ವಿಜಯಪುರ 22: ಬೆಂಕಿ ಪೊಟ್ಟಣ ತುಂಬಿದ್ದ ಲಾರಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಲಾರಿ ಸಂಪೂರ್ಣ ಸುಟ್ಟು ಕರಕಲಾದ ಘಟನೆ ವಿಜಯಪುರ ತಾಲೂಕಿನ ಅರಕೇರಿ ತಾಂಡಾ ಬಳಿ ರಾಷ್ಟ್ರೀಯ ಹೆದ್ದಾರಿ 50 ರ ಮೇಲೆ ಸಂಭವಿಸಿದೆ.
ತಮಿಳುನಾಡು ಮೂಲದ ಲಾರಿ ಬೆಂಕಿಗೆ ಆಹುತಿಯಾಗಿದ್ದು, ತಕ್ಷಣವೇ ಚಾಲಕ ಹಗೂ ಕ್ಲೀನರ್ ಇಬ್ಬರೂ ಗಾಬರಿಗೊಂಡು ತಕ್ಷಚಣವೇ ಲಾರಿಯಿಂದ ಕೆಳಗೆ ಜಿಗಿದು ಪ್ರಾಣಾಪಾಯದಿಮದ ಪಾರಾಗಿದ್ದಾರೆ,
ಈ ಬೆಂಕಿ ಆಕಸ್ಮಿಕದಿಂದ ಲಾರಿ ಸಂಪೂರ್ಣ ಸುಟ್ಟು ಕರಕಲಾಗಿದೆ. ತಮಿಳುನಾಡಿನಿಂದ ಮಹಾರಾಷ್ಟ್ರದ ಸೊಲ್ಲಾಪೂರಕ್ಕೆ ಬೆಂಕಿ ಪೊಟ್ಟಣಗಳನ್ನು ತುಂಬಿಕೊಂಡು ಹೊರಟಾಗ ಅರಕೇರಿ ತಾಂಡಾ ಬಳಿ ಆಕಸ್ಮಿಕವಾಗಿ ಬೆಂಕಿ ಹೊತ್ತುಕೊಂಡಿದ್ದೆ, ಲಾರಿಗೆ ಬೆಂಕಿ ತಗುಲಿ ಧಗಧಗನೆ ಹೊತ್ತಿ ಉರಿದಿದ್ದು, ಆಗಸದೆತ್ತರಕ್ಕೆ ಬೆಂಕಿಯ ಕೆನ್ನಾಲಿಗೆ ಚಿಮ್ಮುತ್ತಿತ್ತು, ಈ ಘಟನೆಯಿಂದಾಗಿ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ರಸ್ತೆಯ ಎರಡೂ ಬದಿಗೆ ವಾಹನಗಳು ಕಿಲೋಮೀಟರವರೆಗೆ ನಿಂತಿದ್ದವು. ಸುದ್ದಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಲು ಹರಸಾಹಸ ಪಡಬೇಕಾಯಿತು. ಈ ಕುರಿತು ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.