ವಿಜಯಪುರ: ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಶೀಲನಾ ಕಾರ್ಯಕ್ರಮ ಆರಂಭ

ಲೋಕದರ್ಶನ ವರದಿ

ವಿಜಯಪುರ 12: ಭವಿಷ್ಯದ ಯುವ ಮತದಾರರಲ್ಲಿ ಚುನಾವಣೆ ಮತ್ತು ಮತದಾನ ಪ್ರಕ್ರಿಯೆಗಳ ಕುರಿತಂತೆ ಜಾಗೃತಿ ಮೂಡಿಸಲು ಪ್ರತಿ ಶೈಕ್ಷಣಿಕ ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಯಗಳ ವ್ಯಾಪ್ತಿಯಲ್ಲಿ ಮತದಾರರ ಸಾಕ್ಷರತಾ ಸಂಘ(ಇಲೆಕ್ಟೊರಲ್ ಲಿಟರಸಿ ಕ್ಲಬ್)ಗಳನ್ನು ರಚಿಸುವ ಜೊತೆಗೆ ಪ್ರತಿ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಕೇಂದ್ರಗಳಲ್ಲಿ ಚುನಾವಣಾ ಜಾಗೃತಿ ಸಂಘಗಳನ್ನು ಸ್ಥಾಪಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿಗಳಾದ ನಿಂಗಪ್ಪ ಗೋಠೆ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಸ್ವೀಪ್ ಕಾರ್ಯಕ್ರಮದ ಅಂಗವಾಗಿ ಕರೆಯಲಾದ ಜಿಲ್ಲಾ ಹಾಗೂ ತಾಲೂಕಾ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜಿಲ್ಲೆಯ ಪ್ರತಿಯೊಂದು ಶಾಲಾ-ಕಾಲೇಜ್ಗಳನ್ನು ಮತದಾರರ ಸಾಕ್ಷರತಾ ಸಂಘಗಳನ್ನು ತಕ್ಷಣ ರಚಿಸಿಕೊಳ್ಳುವ ಜೊತೆಗೆ ಆಯಾ ಶಾಲಾ-ಕಾಲೇಜ್ಗಳ ವ್ಯಾಪ್ತಿಯಲ್ಲಿ ಜಾಥಾ ಕಾರ್ಯಕ್ರಮಗಳ ಮೂಲಕ ಅಕ್ಟೋಬರ್ 15ರವರೆಗೆ ಮತದಾರರ ಪಟ್ಟಿಯಲ್ಲಿ ಹೆಸರು ಪರಿಶೀಲನೆ, ಭಾವಚಿತ್ರ, ಜನ್ಮದಿನಾಂಕ ಪರಿಶೀಲನೆ, ನೂತನ ಯುವ ಮತದಾರರು ಹಾಗೂ ವಿಕಲಚೇತನ ಯುವ ಮತದಾರರು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡಿಸುವ ಕುರಿತು ಜಾಗೃತಿ ಮೂಡಿಸುವಂತೆ ಸೂಚನೆ ನೀಡಿದರು. 

ಈಗಾಗಲೇ ಜಿಲ್ಲೆಯಾದ್ಯಂತ ಮತದಾರರ ಪರಿಶೀಲನಾ ಕಾರ್ಯಕ್ರಮ ಆರಂಭಗೊಂಡಿದ್ದು, ಅಕ್ಟೋಬರ್ 15ರವರೆಗೆ ಪರಿಶೀಲನೆ ನಡೆಯಲಿದೆ. ಮತದಾರರು 1950ಗೆ ಉಚಿತ ಕರೆ ಮಾಡುವ ಜೊತೆಗೆ ಚುನಾವಣಾ ಆಯೋಗ ನಿಗದಿಪಡಿಸಿದ ದಾಖಲೆಗಳಲ್ಲೊಂದು ದಾಖಲೆ ಸಲ್ಲಿಸಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡಿಸಬಹುದಾಗಿದೆ. ಮತದಾರರ ಚೀಟಿಯಲ್ಲಿ ಭಾವಚಿತ್ರ ಹಳೆಯದಾಗಿದ್ದರೂ ಕೂಡ ಬದಲಾಯಿಸುವ ಕುರಿತಂತೆ, ಮತದಾರರ ಸೌಲಭ್ಯ ಕೇಂದ್ರಗಳು, ಮತದಾರರ ಪಟ್ಟಿ ಪರಿಶೀಲನೆ, ಸಹಾಯವಾಣಿ, ಮೊಬೈಲ್ ಆಪ್, ಎನ್ವಿಎಸ್ಪಿ ಪೋರ್ಟಲ್ ಯಾವುದಾದರೊಂದನ್ನು ಆಯ್ಕೆ ಮಾಢುವ ಬಗ್ಗೆ, ಎಪಿಕ್ ಸಂಖ್ಯೆಯೊಂದಿಗೆ ಲಾಗಿನ್ ಆಗುವ ಬಗ್ಗೆ ತಿತಿತಿ.ಟಿತಠಿ.ಟಿ ಪೋರ್ಟಲ್ಗೆ ಭೇಟಿ ನೀಡುವ ಬಗ್ಗೆ, ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ ಸೇರಿದಂತೆ ಇನ್ನಿತರ ವಿಷಯಗಳ ಬಗ್ಗೆ ಘೋಷಣಾ ವಾಕ್ಯಗಳನ್ನು ಸಿದ್ಧಪಡಿಸಿಕೊಂಡು ಸೆಪ್ಟಂಬರ್ 13ರಂದು ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವಂತೆ ಸೂಚಿಸಿದರು.

ಈ ಕುರಿತಂತೆ ಪ್ರತಿ ತಿಂಗಳು 5ನೇ ತಾರೀಖಿನೊಳಗೆ ವರದಿಯನ್ನು ಸಲ್ಲಿಸಬೇಕು. 18 ವರ್ಷ ಪೂರೈಸಿದ ಯುವ ಮತದಾರರ ಪಟ್ಟಿಗಳು, ವಿಕಲಚೇತನರ ಪಟ್ಟಿಗಳನ್ನು ಸಿದ್ದಪಡಿಸಿಕೊಳ್ಳಬೇಕು. ಗ್ರಾಮ ಮಟ್ಟದಿಂದ ಜಿಲ್ಲಾ ಮಟ್ಟದವರೆಗಿನ ಎಲ್ಲ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ಹಮ್ಮಿಕೊಳ್ಳುವಂತೆ ಅವರು ಸೂಚನೆ ನೀಡಿದರು.

ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿದರ್ೇಶಕ ಸಿ.ಬಿ.ಕುಂಬಾರ ಸ್ವಾಗತಿಸಿದರು. ಜಿಲ್ಲಾ ಮಟ್ಟದ ಹಾಗೂ ತಾಲೂಕಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.