ಲೋಕದರ್ಶನ ವರದಿ
ವಿಜಯಪುರ 17: ಭವಿಷ್ಯದಲ್ಲಿ ಅರ್ಥಶಾಸ್ತ್ರದ ಬೆಳವಣಿಗಾಗಿ ಅರ್ಥಶಾಸ್ತ್ರ ವಿಷಯಕ್ಕೆ ಸಂಬಂಧಿಸಿದ ಪುಸ್ತಕಗಳು ಅವಶ್ಯಕವಾಗಿವೆ. ಜಾಗತಿಕ ಮಟ್ಟದಲ್ಲಿ ಭಾರತದ ಆರ್ಥಿಕ ವ್ಯವಸ್ಥೆ ಕುರಿತ ವಿಶ್ಲೇಷಣೆ ಮತ್ತು ಕಾರ್ಮಿಕರ ಸ್ಥಿತಿಗತಿ ಹಾಗೂ ಕಾರ್ಖಾನೆಗಳಲ್ಲಿ ಮಹಿಳೆಯರ ಆತಂರಿಕ ಮತ್ತು ಬಾಹ್ಯವಾಗಿ ಎದುರಿಸುವ ಸಮಸ್ಯೆಗಳನ್ನು ತಿಳಿಯಲು ಈ 'ಸಿದ್ಧ ಉಡುಪು ಕಾರ್ಖಾನೆಗಳಲ್ಲಿನ ಮಹಿಳಾ ಮತ್ತು ಕಾರ್ಮಿಕರ ಭವಿಷ್ಯ ಪುಸ್ತಕವು ವಿದ್ಯಾರ್ಥಿಗಳಿಗೆ ಉಪಯುಕ್ತವಾಗಿದೆ ಎಂದು ಕಲಬುರಗಿಯ ಕರ್ನಾಟಕ ಕೇಂದ್ರಿಯ ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಬಸವರಾಜು ಎಂ. ಅಭಿಪ್ರಾಯಪಟ್ಟರು.
ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ಅರ್ಥಶಾಸ್ತ್ರ ವಿಭಾಗದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಪುಸ್ತಕ ಬಿಡುಗಡೆ ಮತ್ತು ಆರ್ಥಿಕ ಸಂವಾದ ಕಾರ್ಯಕ್ರಮದಲ್ಲಿ ಮಹಿಳಾ ವಿವಿಯ ಅರ್ಥಶಾಸ್ತ್ರ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಸುರೇಶ ಕೆ.ಪಿ. ಅವರು ರಚಿಸಿದ 'ಸಿದ್ಧ ಉಡುಪು ಕಾರ್ಖಾನೆಗಳಲ್ಲಿ ಮಹಿಳಾ ಮತ್ತು ಕಾಮರ್ಿಕರ ಭವಿಷ್ಯ ಪುಸ್ತಕ ಬಿಡುಗಡೆ ಮಾಡಿ ಅವರು ಮಾತನಾಡಿದರು.
ಈ ಪುಸ್ತಕವು ಕಾರ್ಖಾನೆ ಮತ್ತು ಮಹಿಳೆಯರಿಗೆ ಸಂಬಂಧಿಸಿದ ಪುಸ್ತಕವಾಗಿದ್ದು, ಲೇಖಕರು ಪುಸ್ತಕವನ್ನು ಏಳು ಅಧ್ಯಾಯಗಳಲ್ಲಿ ವಿವರಿಸಿದ್ದಾರೆ. 2/3ರಷ್ಟು ಮಹಿಳಾ ಕಾರ್ಮಿಕರುಕಾರ್ಖಾನೆಗಳಲ್ಲಿ ಕೆಲಸಮಾಡುತ್ತಾರೆ ಅವರಿಗೆ ಉದ್ಯೋಗ ಭದ್ರತೆಯ ಕೊರತೆ, ಕಾರ್ಖಾನೆಗಳ ಕಾನೂನು ನಿಯಮಗಳ ಬಗ್ಗೆ ಅರಿವಿಲ್ಲದರಿಂದ ತಮ್ಮ ಹಕ್ಕುಗಳನ್ನು ಪಡೆಯುವಲ್ಲಿ ಹಿಂದೆ ಉಳಿಯುತಿದ್ದಾರೆ ಎಂದು ಅವರು ತಿಳಿಸಿದರು.
ಮುಖ್ಯಅತಿಥಿಯಾಗಿ ಆಗಮಿಸಿದ್ದ ಮೈಸೂರಿನ ಖ್ಯಾತ ಲೇಖಕ ಮತ್ತು ಆಥರ್ಿಕ ವಿಶ್ಲೇಷಕ ಡಾ.ಎಚ್.ಆರ್. ಕೃಷ್ಣಯ್ಯಗೌಡ ವಿದ್ಯಾಥರ್ಿನಿಯರೊಂದಿಗೆ ಸಂವಾದ ನಡೆಸಿದರು.
ಇದೇ ಸಂದರ್ಭದಲ್ಲಿ ಅರ್ಥಶಾಸ್ತ್ರ ಅಧ್ಯಯನ ವಿಭಾಗದ ಮುಖ್ಯಸ್ಥ ಡಾ.ಆರ್.ವಿ.ಗಂಗಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ವಿವಿಧ ವಿಭಾಗಗಳ ಪ್ರಾಧ್ಯಾಪಕರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು, ಸಂಶೋಧನ ಮತ್ತು ಸ್ನಾತಕೋತ್ತರವಿದ್ಯಾರ್ಥಿನಿಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಅರ್ಥಶಾಸ್ತ್ರ ವಿಭಾಗದ ವಿದ್ಯಾಥರ್ಿನಿ ಮಧು ಪ್ರಾರ್ಥಿಸಿದರು . ಶಿಲ್ಪಾ ನಿರೂಪಿಸಿದರು. ಕೀತರ್ಿ ಎಚ್. ವಂದಿಸಿದರು.