ವಿಜಯಪುರ: ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ

ಲೋಕದರ್ಶನ ವರದಿ

ವಿಜಯಪುರ 05; ಇಂದಿನ ಯುವ ಪೀಳಿಗೆಯಲ್ಲಿ ಸಂಸ್ಕೃತಿಯ ಅಪಾರವಾದ ಜ್ಞಾನ, ಕಲೆ, ಸಾಹಿತ್ಯ, ಸೃಜನಶೀಲತೆ ಅಡಗಿದೆ. ಇವರಲ್ಲಿರುವ ಪ್ರತಿಭೆಯನ್ನು  ಅನಾವರಣಗೊಳಿಸಲು ಸರ್ಕಾರ ವಿವಿಧ ಅವಕಾಶ-ವೇದಿಕೆಗಳನ್ನು ಕಲ್ಪಿಸಿದ್ದು,  ಈ ಅವಕಾಶಗಳ  ಸದುಪಯೋಗವಾಗಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಸಬಿಹಾ ಭೂಮಿಗೌಡ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕನರ್ಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಸಂಯುಕ್ತಾಶ್ರಯದಲ್ಲಿಂದು ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಹಿಂದಿ ಭವನದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಗ್ರಾಮೀಣ ಮಟ್ಟದಲ್ಲಿಯೂ ಕೂಡ ಸಂಸ್ಕೃತಿಯಿಂದ ಯುವಜನತೆ ವಿಮುಖರಾಗುತ್ತಿರುವುದರಿಂದ, ಯುವ ಜನರಲ್ಲಿ ಸಂಸ್ಕೃತಿಯ ಮಹತ್ವವನ್ನು ಸಾರಲು  ಭಾರತ ಸರ್ಕಾರ ಯುವ ಜನೋತ್ಸವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. 30 ವರ್ಷಗಳಲ್ಲಿ ಜಿಲ್ಲೆಯಿಂದ ರಾಷ್ಟ್ರಮಟ್ಟದಲ್ಲಿ ಯುವಜನೋತ್ಸವದಲ್ಲಿ ಸ್ಪರ್ದೇಸಿದ ಪ್ರತಿಭೆಗಳು ಕೇವಲ ಬೆರಳಣಿಕೆಯಷ್ಟು ಮಾತ್ರ. ಹಾಗಾಗಿ ಇಲ್ಲಿ ಆಯ್ಕೆಯಾದ ಪ್ರತಿಭಾನ್ವಿತ ಕಲಾವಿದರು ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಭಾಗವಹಿಸಿ ಜಿಲ್ಲೆಯ ಕೀತರ್ಿ ಹೆಚ್ಚಿಸಬೇಕು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಎಸ್.ಎಸ್ಟಿ ದೌರ್ಜನ್ಯ ತಡೆ ಸಲಹಾ ಸಮಿತಿ ಸದಸ್ಯರಾದ ಅಡಿವೆಪ್ಪ ಸಾಗಲ್ಲ ಮಾತನಾಡಿ, ಇಂದಿನ ಯುವ ಜನತೆ ಸಂಸ್ಕೃತಿಗೆ ಮಾರು ಹೋಗಿ ಮೊಬೈಲ್ ಎಂಬ ಮಾಯಾಜಾಲದಲ್ಲಿ ಮುಳುಗಿ ಹೋಗುತ್ತಿರುವುದು ಅತ್ಯಂತ ಕಳವಳ ಸಂಗತಿಯಾಗಿದೆ. ಯುವಜನೋತ್ಸವ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗದೇ, ಅದರೊಂದಿಗೆ ಮಹಿಳೆಯ ಕಲೆಯನ್ನು ಗುರುತಿಸಿ ಪ್ರೊತ್ಸಾಹಿಸುವುದು ಕುಟುಂಬದಲ್ಲಿರುವ ಪ್ರತಿ ಪುರುಷನ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮಹಿಳಾ ವಿಶ್ವವಿದ್ಯಾನಿಲಯದ ಎನ್.ಎಸ್.ಎಸ್. ಸಂಯೋಜಕರಾದ ಪ್ರೊ.ಬಿ.ಎಲ್.ಲಕ್ಕಣ್ಣವರ, ಬಸವರಾಜ ಕುಲಕರ್ನಾ, ರಾಜ್ಯ ಯುವ ಪ್ರಶಸ್ತಿ ಪುರಸ್ಕೃತರಾದ ಸಂಜೀವ ಖೋತ, ಸಂತೋಷ ನಿಗಡಿ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. 

ಮಹಿಳಾ ವಿವಿಯ  ವಿದ್ಯಾರ್ಥಿಗಳು ನಾಡಗೀತೆ ಹಾಗೂ ಮಹಿಳಾ ಗೀತೆಯನ್ನು ಹಾಡಿದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಎಸ್.ಜಿ.ಲೋಣಿ ಸ್ವಾಗತಿಸಿದರು. ನಿವೃತ್ತ ಶಿಕ್ಷಕ ನಾಗರಾಜ ಎಸ್.ಬಿರಾದಾರ ನಿರೂಪಿಸಿ, ವಂದಿಸಿದರು.