ವಿಜಯಪುರ: 70 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಲೋಕದರ್ಶನ ವರದಿ

ವಿಜಯಪುರ 12: ವಿದ್ಯಾಥರ್ಿ ಜೀವನದಲ್ಲಿ ಹಲವಾರು ಸವಾಲುಗಳು ಎದುರಾಗುವುದು ಸಹಜ. ಅವುಗಳನ್ನು ಎದುರಿಸುವ ಛಲ, ಸಾಮಥ್ರ್ಯ ಪ್ರತಿ ವಿದ್ಯಾರ್ಥಿಗಳಲ್ಲಿರಬೇಕು ಎಂದು ಜಿಲ್ಲಾ ಕೇಂದ್ರ ಕಾರಾಗೃಹದ ಅಧೀಕ್ಷಕ ಎಂ.ಸುಂದರ ಹೇಳಿದರು.

ನಗರದ ಸಿಕ್ಯಾಗ ಮಹಿಳಾ ಪದವಿ ಮಹಾವಿದ್ಯಾಲಯದ ಸಭಾಭವನದಲ್ಲಿ ವಿಜಯಪುರ ತಾಲೂಕಿನ ಆಹೇರಿಯ ಬಸವೇಶ್ವರ ಕರ್ಮವೀರ ಕಲಾ, ಸಾಹಿತ್ಯ, ಸಂಸ್ಕೃತಿ ವೇದಿಕೆಯು ಕಳೆದ ಮಾರ್ಚ ಏಪ್ರಿಲ್ ತಿಂಗಳಲ್ಲಿ ಜರುಗಿದ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ.ಯಲ್ಲಿ ಶೇಕಡಾ 90ಕ್ಕಿಂತಲೂ ಹೆಚ್ಚು ಅಂಕ ಗಳಿಸಿದ ಜಿಲ್ಲೆಯ ಎಲ್ಲಾ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಜಿಲ್ಲಾಮಟ್ಟದ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾಥರ್ಿ ಜೀವನ ಅಮೂಲ್ಯವಾದುದು. ವ್ಯರ್ಥ ಸಮಯ ಕಳೆಯದೆ ವಿದ್ಯಾಥರ್ಿಗಳು ಆತ್ಮ ವಿಶ್ವಾಸ ಮತ್ತು ಆತ್ಮಬಲದೊಂದಿಗೆ ಅಧ್ಯಯನ ಮಾಡಿದಲ್ಲಿ ಮಾತ್ರ ಜೀವನದಲ್ಲಿ ಮುಂದೆ ಬರಲು ಸಾಧ್ಯ ಎಂದರು. 

    ಸಿಕ್ಯಾಬ ಶಿಕ್ಷಣ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ  ಎ.ಎಸ್. ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಖಾದಿ ಗ್ರಾಮೋದ್ಯೋಗ ಅಧ್ಯಕ್ಷ ಬಾಪುಗೌಡ ಪಾಟೀಲ, ಡಾ.ಮೊಹ್ಮದ ಅಫ್ಜಲ್ ಮಾತನಾಡಿದರು. ಡಾ.ಮಲ್ಲಿಕಾರ್ಜುನ ಮೇತ್ರಿ ಶೈಕ್ಷಣಿಕ ಕ್ಷೇತ್ರದಲ್ಲಿ ವಿದ್ಯಾಥರ್ಿಗಳ ಪಾತ್ರ ಕುರಿತು ಉಪನ್ಯಾಸ ನೀಡಿದರು. 

ಬಸವ ಸಾಹಿತ್ಯ ವೇದಿಕೆ ಅಧ್ಯಕ್ಷ ಬಂಡೆಪ್ಪ ತೇಲಿ ಪ್ರಾಸ್ತಾವಿಕವಾಗಿ ಮಾತನಾಡಿದರು.  ಅನೀಲ ಅಗಸರ ನಿರೂಪಿಸಿದರು. ಹನಮಂತ ತೇಲಿ ವಂದಿಸಿದರು.  ಮಾಜಿ ಸೈನಿಕ ಶೇಖರ ಹೂಗಾರ, ಸಿಕ್ಯಾಬ ಮಹಿಳಾ ಕಾಲೇಜಿನ ಉಪನ್ಯಾಸಕ ಎಂ.ಆರ್. ಜೋಶಿ, ಕಿಸಾನಸಿಂಗ್ ರಾಜಪೂತ ಹಾಗೂ 70 ಪ್ರತಿಭಾವಂತ ವಿದ್ಯಾಥರ್ಿಗಳನ್ನು ಸನ್ಮಾನಿಸಲಾಯಿತು.