ವಿಜಯಪುರ: ಹೆಣ್ಣು ಮಗುವಿನ ಸಪ್ತಾಹ ಕಾರ್ಯಕ್ರಮ

ಲೋಕದರ್ಶನ ವರದಿ

ವಿಜಯಪುರ 20: ಯಾವ ರಾಷ್ಟ್ರದ ಸಂಸ್ಕೃತಿಯಲ್ಲಿ ಮಹಿಳೆಯರು ಮತ್ತು ಹೆಣ್ಣು ಮಗುವನ್ನು ಅತ್ಯಂತ ಗೌರವದಿಂದ ಕಾಣುತ್ತಾರೋ ಅಂತಹ ರಾಷ್ಟ್ರಗಳು ಅತ್ಯಂತ ಉತ್ಕೃಷ್ಟವಾಗಿ ಬೆಳೆಯುತ್ತವೆ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಹೇಳಿದರು.

ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜಿಲ್ಲಾಡಳಿತ,ಜಿಲ್ಲಾ ಪಂಚಾಯತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,ಶಿಶು ಅಭಿವೃದ್ಧಿ ಯೋಜನೆ (ನಗರ ಹಾಗೂ ಗ್ರಾಮೀಣ), ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ``ಮಗಳನ್ನು ರಕ್ಷಿಸಿ-ಮಗಳನ್ನು ಓದಿಸಿ''ರಾಷ್ಟ್ರೀಯ ಹೆಣ್ಣು ಮಗುವಿನ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವೇದ ಉಪನಿಷತ್ಗಳಲ್ಲಿದ್ದ ಮಾತೃದೇವೋಭವ ಎಂಬುದನ್ನು ಕಟ್ಟುನಿಟ್ಟಾಗಿ ಪಾಲಿಸಿದ್ದರೆ ಇದ್ದಿದ್ದರೆ ಈಗ ಬೇಟಿ ಬಚಾವೋ-ಬೇಟಿ ಪಡಾವೊದಂತಹ ಪರಿಸ್ಥಿತಿ ಉದ್ಭವವಾಗುತ್ತಿರಲಿಲ್ಲ ಎಂದ ಅವರು, 2011 ರ ಜನಗಣತಿ ಪ್ರಕಾರ ಜಿಲ್ಲೆಯಲ್ಲಿ ಲಿಂಗಾನುಪಾತ 935 ಇದ್ದು  ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆಗಳಂತಹ ಅಕ್ರಮ ಚಟುವಟಿಕೆಗಳ ಮೇಲೆ ತೀವ್ರ ನಿಗಾ ಇಡುವ ಜೊತೆಗೆ ನಿಯಂತ್ರಿಸಲು ಎಲ್ಲರೂ ಮುಂದಾಗುವಂತೆ ಕರೆ ನೀಡಿದರು. 

ಲಿಂಗಸಮಾನತೆ ಮಾಡಲು ಕೇಂದ್ರ ಸಕರ್ಾರ ಬೇಟಿ- ಬಚಾವೋ ಬೇಟಿ ಪಡಾವೋ ಯೋಜನೆ ಜಾರಿಗೊಳಿಸಿದೆ. ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ, ಭ್ರೂಣಹತ್ಯೆ  ನಿಷೇಧದಂತಹ ಕಟ್ಟುನಿಟ್ಟಿನ ಕಾನೂನು ಮೂಲಕ ನಿಯಂತ್ರಿಸಲು ಇಂತಹ ಅಕ್ರಮ ಕೆಲಸ ಮಾಡುವವರ ಬಗ್ಗೆ ಮಾಹಿತಿ ನೀಡಿದ್ದಲ್ಲಿ ಅಂತವರ ವಿರುದ್ಧ ನಿದರ್ಾಕ್ಷಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು. ಸ್ವೀಡನ್ ದೇಶದ 17 ವರ್ಷದ ಯುವತಿ ಗ್ರೇಟಾಥನ್ಭರ್ಗ ಜಗತ್ತಿನಾದ್ಯಂತ ಸಸಿ ನೆಡುವ ಕುರಿತು ಜಾಗೃತಿ ಮೂಡಿಸುತ್ತಿದ್ದಾಳೆ. ಅವರಂತೆ ಪ್ರತಿಯೊಬ್ಬ ವಿದ್ಯಾಥರ್ಿನಿ ಬೇಟಿ ಬಚಾವೋ-ಬೇಟಿ ಪಡಾವೋ ಯೋಜನೆಯ ಬಗ್ಗೆ ತಮ್ಮ ಗ್ರಾಮ, ನಗರ,ಓಣಿಗಳಲ್ಲಿ ಮಾಹಿತಿ ನೀಡಿ ಜಿಲ್ಲೆಯ ಸುಧಾರಣೆಗೆ ನೆರವಾಗುವಂತೆ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿದರ್ೇಶಕ ಪ್ರಸನ್ನಕುಮಾರ,ಬಿಬಿಬಿಪಿ ಜಿಲ್ಲಾ ಟಾಸ್ಕಫೋರ್ಸ್  ಸಮಿತಿ ಕಾರ್ಯದರ್ಶಿ  ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿದರ್ೇಶಕ ಎಸ್.ಆರ್.ಆಲಗೂರ, ವಾತರ್ಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಸುಲೈಮಾನ ನದಾಫ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅನೀಲ ಎಂ.ಉಕ್ಕಲಿ ಸೇರಿದಂತೆ ಅಂಗನವಾಡಿ ಕಾರ್ಯಕತರ್ೆಯರು ಮತ್ತು ಸಹಾಯಕಿಯರು ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ರಚಿತಾ ಕುಲಕಣರ್ಿ ನಾಡಗೀತೆ ಮತ್ತು ಪ್ರಾರ್ಥನಾ ಗೀತೆ ಹಾಡಿದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ನಿರ್ಮಲಾ ಎಚ್.ಸುರಪುರ ಸ್ವಾಗತಿಸಿದರು. ಯಶೋಧಾ ನಿರೂಪಿಸಿದರು. ಅಶ್ವಿನಿ ವಂದಿಸಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನಿರೂಪಣಾಧಿಕಾರಿ ಕೆ.ಕೆ.ಚವ್ಹಾಣ ಪ್ರಸ್ತಾವಿಕವಾಗಿ ಮಾತನಾಡಿದರು.

ಇದೇ ಸಂದರ್ಭದಲ್ಲಿ ಅತಿಥಿಗಣ್ಯರು ಬೇಟಿ ಪಡಾವೋ,ಬೇಟಿ ಬಚಾವೋ ಸಹಿ ಅಭಿಯಾನಕ್ಕೆ ಚಾಲನೆ ನೀಡಿದರು. ಬಿತ್ತಿಪತ್ರ ಪ್ರಚಾರ ಸಾಮಗ್ರಿ ಬಿಡುಗಡೆಗೊಳಿಸಲಾಯಿತು.