ಲೋಕದರ್ಶನ ವರದಿ
ವಿಜಯಪುರ 28; ಐತಿಹಾಸಿಕ ಮಹತ್ವ ಹೊಂದಿರುವ ವಿಜಯಪುರವನ್ನು ಪ್ರವಾಸೋದ್ಯಮ ಅಭಿವೃದ್ದಿ ತಾಣವಾಗಿ ಬೆಳೆಸಲು ಅವಶ್ಯಕ ಕ್ರಮಗಳನ್ನು ಕೈಗೊಳ್ಳಲಾಗುವುದೆಂದು ಗಣಿ ಮತ್ತು ಭೂ ವಿಜ್ಞಾನ ಖಾತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ.ಸಿ.ಪಾಟೀಲ ಹೇಳಿದರು.
ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿಂದು ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಹಾಗೂ ನಗರಾಭಿವೃದ್ದಿ ಪ್ರಾಧಿಕಾರದ ವತಿಯಿಂದ ಆಯೋಜಿಸಲಾಗಿದ್ದ ವಿಶ್ವ ಪ್ರವಾಸೋದ್ಯಮ ದಿನವನ್ನು ಉದ್ಘಾಟಿಸಿ ಮಾತನಾಡಿದರು.
ವಿಜಯಪುರ ಜಿಲ್ಲೆಯು ವಿಶ್ವ ಮಟ್ಟದ ಪ್ರವಾಸಿ ತಾಣವಾಗಿ ಅಭಿವೃದ್ದಿ ಹೊಂದುವ ಎಲ್ಲ ಅರ್ಹತೆಯನ್ನು ಹೊಂದಿದ್ದು, ಪ್ರವಾಸೋದ್ಯಮ ಅಭಿವೃದ್ದಿಗೊಳಿಸಲು ಸಕರ್ಾರದ ಮಟ್ಟದಲ್ಲಿ ಸಕಲ ಪ್ರಯತ್ನಗಳನ್ನು ಮಾಡುವುದಾಗಿ ಸಚಿವರು ಹೇಳಿದರು.
ಪ್ರವಾಸೊದ್ಯಮವು ಮಾನವ ವಿಕಾಸ ಹಾಗೂ ಆಥರ್ಿಕ ಅಭಿವೃದ್ದಿಗೆ ಸಹಕಾರಿಯಾಗಿದ್ದು, ಇಂತಹ ಅರ್ಹತೆಯನ್ನು ವಿಜಯಪುರ ಜಿಲ್ಲೆ ಹೊಂದಿರುವುದು ಹೆಮ್ಮೆಯ ವಿಷಯವಾಗಿದೆ. ಪ್ರವಾಸೋದ್ಯಮವನ್ನು ಅಭಿವೃದ್ದಿಗೊಳಿಸಲು ಕೆಲವು ನಿಯಮಗಳನ್ನು ಪಾಲಿಸಬೇಕಾಗುತ್ತದೆ ಎಂದ ಅವರು, ಪ್ರವಾಸೋದ್ಯಮಕ್ಕೆ ಮೀಸಲಿಟ್ಟ ಅನುದಾನ ಸಮರ್ಪಕವಾಗಿ ಬಳಕೆಯಾಗಬೇಕು. ವಿದೇಶಿ ಪ್ರವಾಸಿಗರನ್ನು ಗೌರವಾದರ ಭಾವನೆಯಿಂದ ನೋಡುವ ಜೊತೆಗೆ ವಿವಿಧ ಪ್ರವಾಸಿ ತಾಣಗಳ ವೀಕ್ಷಣೆಗೆ ಹೆಚ್ಚಿನ ದರ ಆಕರಿಸುವಂತಹ ಚಟುವಟಿಕೆಗಳು ನಡೆಯದೇ ಇದ್ದ ಪಕ್ಷದಲ್ಲಿ ಪ್ರವಾಸೋದ್ಯಮ ಅಭಿವೃದಿಗೆ ನೆರವಾಗಲಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ರಾಣಿಚೆನ್ನಮ್ಮ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರದ ಅತಿಥಿ ಉಪನ್ಯಾಸಕ ಆದೀಶ ನಾಗನೂರ ವಿಶೇಷ ಉಪನ್ಯಾಸ ನೀಡಿದರು. ಇದೇ ಸಂದರ್ಭದಲ್ಲಿ ಪ್ರವಾಸೋದ್ಯಮ ಕುರಿತು ವಿದ್ಯಾಥರ್ಿಗಳಿಗೆ ಏರ್ಪಡಿಸಲಾಗಿದ್ದ ಪ್ರಬಂಧ ಸ್ಪಧರ್ೆ ವಿಜೇತರಿಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು. ಪ್ರವಾಸೋದ್ಯಮ ಇಲಾಖೆಯ ಪ್ರವಾಸಿ ಟ್ಯಾಕ್ಸಿ ಯೋಜನೆಯಡಿ ಫಲಾನುಭವಿಗಳಿಗೆ ಸೌಲಭ್ಯ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಪ್ರವಾಸಿ ಧ್ವನಿ ಮಾರ್ಗದಶರ್ಿ ಆಪ್ನ್ನು ಬಿಡುಗಡೆಗೊಳಿಸಲಾಯಿತು. ದೇವರಹಿಪ್ಪರಗಿ ಶಾಸಕ ಸೋಮನಗೌಡ ಪಾಟೀಲ ಸಾಸನೂರ, ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಕಾಸ ಕಿಶೋರ ಸುರಳಕರ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಪ್ರಕಾಶ ನಿಕ್ಕಂ ಅವರು ಉಪಸ್ಥಿತರಿದ್ದರು.