ಲೋಕದರ್ಶನ ವರದಿ
ವಿಜಯಪುರ 27: ಹಿಂದುಳಿದ ವರ್ಗಗಳ ಇಲಾಖೆ ವ್ಯಾಪ್ತಿಯ ವಸತಿ ನಿಲಯಗಳಲ್ಲಿ ವಿದ್ಯಾರ್ಥಿ ಹಾಗೂ ಸಿಬ್ಬಂದಿಗಳ ಕಡ್ಡಾಯವಾಗಿ ಬಯೋಮೆಟ್ರಿಕ್ ದಾಖಲಾಗಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಾರ್ಯದಶರ್ಿ ಮೊಹ್ಮದ ಮೊಹಸೀನ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಇಲಾಖೆಯ ಅನುದಾನ ಲೆಕ್ಕ ಶೀರ್ಷಿಕೆಯ ವರದಿಯನ್ನು ಪರಿಶೀಲಿಸಿದ ಅವರು, 6 ರಿಂದ 7 ಗಂಟೆ ಒಳಗೆ ವಸತಿ ನಿಲಯದ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳು ಬಯೋಮೆಟ್ರಿಕ್ ದಾಖಲೆ ಮಾಡಬೇಕು ಎಂದು ಹೇಳಿದರು.
ಹಿಂದುಳಿದ ವರ್ಗಗಳ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಆಹಾರ, ಸ್ವಚ್ಛತೆ ಹಾಗೂ ಆರೋಗ್ಯದ ಕುರಿತು ಸಿಬ್ಬಂದಿಗಳು ಕಾಳಜಿ ವಹಿಸಬೇಕು. ಅದರಂತೆ ದೇವರಾಜ ಅರಸು ನಿಗಮ, ವಿಶ್ವಕರ್ಮ, ಉಪ್ಪಾರ, ಅಂಬಿಗರ ಚೌಡಯ್ಯ ನಿಗಮಗಳಡಿಯಲ್ಲಿ ಫಲಾನುಭವಿಗಳನ್ನು ಆಯ್ಕೆ ಮಾಡಿ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸುವಂತೆ ಸೂಚನೆ ನೀಡಿದರು.
ಸಭೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಂಟಿ ಕಾರ್ಯದಶರ್ಿ ಸಿ.ಕೆ.ಜಗದೀಶಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ನಿಂಗಪ್ಪ, ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಜಿ.ಎಂ.ದೊಡಮನಿ, ಜಿಲ್ಲಾ ವ್ಯವಸ್ಥಾಪಕ ಕಾಂಬಳೆ ಸೇರಿದಂತೆ ಎಲ್ಲ ತಾಲೂಕಾ ವಿಸ್ತರಣಾಧಿಕಾರಿಗಳು ಉಪಸ್ಥಿತರಿದ್ದರು.
ಇದಕ್ಕೂ ಮೊದಲು ನಗರದ ಅಫಜಲಪೂರ ಟಕ್ಕೆಯಲ್ಲಿನ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದ ಕಟ್ಟಡ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.