ಲೋಕದರ್ಶನ ವರದಿ
ವಿಜಯಪುರ 10; ಜಿಲ್ಲೆಯಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಅವಶ್ಯಕ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಸಾಂಕ್ರಾಮಿಕ ರೋಗಗಳ ನಿಯಂತ್ರಣ ಜಿಲ್ಲಾ ಕಾರ್ಯಪಡೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜಿಲ್ಲೆಯಾದ್ಯಂತ ಡೆಂಗ್ಯೂ ನಿಯಂತ್ರಣಕ್ಕೆ ಅವಶ್ಯಕ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಹೊರಾಂಗಣ ಹಾಗೂ ಒಳಾಂಗಣ ಫಾಗಿಂಗ್ ಕಾರ್ಯ ಚುರುಕುಗೊಳಿಸಬೇಕು. ವಿಜಯಪುರ ನಗರದ ಮಹಾನಗರ ಪಾಲಿಕೆ ಅಧೀನದಲ್ಲಿರುವ 14 ಫಾಗಿಂಗ್ ಮಶೀನ್ಗಳನ್ನು ತಕ್ಷಣ ದುರಸ್ತಿಗೊಳಿಸಿ, ಫಾಗಿಂಗ್ ಕಾರ್ಯ ಚುರುಕುಗೊಳಿಸಬೇಕು. ಅದರಂತೆ ವಿವಿಧ ತಾಲೂಕಾ ಮತ್ತು ಗ್ರಾಮಗಳ ವ್ಯಾಪ್ತಿಯಲ್ಲಿಯೂ ಕ್ರಮ ಕೈಗೊಳ್ಳಲು ತಿಳಿಸಿದ ಅವರು, ನೀರಿನ ಕ್ಲೋರಿನೇಶನ್ ವಿವಿಧ ನೀರು ಸಂಗ್ರಹಣಾ ತೊಟ್ಟಿಗಳಲ್ಲಿ ಲಾವರ್ಾ ಮೀನು ಬಿಡುವ ಜೊತೆಗೆ ವಿವಿಧ ಸ್ಥಳಗಳಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಚುರುಕುಗೊಳಿಸುವಂತೆ ಸೂಚನೆ ನೀಡಿದರು.
ಡಿಫ್ತೇರಿಯಾಗೆ ಸಂಬಂಧಪಟ್ಟಂತೆ ಕಾಂಪ್ಲಿಕೇಟೆಡ್ ಪ್ರಕರಣಗಳಿಗೆ ಖಾಸಗಿ ಆಸ್ಪತ್ರೆಗಳ ಮಕ್ಕಳ ವೈದ್ಯರಿಂದಲೂ ಕೂಡ ಉಚಿತವಾಗಿ ಸೇವೆ ಕಲ್ಪಿಸಲು ಕ್ರಮ ಕೈಗೊಳ್ಳುವುದಾಗಿ ಮಕ್ಕಳ ತಜ್ಞರಾದ ಡಾ.ಬಿದರಿ ಸಭೆಗೆ ತಿಳಿಸಿದರು.
ಈ ಲಸಿಕಾ ಅಭಿಯಾನಕ್ಕೆ ಸಂಬಂಧಪಟ್ಟಂತೆ ಹೆಚ್ಚಿನ ಮಾಹಿತಿಗಾಗಿ ಕಿರಿಯ ಆರೋಗ್ಯ ಮಹಿಳಾ ಕಾರ್ಯಕತರ್ೆಯರು, ಶಾಲಾ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತಯರು ಅಥವಾ 24/7 ಉಚಿತ ಆರೋಗ್ಯ ಸಹಾಯವಾಣಿ 104ನ್ನು ಸಂಪರ್ಕಾಸಬಹುದಾಗಿದೆ ಎಂದು ಸಭೆಯಲ್ಲಿ ತಿಳಿಸಲಾಯಿತು.
ಉದರದರ್ಶಕ ಸಂತಾನ ಹರಣ ಶಸ್ತ್ರ ಚಿಕಿತ್ಸಾ ಶಿಬಿರ: ಜಿಲ್ಲೆಯಾದ್ಯಂತ ಉದರ ದರ್ಶಕ ಸಂತಾನ ಹರಣ ಶಸ್ತ್ರ ಚಿಕಿತ್ಸಾ ಶಿಬಿರಗಳನ್ನು ನಿಗದಿತ ದಿನಾಂಕವಾರು ಹಮ್ಮಿಕೊಳ್ಳುವ ಜೊತೆಗೆ ಶೇಕಡಾ ನೂರರಷ್ಟು ಪ್ರಗತಿ ಸಾಧಿಸಲು ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ದಗರ್ಾ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರಾಷ್ಟ್ರ ಮಟ್ಟದ ಗುಣಮಟ್ಟ ಭರವಸೆ ಪ್ರಶಸ್ತಿ:
ಜಿಲ್ಲಾ ಮಟ್ಟದ ಗುಣಮಟ್ಟ ಖಾತ್ರಿ ಸಮಿತಿ, ಗುಣಮಟ್ಟ ಭರವಸೆ ಹಾಗೂ ಕಾಯಕಲ್ಪ ಕಾರ್ಯಕ್ರಮಗಳ ಕುರಿತಂತೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ವಿವಿಧ ಆಸ್ಪತ್ರೆಗಳಿಗೆ ಲಭ್ಯವಿರುವ ಮೂಲಸೌಕರ್ಯ ಮತ್ತು ಸ್ವಚ್ಛತಾ ಕಾರ್ಯಕ್ರಮಗಳ ಕುರಿತು ಪರಿಶೀಲನೆ ನಡೆಸಿದರು.
ಇದೇ ಸಂದರ್ಭದಲ್ಲಿ ಮೂಲಸೌಕರ್ಯ ಕೊರತೆ ಇರುವ ಜಿಲ್ಲೆಯ 5 ತಾಲೂಕುಗಳ ಆರೋಗ್ಯ ಕೇಂದ್ರಗಳ ಪರಿಶೀಲನೆ ಸಹ ನಡೆಸಿದರು.
ರಾಷ್ಟ್ರೀಯ ಗುಣಮಟ್ಟದ ಭರವಸೆ ಮಾನದಂಡದ ಕಾರ್ಯಕ್ರಮದಡಿ ರಾಜ್ಯದ ವಿಜಯಪುರ, ಶಿವಮೊಗ್ಗ ಹಾಗೂ ಧಾರವಾಡ ಜಿಲ್ಲೆಗಳ ಜಿಲ್ಲಾ ಆಸ್ಪತ್ರೆಗಳಿಗೆ ಮಾತ್ರ ದೊರೆತಿದೆ ಎಂದು ಸಭೆಯಲ್ಲಿ ತಿಳಿಸಲಾಯಿತು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಮಹೇಂದ್ರ ಕಾಪ್ಸೆ, ಜಿಲ್ಲಾ ಆಸ್ಪತ್ರೆ ಶಸ್ತ್ರ ಚಿಕಿತ್ಸಕ ಡಾ. ಶರಣಪ್ಪ ಕಟ್ಟಿ, ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಜೇಶ್ವರಿ ಗೊಲಗೇರಿ, ಡಾ.ಮಹೇಶ ನಾಗರಬೆಟ್ಟ, ಮಲೇರಿಯಾ ಅಧಿಕಾರಿ ಡಾ.ಜೈಬುನ್ನೀಸಾ ಬೀಳಗಿ, ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಸಂಪತ್ ಗುಣಾರಿ, ತಂಬಾಕು ನಿಯಂತ್ರಣಾಧಿಕಾರಿ ಡಾ.ಎಂ.ಬಿ. ಬಿರಾದಾರ, ಡಾ.ಮುಕುಂದ ಗಲಗಲಿ, ಎಚ್ಐವಿ ನಿಯಂತ್ರಣಾಧಿಕಾರಿ ಡಾ.ಐ.ಎಸ್. ಧಾರವಾಡಕರ, ಡಾ.ಚನ್ನಮ್ಮ ಕಟ್ಟಿ, ಡಾ.ಪ್ರಕಾಶ ಗೋಟಖಂಡ್ಕಿ, ಡಾ.ಸಂತೋಷ ನಂದಿ, ಡಾ.ಉಪಾಸೆ, ಡಾ.ಸೂಚೆತಾ ಆಕಾಶ ಸೇರಿದಂತೆ ತಾಲೂಕಾ ಮಟ್ಟದ ಆರೋಗ್ಯ ಅಧಿಕಾರಿಗಳು ಉಪಸ್ಥಿತರಿದ್ದರು.