ವಿಜಯಪುರ 31: ಸರ್ಧಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮ ದಿನಾಚರಣೆ ಹಾಗೂ ರಾಷ್ಟ್ರೀಯ ಏಕತಾ ದಿನದ ಅಂಗವಾಗಿ ಇಂದು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ರಾಷ್ಟ್ರೀಯ ಐಕ್ಯತೆ ಮತ್ತು ಭದ್ರತೆಯ ಸಲುವಾಗಿ, ಏಕತೆಗಾಗಿ ನಡೆಗೆ ಕಾರ್ಯಕ್ರಮವನ್ನು ನಗರದಲ್ಲಿ ಹಮ್ಮಿಕೊಳ್ಳಲಾಯಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್ ನಿಕ್ಕಂ ಅವರು ಏಕತಾ ನಡಿಗೆಗೆ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು. ನಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವಲ್ಲಿ ನಗರದ ಡಾ.ಬಿ.ಆರ್ ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಿಂದ ಗಾಂಧಿ ಚೌಕ್ನ ಪೊಲೀಸ್ ಠಾಣೆವರೆಗೆ ನಡೆದ ಏಕತಾ ನಡಿಗೆಯಲ್ಲಿ ವಿವಿಧ ಶಾಲೆಗಳ ವಿಧ್ಯಾರ್ಥಿಗಳು ಎನ್.ಸಿ,ಸಿ. ಪಡೆಯ ವಿಧ್ಯಾಥರ್ಿಗಳು, ಪೊಲೀಸ್ ಇಲಾಖೆ ಸಿಬ್ಬಂದಿಗಳು ಹಾಗೂ ಶಿಕ್ಷಕರು ಭಾಗವಹಿಸಿ ಯಶಸ್ವಿಗೊಳಿಸಿದರು.
ಗಾಂಧಿ ಚೌಕ್ ಪೊಲೀಸ್ ಠಾಣೆ ಆವರಣದಲ್ಲಿ ವಿದ್ಯಾಥರ್ಿಗಳಿಗೆ ರಾಷ್ಟ್ರೀಯ ಏಕತಾ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನ್ಯಾಮಗೌಢ, ಡಿ.ಎ.ಆರ್.ತುಕಡಿಯ ಡಿ,ಎಸ್,ಪಿ ಪ್ರಭು ಪಾಟೀಲ, ಸಿ,ಪಿ.ಐ ನಾಯ್ಕೋಡಿ, ಅಸಿಸ್ಟಂಟ್ ಕಮಂಡೆಂಟ್ ಶರಣು ಬದವ, ಶಂಕರ ಗೌಢ, ಎಸ್.ಬಿ ಪಾಟೀಲ ಸೇರಿದಂತೆ ವಿವಿಧ ಪೊಲೀಸ್ ಅಧಿಕಾರಿಗಳು, ಶಿಕ್ಷಕರು ಭಾಗವಹಿಸಿದ್ದರು.