ವಿಜಯಪುರ: ನೀತಿ ಸಂಹಿತೆ ಉಲ್ಲಂಘನೆ: ಸುದ್ದಿಗಳ ಮೇಲೆ ನಿಗಾ ಇಡಲು ಸೂಚನೆ

ಲೋಕದರ್ಶನ ವರದಿ

ವಿಜಯಪುರ 29: ಲೋಕಸಭಾ ಸಾರ್ವತ್ರಿಕ ಚುನಾವಣೆ ಅಂಗವಾಗಿ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳನ್ನು ತಡೆಯಲು ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮಗಳಲ್ಲಿ ಪ್ರಕಟವಾಗುವ ಕಾಸಿಗಾಗಿ ಸುದ್ದಿಗಳ ಮೇಲೆ ಕಟ್ಟುನಿಟ್ಟಿನ ನಿಗಾ ಇಡುವಂತೆ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರೂ ಆದ ಜಿಲ್ಲಾ ಎಂಸಿಎಂಸಿ ಸಮಿತಿಯ ನೋಡಲ್ ಅಧಿಕಾರಿಗಳಾದ ಓಂಕಾರ ಕಾಕಡೆ ಅವರು ಸೂಚನೆ ನೀಡಿದರು. 

ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿರುವ ನಗರಾಭಿವೃದ್ದಿ ಕೋಶದ ಯೋಜನಾ  ನಿದರ್ೇಶಕರ ಕಚೇರಿಯಲ್ಲಿ ಮಾಧ್ಯಮ ದೃಢೀಕರಣ ಹಾಗೂ ಕಣ್ಗಾವಲು ಸಮಿತಿಯ (ಎಂಸಿಎಂಸಿ) ಸದಸ್ಯರು ಹಾಗೂ ಸಿಬ್ಬಂದಿಗಳೊಂದಿಗೆ ನಡೆಸಿದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗಾಗಿ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ನಿಗಾ ಇಡುವುದು ಅತ್ಯಂತ ಅವಶ್ಯಕವಾಗಿದೆ. ಈ ಹಿನ್ನಲೆಯಲ್ಲಿ ಚುನಾವಣೆ ಸಂದರ್ಭದಲ್ಲಿ ನಡೆಯುವ ಅಕ್ರಮಗಳ ತಡೆಗಾಗಿ ಹಾಗೂ ವಿವಿಧ ಸಮೂಹ ಮಾಧ್ಯಮಗಳ ಮೂಲಕ ಪ್ರಸಾರವಾಗುವ ಯಾವುದೇ ರೀತಿಯ ಕಾಸಿಗಾಗಿ ಸುದ್ದಿಗಳ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸುವಂತೆ ಸಂಬಂಧಿಸಿದ ಸಿಬ್ಬಂದಿಗಳಿಗೆ ಸಲಹೆ ನೀಡಿದರು. 

  ಈ ಕೋಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಸಿಬ್ಬಂದಿಗಳು ದಿನನಿತ್ಯ ಪತ್ರಿಕೆಗಳಲ್ಲಿ ಪ್ರಕಟವಾಗುವ ಕಾಸಿಗಾಗಿ ಸುದ್ದಿಗಳ ಬಗ್ಗೆ ನಿಗಾ ಇಡುವ ಜೊತೆಗೆ ಯಾವುದೇ ರೀತಿಯ ಇಂತಹ ಸುದ್ದಿಗಳು ಪ್ರಕಟವಾದಲ್ಲಿ ಮೇಲಾಧಿಕಾರಿಗಳ ಗಮನಕ್ಕೆ ತರಬೇಕು. ಅದರಂತೆ ದಿನನಿತ್ಯ ವಿದ್ಯುನ್ಮಾನ ಮಾಧ್ಯಮಗಳಲ್ಲಿ ಪ್ರಸಾರವಾಗುವ ಅನುಮತಿ ಇಲ್ಲದ ಜಾಹೀರಾತುಗಳು ಹಾಗೂ ಕಾಸಿಗಾಗಿ ಸುದ್ದಿಗಳ ಮೇಲೆ ನಿಗಾ ಇಡುವ ಜೊತೆಗೆ ಮಾದರಿ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಪಟ್ಟ ವಿಷಯಗಳನ್ನು ರಜಿಸ್ಟರ್ನಲ್ಲಿ ನಮೂದು ಮಾಡುವ ಜೊತೆಗೆ ತಕ್ಷಣ ಮೇಲಾಧಿಕಾರಿಗಳ ಗಮನಕ್ಕೆ ತರುವಂತೆ ಸೂಚನೆ ನೀಡಿದರು. 

ಸಭೆಯಲ್ಲಿ ಸಮಿತಿಯ ಸದಸ್ಯರೂಗಳಾದ ಡೇಲಿ ಸಾಲಾರ ಪತ್ರಿಕೆಯ ವರದಿಗಾರರಾದ ರಫಿ ಭಂಡಾರಿ, ಸಮಿತಿ ಸದಸ್ಯ ಕಾರ್ಯದಶರ್ಿಗಳಾದ ಪ್ರವಾಸೋದ್ಯಮ ಇಲಾಖೆ ಉಪನಿದರ್ೇಶಕ ಮಹೇಶ ಕ್ಯಾತನ್, ಸದಸ್ಯರುಗಳಾದ ಪ್ರೊ: ಗೌಡರ ಹಾಗೂ ಪ್ರೊ: ಕುಲಕಣರ್ಿ ಸೇರಿದಂತೆ ಸಮಿತಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು. ವಾತರ್ಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿದರ್ೇಶಕ ಸುಲೇಮಾನ ನದಾಫ್ ಕೊನೆಯಲ್ಲಿ ವಂದಿಸಿದರು.