ವಿಜಯಪುರ: ಬಿಜೆಪಿ ನೂತನ ಅಧ್ಯಕ್ಷರಾಗಿ ಆರ್.ಎಸ್.ಪಾಟೀಲ

ವಿಜಯಪುರ 13: ಜಿಲ್ಲಾ ಭಾರತೀಯ ಜನತಾ ಪಕ್ಷದ ನೂತನ ಅಧ್ಯಕ್ಷರಾಗಿ ಆರ್.ಎಸ್. ಪಾಟೀಲ (ಕೂಚಬಾಳ) ಅಧಿಕಾರ ಸ್ವೀಕರಿಸಿದರು.

ವಿಜಯಪುರದ ಗುರುದತ್ತ ಮಂಗಲ ಕಾರ್ಯಾಲಯದಲ್ಲಿ ಜರುಗಿದ ಪದಗ್ರಹಣ ಸಮಾರಂಭದಲ್ಲಿ ನಿಕಟಪೂರ್ವ ಅಧ್ಯಕ್ಷ ಚಂದ್ರಶೇಖರ ಕವಟಗಿ ಅವರು ನೂತನ ಜಿಲ್ಲಾಧ್ಯಕ್ಷ ಆರ್.ಎಸ್. ಪಾಟೀಲ ಅವರಿಗೆ ಪಕ್ಷದ ಬಾವುಟ ನೀಡಿ ಅಧಿಕಾರ ಹಸ್ತಾಂತರಿಸಿದರು.

   ಈ ಸಂದರ್ಭದಲ್ಲಿ ಪಕ್ಷದ ರಾಜ್ಯ ಚುನಾವಣೆ ಸಹ ಉಸ್ತುವಾರಿ ಹಾಗೂ ಶಾಸಕ ಹಾಲಪ್ಪ ಆಚಾರ್ಯ, ಸಂಸದ ರಮೇಶ ಜಿಗಜಿಣಗಿ, ಶಾಸಕ ಸೋಮನಗೌಡ ಪಾಟೀಲ (ಸಾಸನೂರ), ಪಕ್ಷದ ಜಿಲ್ಲಾ ಚುನಾವಣೆ ಉಸ್ತುವಾರಿ ಅಮರನಾಥ ಪಾಟೀಲ, ಮಾಜಿ ಸಚಿವರಾದ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಎಸ್.ಕೆ. ಬೆಳ್ಳುಬ್ಬಿ, ಡಾ.ಗೋಪಾಲ ಕಾರಜೋಳ, ದಯಾಸಾಗರ ಪಾಟೀಲ, ಸಿದ್ಧಲಿಂಗ ಹಂಜಗಿ, ಪ್ರಕಾಶ ಅಕ್ಕಲಕೊಟ, ವಿಜುಗೌಡ ಪಾಟೀಲ, ರವಿಕಾಂತ ಬಗಲಿ, ಸಂಗರಾಜ ದೇಸಾಯಿ, ವಿವೇಕಾನಂದ ಡಬ್ಬಿ ಹಾಗೂ ಪಕ್ಷದ ಎಲ್ಲ ಮಂಡಲಗಳ ಅಧ್ಯಕ್ಷರುಗಳು ಉಪಸ್ಥಿತರಿದ್ದರು.