ಲೋಕದರ್ಶನ ವರದಿ
ವಿಜಯಪುರ 06: ವಿದ್ಯಾರ್ಥಿನಿಯರು ನೈಸಗರ್ಿಕ ವಾತಾವರಣದಲ್ಲಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ತಮ್ಮಲ್ಲಿ ನಾಯಕತ್ವ ಗುಣಗಳನ್ನು ಬೆಳಸಿಕೊಳ್ಳಿ ಎಂದು ಮಹಿಳಾ ವಿವಿಯ ಕುಲಪತಿ ಪ್ರೊ. ಸಬಿಹಾ ವಿದ್ಯಾಥರ್ಿನಿಯರಿಗೆ ಕರೆ ನೀಡಿದರು.
ನಗರದ ಭೂತನಾಳ ಕೆರೆಯ ಉದ್ಯಾನವನ ಮತ್ತು ಮೀನು ಸಂಸ್ಕರಣಾ ಘಟಕದ ಕಟ್ಟಡದಲ್ಲಿ ಕನರ್ಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ಅಧ್ಯಯನ ಮತ್ತು ಕ್ರೀಡಾ ವಿಜ್ಞಾನ ವಿಭಾಗದ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ 'ನಾಯಕತ್ವ ಹಾಗೂ ಮನೋಲ್ಲಾಸ ತರಬೇತಿ ಶಿಬಿರ'ವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಆಕ್ಸ್ಫರ್ಡ್ ಇಂಗ್ಲಿಷ ಶಿಕ್ಷಣ ಸಮೂಹ ಸಂಸ್ಥೆಗಳ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಮಾತನಾಡಿ, ವಿದ್ಯಾರ್ಥಿಗಳಲ್ಲಿನ ನೈತಿಕತೆ, ತಾಯಿಯ ಮಮತೆ ಒಳಗೊಂಡಂತೆ ನಾಯಕತ್ವ ಗುಣಗಳನ್ನು ಬೆಳೆಸಿಕೊಂಡು ವಿದ್ಯಾರ್ಥಿಗಳಲ್ಲಿ ಮುಂದಿನ ಭಾವಿ ಕ್ರೀಡಾಪಟುಗಳನ್ನು ಗುರುತಿಸಿ ಮತ್ತು ಬೆಳೆಸುವ ಜವಾಬ್ದಾರಿ ನಿಮ್ಮ ಮೇಲಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ದೈಹಿಕ ಶಿಕ್ಷಣ ಅಧ್ಯಯನ ಮತ್ತು ಕ್ರೀಡಾ ವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರೊ.ಡಿ.ಎಂ.ಜ್ಯೋತಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಮೀನು ಸಂಗ್ರಹಣಾ ಸ್ನಾತಕೋತ್ತರ ಕೇಂದ್ರದ ಮುಖ್ಯಸ್ಥ ಪ್ರೊ.ವಿಜಯಕುಮಾರ, ವಿಭಾಗದ ಪ್ರಾಧ್ಯಾಪಕರು, ಸಂಶೋಧನಾ ಮತ್ತು ಸ್ನಾತಕೋತ್ತರ ವಿದ್ಯಾರ್ಥಿನಿಯರು ಮತ್ತು ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಅಶ್ವಿನಿ ಪ್ರಾರ್ಥಿಸಿದರು. ಶಿಬಿರದ ನಿರ್ದೇಶಕ ಡಾ.ರಾಜಕುಮಾರ. ಮಾಲಿಪಾಟೀಲ ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು. ಡಾ.ಕೆ.ಪಿ.ಮಾರ್ಟನ್ ವಂದಿಸಿದರು. ಡಾ.ಹನುಮಂತಯ್ಯ ಪೂಜಾರಿ ನಿರೂಪಿಸಿದರು.