ವಿಜಯಪುರ: ಫಿಟ್ ಇಂಡಿಯಾ ಸೈಕಲ್ ಜಾಥಾ

ವಿಜಯಪುರ 22: ವಿದ್ಯಾವರ್ಧಕ ಸಂಘದ ಕಲಾ, ವಾಣಿಜ್ಯ ಹಾಗೂ ಬಿಸಿಎ ಮಹಾವಿದ್ಯಾಲಯ, ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯ, ಮತ್ತು ಎನ್ಎಸ್ಎಸ್ ಘಟಕದ ವತಿಯಿಂದ ನಗರದ ವಿದ್ಯಾವರ್ಧಕ ಸಂಘದ ದರಬಾರ ಪದವಿ ಮಹಾವಿದ್ಯಾಲಯದಲ್ಲಿ ಫಿಟ್ ಇಂಡಿಯಾ ಸೈಕ್ಲಿಂಗ್ ಜಾಥಾವನ್ನು ಆಯೋಜಿಸಲಾಗಿತ್ತು. ರಾಷ್ಟ್ರೀಯ ಸೇವಾ ಯೋಜನೆಯ ಜಿಲ್ಲಾ ನೋಡಲ್ ಅಧಿಕಾರಿ ಹೆಚ್.ಎಂ.ಸಜ್ಜಾದೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. 

ವ್ಹಿ.ಬಿ.ದರಬಾರ ಕಾಲೇಜಿನ ಉಪನ್ಯಾಸಕರಾದ ಕೆ.ಡಿ.ಚವ್ಹಾಣ, ಬಿ.ಬಿ.ಪಾಟೀಲ ಮುಖ್ಯ ಅತಿಥಿಗಳಾಗಿದ್ದರು. ಪ್ರಾಚಾರ್ಯರಾದ ಜಿ.ಹೆಚ್.ಮಣ್ಣೂರ, ಎನ್.ಎಸ್.ಎಸ್. ಘಟಕಾಧಿಕಾರಿಗಳಾದ ರಾಜು ಬಿ.ಕಪಾಲಿ, ಸೀಮಾ ಪಾಟೀಲ್, ಸಾಂಸ್ಕೃತಿಕ ಕಾರ್ಯದಶರ್ಿಗಳಾದ ಸುನೀಲ ಯಾದವ ಉಪಸ್ಥಿತರಿದ್ದರು. ವಿದ್ಯಾಥರ್ಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.