್.ಎಸ್.ಎಲ್.ಸಿ. ಪರೀಕ್ಷೆ-2019ರ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು,ಪರೀಕ್ಷಾ ವೇಳೆಯಲ್ಲಿ ಯಾವುದೇ ಅಕ್ರಮಗಳಿಗೆ ಅವಕಾಶ ನೀಡದೇ ನಕಲು ಮುಕ್ತ ಪರೀಕ್ಷೆ ನಡೆಸಲು ಸೂಚಿಸಿದರು. 

ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿಯನ್ನು ಕಡ್ಡಾಯವಾಗಿ ಅಳವಡಿಸಬೇಕು. ತಪ್ಪಿದಲ್ಲಿ  ಸಕರ್ಾರದ ನಿಯಮಾವಳಿಯನ್ವಯ ಆ ಶಾಲೆಯ ಪರೀಕ್ಷಾ ಕೇಂದ್ರವನ್ನು ರದ್ದುಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. 

ಸುಗಮ ಪರೀಕ್ಷೆಗಾಗಿ 103 ಪರೀಕ್ಷಾ ಕೇಂದ್ರಗಳನ್ನು ಜಿಲ್ಲೆಯಾದ್ಯಂತ ತೆರೆಯಲಾಗಿದೆ. ಈ ಪೈಕಿ 2  ಸೂಕ್ಷ್ಮ ಪರೀಕ್ಷಾ ಕೇಂದ್ರಗಳೆಂದು ಗುರುತಿಸಲಾಗಿದೆ. ವಿಜಯಪುರ ನಗರದಲ್ಲಿ 16, ವಿಜಯಪುರ ಗ್ರಾಮೀಣ 18, ಬಸವನಬಾಗೇವಾಡಿ 14, ಚಡಚಣ 8, ಇಂಡಿ 11, ಮುದ್ದೇಬಿಹಾಳ 17 ಹಾಗೂ ಸಿಂದಗಿ ತಾಲೂಕಿನಲ್ಲಿ 19  ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಪರೀಕ್ಷಾ ಅಕ್ರಮಗಳಿಗೆ ಅವಕಾಶವಿಲ್ಲದಂತೆ ಹಾಗೂ ಯಾವುದೇ ಅಡಚಣೆ ಎದುರಾಗದಂತೆ ಸುಗಮವಾಗಿ ಪರೀಕ್ಷೆ ನಡೆಸುವ ನಿಟ್ಟಿನಲ್ಲಿ  ಪರೀಕ್ಷಾ ಕೇಂದ್ರವಾರು ಜಾಗೃತ ದಳವನ್ನು ರಚಿಸಿ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. 

ಪ್ರಸಕ್ತ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಜಿಲ್ಲೆಯ ಒಟ್ಟು 33,472 ವಿದ್ಯಾಥರ್ಿಗಳು ನೊಂದಾಯಿಸಿಕೊಂಡಿದ್ದಾರೆ.  ಈ ಪೈಕಿ 30,897 ಪ್ರಥಮ ಬಾರಿಗೆ ಪರೀಕ್ಷೆಯನ್ನು ಎದುರಿಸುತ್ತಿದ್ದಾರೆ. 945 ಪುನರಾವರ್ತನೆ  ವಿದ್ಯಾರ್ಥಿಗಳು , 1322 ಖಾಸಗಿ ನೋಂದಾಯಿತ ಹಾಗೂ 308 ಖಾಸಗಿ ಪುನರಾವತರ್ಿತ ವಿದ್ಯಾರ್ಥಿಗಳು  ಸೇರಿದಂತೆ ಒಟ್ಟು 33,472ವಿದ್ಯಾರ್ಥಿಗಳು  ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ.

ನಿಷೇಧಾಜ್ಞೆ :  ಸುವ್ಯವಸ್ಥಿತವಾಗಿ ಪರೀಕ್ಷೆಗಳು ನಡೆಯುವ ನಿಟ್ಟಿನಲ್ಲಿ ಮಾಚರ್್ 21ರಿಂದ ಏಪ್ರಿಲ್ 4ರವರೆಗೆ ಪರೀಕ್ಷಾ ಕೇಂದ್ರಗಳ 200 ಮೀ.ವ್ಯಾಪ್ತಿಯಲ್ಲಿ 144ರ ಕಲಂ ಅನ್ವಯ ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ. ಈ ಪ್ರದೇಶದಲ್ಲಿ ವಿದ್ಯಾರ್ಥಿಗಳ  ಪಾಲಕರು-ಪೋಷಕರು, ಸಂಬಂಧಿಗಳು,  ಸೇರಿದಂತೆ ಯಾರೂ ಪ್ರವೇಶಿಸುವಂತಿಲ್ಲ. ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗೆ ನಿಯೋಜಿತ ಕಡ್ಡಾಯ ಗುರುತಿನ ಚೀಟಿ ಹೊಂದಿದ ಸಿಬ್ಬಂದಿಗಳನ್ನು ಹೊರತುಪಡಿಸಿ ಮಾಧ್ಯಮದವರು ಸೇರಿದಂತೆ ಯಾರಿಗೂ ಪ್ರವೇಶಾವಕಾಶವಿರುವುದಿಲ್ಲ. ವಿಡಿಯೋ ಚಿತ್ರೀಕರಣಕ್ಕೂ ಅವಕಾಶವಿರುವುದಿಲ್ಲ.   ಪರೀಕ್ಷೆ ಅವಧಿ ಮುಗಿಯುವವರೆಗೂ ಪರೀಕ್ಷಾ ಕೇಂದ್ರಗಳ ಸಮೀಪದಲ್ಲಿರುವ ಝರಾಕ್ಸ್ ಅಂಗಡಿಗಳನ್ನು  ಬಂದ್ ಮಾಡಲು ಆದೇಶಿಸಲಾಗಿದ್ದು, ನಿಯಮ ಉಲ್ಲಂಘಿಸಿದವರ ವಿರುದ್ದ ಸೂಕ್ರ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ. 

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಕಾಸ ಕಿಶೋರ ಸುರಳಕರ ಅವರು ಮಾತನಾಡಿ, ರಾಜ್ಯಮಟ್ಟದಲ್ಲಿ ರ್ಯಾಂಕ್ಗಳಿಸಲು ಅಕ್ರಮಕ್ಕೆ ಅವಕಾಶ ನೀಡದೇ ನಕಲುಮುಕ್ತ ಹಾಗೂ ಪಾರದರ್ಶಕ ಪರೀಕ್ಷೆ ನಡೆಸಬೇಕು. ಪರೀಕ್ಷಾ ಕೇಂದ್ರಗಳು ಹೆಚ್ಚಿರುವುದರಿಂದ ಸುವ್ಯವಸ್ಥಿತ ಪರೀಕ್ಷಾ ಕರ್ತವ್ಯ ನಿರ್ವಹಣೆಗೆ ಬೇರೆ ಇಲಾಖೆಗಳಿಂದಲೂ ಅಧಿಕಾರಿ ಸಿಬ್ಬಂದಿಗಳನ್ನು ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಪ್ರಶ್ನೆ ಪತ್ರಿಕೆ ಭದ್ರತಾ ಕೊಠಡಿಯಿಂದ ಪರೀಕ್ಷೇ ಕೇಂದ್ರಕ್ಕೆ ತಲುಪುವರೆಗೂ ಸೂಕ್ತ ಪೋಲಿಸ್ ಬಂದೋಬಸ್ ವ್ಯವಸ್ಥೆ ಮಾಡಲಾಗಿದ್ದು, ಪ್ರಶ್ನೆ ಪತ್ರಿಕೆ ನಿಗದಿತ ಸಮಯಕ್ಕೆ ತಲುಪುವಂತೆ ನಿಯೋಜಿತ ಅಧಿಕಾರಿಗಳು ಅತ್ಯಂತ ಎಚ್ಚರಿಕೆಯಿಂದ ಕಾರ್ಯನಿರ್ವಹಿಸುವಂತೆ ಸೂಚನೆ ನೀಡಿದರು. 

ವೇಳಾಪಟ್ಟಿ :  

ಮಾಚರ್್ 21ರಂದು  ಬೆಳಿಗ್ಗೆ 9-30ರಿಂದ ಪ್ರಥಮ ಭಾಷೆ ಪರೀಕ್ಷೆಗಳಾದ ಕನ್ನಡ, ತೆಲಗು, ಹಿಂದಿ, ಮರಾಠಿ, ತಮಿಳು, ಉದರ್ು, ಇಂಗ್ಲೀಷ್, ಸಂಸ್ಕೃತ  ಮಾರ್ಚ 23 ರಂದು, ಕೋರ್ ವಿಷಯಗಳಾದ ಎಲಿಮೆಂಟ್ಸ್ ಆಫ್ ಮೆಕ್ಯಾನಿಕಲ್ ಆಂಡ್ ಎಲೆಕ್ಟ್ರಿಕಲ್ ಇಂಜಿನೀಯರಿಂಗ್-2, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್, ಅರ್ಥಶಾಸ್ತ್ರ, ಮಧ್ಯಾಹ್ನ 2 ಗಂಟೆಯಿಂದ  ಇಂಜಿನೀಯರಿಂಗ್ ಗ್ರಾಫಿಕ್ಸ್-2, ಪರೀಕ್ಷೆಗಳು ಜರುಗಲಿವೆ. ಮಾ.25 ರಂದು  ಬೆಳಿಗ್ಗೆ 9-30ರಿಂದ ಗಣಿತ, ಸಮಾಜಶಾಸ್ತ್ರ,  ಮಾ.27 ರಂದು ಬೆಳಿಗ್ಗೆ 9-30 ರಿಂದ ದ್ವೀತಿಯ ಭಾಷೆ ಇಂಗ್ಲಿಷ್, ಕನ್ನಡ, ಮಾ.29ರಂದು ಬೆಳಿಗ್ಗೆ 9-30ರಿಂದ  ಸಮಾಜ ವಿಜ್ಞಾನ, ಏಪ್ರಿಲ್ 2 ರಂದು ಬೆಳಿಗ್ಗೆ 9-30 ರಿಂದ ವಿಜ್ಞಾನ, ರಾಜ್ಯಶಾಸ್ತ್ರ,  ಮಧ್ಯಾಹ್ನ  2 ಗಂಟೆಯಿಂದ ಕನರ್ಾಟಕ ಸಂಗೀತ- ಹಿಂದೂಸ್ಥಾನಿ ಸಂಗೀತ, ಏಪ್ರಿಲ್ 4 ರಂದು ಬೆಳಿಗ್ಗೆ 9-30 ರಿಂದ ತೃತೀಯ ಭಾಷೆಗಳಾದ ಹಿಂದಿ, ಕನ್ನಡ, ಇಂಗ್ಲೀಷ್, ಅರೆಬಿಕ್, ಪಷರ್ಿಯನ್, ಉದರ್ು, ಸಂಸ್ಕೃತ, ಕೊಂಕಣಿ, ತುಳು, ಎನ್.ಎಸ್.ಕ್ಯೂಎಫ್. ಪರೀಕ್ಷಾ ವಿಷಯಗಳಾದ ಮಾಹಿತಿ ತಂತ್ರಜ್ಞಾನ, ರಿಟೇಲ್, ಅಟೋಮೊಬೈಲ್, ಹೆಲ್ತ್ಕೇರ, ಬ್ಯೂಟಿ ಆಂಡ್ ವೆಲ್ನೆಸ್ ಪರೀಕ್ಷೆಗಳು ಜರುಗಲಿವೆ. 

ಸಭೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿದರ್ೇಶಕ ಪ್ರಸನ್ನಕುಮಾರ, ಎಸ್.ಎಸ್.ಎಲ್.ಸಿ. ಪರೀಕ್ಷೆಯ ಜಿಲ್ಲಾ ನೋಡಲ್ ಅಧಿಕಾರಿ ಎಸ್.ಎ.ಮುಜಾವರ, ಜಿಲ್ಲೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪರೀಕ್ಷೆ ನಿಯೋಜಿತ ಮುಖ್ಯ ಅಧೀಕ್ಷಕರು ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.