ವಿಜಯಪುರ: ಜಿಲ್ಲಾ ಪಂಚಾಯತ್ ಕೆಡಿಪಿ ಸಭೆ ಹಿಂಗಾರು ಬಿತ್ತನೆ ಬೀಜ ದೊರೆಯುವಂತೆ ನೋಡಿಕೊಳ್ಳಲು ಸೂಚನೆ

ಲೋಕದರ್ಶನ ವರದಿ

ವಿಜಯಪುರ 18: ಜಿಲ್ಲೆಯಲ್ಲಿ ಹಿಂಗಾರು ಮಳೆ ಉತ್ತಮವಾಗಿದ್ದು ಹಿಂಗಾರು ಬಿತ್ತನೆಗೆ ಬೇಕಾಗಿರುವ ಗೋಧಿ, ಕಡಲೆ, ಬೀಜಗಳನ್ನು ಸಕಾಲದಲ್ಲಿ  ರೈತರಿಗೆ ದೊರೆಯುವಂತೆ ನೋಡಿಕೊಳ್ಳಲು ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶಿವಯೋಗೆಪ್ಪ ನೇದಲಗಿ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಸೆಪ್ಟಂಬರ್ ತಿಂಗಳ ಕನರ್ಾಟಕ ಅಭಿವೃದ್ದಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು ಹಿಂಗಾರು ಬಿತ್ತನೆಗೆ ಅವಶ್ಯಕವಿರುವ ಬೀಜಗಳನ್ನು  ರೈತರಿಗೆ ಯಾವುದೇ ತೊಂದರೆಯಾಗದಂತೆ ಒದಗಿಸಲು ಕ್ರಮ ವಹಿಸಬೇಕು. ಉತ್ತಮ ಗುಣಮಟ್ಟದ ಬೀಜಗಳನ್ನು ಪೂರೈಸಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು. 

ರೈತರಿಗೆ ಸಹಾಯಧನದಡಿಯಲ್ಲಿ ಚಾಪಕಟರ್ ಸೇರಿದಂತೆ ಇನ್ನಿತರ ಕೃಷಿ ಉಪಕರಣಗಳನ್ನು ನೀಡಬೇಕು. ಬಾಕಿ ಇರುವ ಕೃಷಿ ಹೊಂಡದ ಬಿಲ್ಲಗಳನ್ನು ಬಿಡುಗಡೆ ಮಾಡಲು ಅಗತ್ಯ ಕ್ರಮ ಕೈಗೊಳ್ಳೂವಂತೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. 

ಪ್ರಸ್ತುತ ದಿನಗಳಲ್ಲಿ ಕೆಸಲ ಕೇಳಿಕೊಂಡು ಬರುವವರ ಸಂಖ್ಯೆ ಹೆಚ್ಚಾಗಿದೆ. ವಿನ: ಸ್ವಯಂ ಉದ್ಯೋಗ ಕೈಗೊಳ್ಳುವವರ ಸಂಖ್ಯೆ ಕಡಿಮೆಯಾಗಿದೆ. ಸ್ವಯಂ ಉದ್ಯೋಗ ಕೈಗೊಳ್ಳಲು ಮುಂದೆ ಬಂದಾಗ ಅಂತಹವರಿಗೆ ತಕ್ಷಣ ಸರಕಾರದಿಂದ ನೀಡುವ ಯೋಜನೆಗಳ ಸಹಾಯವವನ್ನು ಸಂಬಂಧಿಸಿದ ಅಧಿಕಾರಿಗಳು ಒದಗಿಸಬೇಕು. ಲಿಂಗಸಮಾನತೆ, ಮಹಿಳೆಯರ ಶಿಕ್ಷಣ, ಆರೋಗ್ಯ ಅವರ ಹಕ್ಕುಗಳನ್ನು ಒದಗಿಸಿಕೊಡುವುದರ ಜೊತೆಗೆ ಆಥರ್ಿಕ ಸ್ವಾವಲಂನೆ ಮತ್ತು ಮಹಿಳಾ ಸಶಸ್ತಿಕರಣಕ್ಕೆ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.