ಲೋಕದರ್ಶನ ವರದಿ
ವಿಜಯಪುರ 27: ಜಿಲ್ಲೆಯಾದ್ಯಂತ ಅನರ್ಹರರು ಹೊಂದಿರುವ ಬಿಪಿಎಲ್ ಪಡಿತರ ಚೀಟಿಗಳನ್ನು ಪತ್ತೆ ಹಚ್ಚಿ, ರದ್ದು ಗೊಳಿಸಲು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಆಹಾರ ಮತ್ತು ನಾಗರೀಕ ಸರಬರಾಜು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು ಜಿಲ್ಲೆಯಾದ್ಯಂತ ಅನರ್ಹರರು ಹೊಂದಿರುವ ಬಿಪಿಎಲ್ ಪಡಿತರ ಚೀಟಿಗಳನ್ನು ತಕ್ಷಣ ಪತ್ತೆ ಹಚ್ಚಬೇಕು. ನಿಯಮಾವಳಿನ್ವಯ ಇದೇ ಮಾರ್ಚ 31 ರೊಳಗೆ ಎಪಿಎಲ್ ಪಡಿತರ ಚೀಟಿಗಳಾಗಿ ಪರಿವತರ್ಿಸುವ ಕುರಿತಂತೆ ಅವರು ಸೂಚನೆ ನೀಡಿದರು.
ಬಿಪಿಎಲ್ ಪಡಿತರ ಚೀಟಿಯನ್ನು ಹೊಂದಲು ವೇತನವನ್ನು ಗಣನೆಗೆ ತೆಗೆದುಕೊಳ್ಳದೇ ಎಲ್ಲಾ ಖಾಯಂ ನೌಕರರು, ಸೇವಾ ತೆರಿಗೆ ವೃತ್ತಿ ತೆರಿಗೆ ಪಾವತಿಸುವ ಎಲ್ಲಾ ಕುಟುಂಬಗಳು, ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟೆರ್ ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು, ಗ್ರಾಮೀಣ ಪ್ರದೇಶವನ್ನು ಹೊರತುಪಡಿಸಿ ನಗರ, ಪಟ್ಟಣ ಪ್ರದೇಶಗಳಲ್ಲಿ 1000 ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಸ್ವಂತ ಮನೆಯನ್ನು ಹೊಂದಿರುವ ಕುಟುಂಬಗಳು, ಜೀವನೋಪಾಯಕ್ಕಾಗಿ ಸ್ವಂತವಾಗಿ ಓಡಿಸುವ ಒಂದು ವಾಣಿಜ್ಯ ವಾಹನವನ್ನು ಅಂದರೆ ಟ್ರಾಕ್ಟರ ಮ್ಯಾಕ್ಸಿಕ್ಯಾಬ್ ಹೊಂದಿದ ಕುಟುಂಬಗಳನ್ನು ಹೊರತುಪಡಿಸಿ, ನಾಲ್ಕು ಚಕ್ರದ ವಾಹನಗಳನ್ನು ಹೊಂದಿರುವ ಎಲ್ಲಾ ಕುಟುಂಬಗಳು ಹಾಗೂ ಕುಟುಂಬದ ವಾಷರ್ಿಕ ವರಮಾನವು ರೂ 1.20 ಲಕ್ಷಗಳಿಗಿಂತಲೂ ಹೆಚ್ಚಿಗೆ ಇರುವ ಕುಟುಂಬಗಳು ಬಿಪಿಎಲ್ ಪಡಿತರ ಚೀಟಿಗಳನ್ನು ಹೊಂದಲು ಅರ್ಹತೆಯನ್ನು ಹೊಂದಿರುವುದಿಲ್ಲ ಎಂದು ತಿಳಿಸಿದ್ದಾರೆ.
ಬಿ.ಪಿ.ಎಲ್ ಪಡಿತರ ಚೀಟಿಗೆ ಅರ್ಹತೆ ಹೊಂದದ ಕುಟುಂಬಗಳು ಒಂದು ವೇಳೆ ಸಕರ್ಾರಕ್ಕೆ ತಪ್ಪು ಮಾಹಿತಿಯನ್ನು ನೀಡಿ ಬಿಪಿಎಲ್ ಪಡಿತರ ಚೀಟಿಗಳನ್ನು ಪಡೆದಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದರೆ, ಆಯಾ ಸ್ಥಳೀಯ ಸಂಸ್ಥೆಗಳಿಂದ ಮಾಹಿತಿ ಕ್ರೋಡೀಕರಿಸಿ ಅನರ್ಹರು ಹೊಂದಿರುವ ಬಿಪಿಎಲ್ ಪಡಿತರ ಚೀಟಿಗಳನ್ನು ಕಂಡು ಹಿಡಿದು ಅವರು ಈವರೆಗೆ ಪಡೆದಿರುವ ಪಡಿತರ ವಸ್ತುಗಳಿಗೆ ಅನುಗುಣವಾಗಿ ಮುಕ್ತ ಮಾರುಕಟ್ಟೆ ದರದಂತೆ ದಂಡವನ್ನು ವಿಧಿಸುವಂತೆ ಜಿಲ್ಲೆಯ ಎಲ್ಲಾ ತಾಲೂಕಾ ತಹಶೀಲ್ದಾರರಿಗೆ ಸೂಚನೆ ನೀಡಲಾಗಿದೆ
ಸಕರ್ಾರದ ಆದೇಶದನ್ವಯ ಪ್ರತಿಯೊಂದು ಮತ್ತು ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿದಾರರು ಸಂಬಂಧಿಸಿದ ಆಯಾ ನ್ಯಾಯ ಬೆಲೆ ಅಂಗಡಿಗೆ ಕುಟುಂಬದ ಎಲ್ಲ ಸದಸ್ಯರೊಂದಿಗೆ ಬಯೋ ಮೆಟ್ರಿಕ್ ನೀಡಿ, ಇ-ಕೆವೈಸಿ ಮಾಡಿಸಲು ಸೂಚಿಸಿದ್ದು, ಈವರೆಗೆ ಕೇವಲ 2,90,646 ಪಡಿತರ/ಚೀಟಿದಾರರು ಮಾತ್ರ ಕೆವೈಸಿ ಮಾಡಿದ್ದು, ಬರುವ ಮಾರ್ಚ 31ರ ವರೆಗೆ ಮಾತ್ರ ಸಕರ್ಾರ ಇ-ಕೆವೈಸಿ ಮಾಡಲು ಗಡುವು ನೀಡಿರುವ ಹಿನ್ನೆಲೆಯಲ್ಲಿ ಪಡಿತರ ಚೀಟಿಗಳೆಲ್ಲವನ್ನು ಇ-ಕೆವೈಸಿ ಮಾಡುವ ಕುರಿತಂತೆ ಸೂಕ್ತ ಜಾಗೃತಿ ಮತ್ತು ಕೈಗೊಂಡ ಕ್ರಮದ ಬಗ್ಗೆ ವರದಿ ಸಲ್ಲಿಸುವಂತೆ ಸೂಚಿಸಿದರು.
ಕೆಲವೊಂದು ಪಡಿತರ ಚೀಟಿದಾರರು ಸಕರ್ಾರದಿಂದ ಪಡಿತರ ವಸ್ತುಗಳಾದ ಅಕ್ಕಿಯನ್ನು ಪಡೆದುಕೊಂಡು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವ ಬಗ್ಗೆ ಗಮನಕ್ಕೆ ಬಂದಿದ್ದು, ಅಂತಹ ಅಕ್ಕಿ ಮಾರಾಟ ಮಾಡುವವರ ಬಗ್ಗೆ ಪತ್ತೆ ಹಚ್ಚಬೇಕು. ವಿರುದ್ಧ ಪ್ರಕರಣ ಸಹ ದಾಖಲಿಸುವ ಜೊತೆಗೆ ಪಡಿತರ ಚೀಟಿ ರದ್ದು ಪಡಿಸಲು ಅವಶ್ಯಕ ಕ್ರಮ ಕೈಗೊಳ್ಳಲು ಸೂಚಿಸಿದರು.
ಜಿಲ್ಲೆಯಲ್ಲಿ 2016 ರಿಂದ ಈವರೆಗೆ ಒಟ್ಟು 1121 ಸಕರ್ಾರಿ ನೌಕರರು ಬಿಪಿಎಲ್ ಕಾರ್ಡ್ ಹೊಂದಿದವರ ಮೇಲೆ ಕ್ರಮ ಕೈಗೊಂಡು 87 ಲಕ್ಷ ರೂ. ದಂಡ ವಸೂಲಿ ಮಾಡಲಾಗಿದೆ. 2019-20 ನೇ ಸಾಲಿನಲ್ಲಿ 6700 ಬಿಪಿಎಲ್ ಕಾರ್ಡ್ ಪಡೆದ ಅನರ್ಹರರನ್ನು ಪತ್ತೆ ಹಚ್ಚಿ 55 ಸಾವಿರ ರೂಪಾಯಿ ದಂಡ ವಿಧಿಸಲಾಗಿದ್ದು, 5500 ಬಿಪಿಎಲ್ ಕಾರ್ಡ್ ಗ್ಳನ್ನು ಎಪಿಎಲ್ ಕಾಡರ್್ಗಳಾಗಿ ಪರಿವರ್ತನೆ ಮಾಡಲಾಗಿದೆ ಎಂದು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕಿ ಸುರೇಖಾ ಹೇಳಿದರು.