ಲೋಕದರ್ಶನ ವರದಿ
ವಿಜಯಪುರ 28: ಮಾನವನ ದೇಹಕ್ಕೆ ಕಣ್ಣುಗಳು ಸೌಂದರ್ಯವನ್ನು ನೀಡುತ್ತವೆ. ಇಂತಹ ಕಣ್ಣುಗಳ ಆರೋಗ್ಯವನ್ನು ಗಮನಿಸುವುದು ಅತ್ಯವಶ್ಯಕ. ಕಣ್ಣಿನ ಆರೋಗ್ಯ ದೇಹದ ಆರೋಗ್ಯದ ಅವಿಭಾಜ್ಯ ಅಂಗವಾಗಿದೆ. ಹಾಗಾಗಿ ಕಣ್ಣುಗಳ ಬಗ್ಗೆ ನಿರ್ಲಕ್ಷ್ಯ ಬೇಡ ಎಂದು ನಗರದ ಅನುಗ್ರಹ ಕಣ್ಣಿನ ಆಸ್ಪತ್ರೆಯ ಡಾ.ಪ್ರಭುಗೌಡ ವಿದ್ಯಾರ್ಥಿನಿಯರಿಗೆ ಮನವರಿಕೆ ಮಾಡಿದರು.
ಕನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಎನ್.ಎಸ್.ಎಸ್. ಕೋಶವು ನಗರದ ಅನುಗ್ರಹ ಕಣ್ಣಿನ ಆಸ್ಪತ್ರೆಯ ಸಹಯೋಗದಲ್ಲಿ ಏರ್ಪಡಿಸಿದ್ದ ನಾಲ್ಕು ದಿನದ ಉಚಿತ ನೇತ್ರ ತಪಾಸಣಾ ಶಿಬಿರದಲ್ಲಿ ಅವರು ಮಾತನಾಡಿದರು.
ಈ ವರ್ಷದ ಶಿಬಿರದಲ್ಲಿ ದಾಖಲೆ ಮಟ್ಟದಲ್ಲಿ ಸಾವಿರಕ್ಕೂ ಅಧಿಕ ಜನರು ನೇತ್ರ ತಪಾಸಣೆ ಮಾಡಿಸಿಕೊಂಡರು.
ಶಿಬಿರದ ಅಧ್ಯಕ್ಷತೆ ವಹಿಸಿದ್ದ ಮಹಿಳಾ ವಿವಿ ಕುಲಸಚಿವೆ ಪ್ರೊ.ಆರ್. ಸುನಂದಮ್ಮ ಮಾತನಾಡಿ, ವಿದ್ಯಾಥರ್ಿನಿಯರು ಈ ಉಚಿತ ನೇತ್ರ ತಪಾಸಣಾ ಶಿಬಿರದ ಸದುಪಯೋಗವನ್ನು ಪಡೆದು ಕಣ್ಣುಗಳನ್ನು ಆರೋಗ್ಯವಾಗಿರುವಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ವಿವಿಧ ನಿಕಾಯಗಳ ಡೀನರು, ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ಬೋಧಕ-ಬೋಧಕೇತರ ಸಿಬ್ಬಂದಿ ವರ್ಗದವರು, ಸಂಶೋಧನಾ ಮತ್ತು ಸ್ನಾತಕೋತ್ತರ ವಿದ್ಯಾಥರ್ಿನಿಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಎನ್ಎಸ್ಎಸ್ ಕೋಶದ ಸಂಯೋಜನಾಧಿಕಾರಿ ಪ್ರೊ.ಬಿ.ಎಲ್.ಲಕ್ಕಣ್ಣವರ ನಿರೂಪಿಸಿ, ವಂದಿಸಿದರು.