ವಿಜಯಪುರ: ಫೆ. 28-29 ರಂದು ವಿಜಯಪುರದಲ್ಲಿ ಬೃಹತ್ ಉದ್ಯೋಗ ಮೇಳ
ಲೋಕದರ್ಶನ ವರದಿ
ವಿಜಯಪುರ 22: ರಾಜ್ಯ ಸಕರ್ಾರದ ನಿರ್ದೇಶನದನ್ವಯ ಜಿಲ್ಲಾಡಳಿತ,ಉದ್ಯೋಗ ಮತ್ತು ಕೌಶಲ್ಯ ಅಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ಬರುವ ಫೆಬ್ರುವರಿ 28 ಹಾಗೂ 29 ರಂದು ಎರಡು ದಿನಗಳ ಬೃಹತ್ ಉದ್ಯೋಗ ಮೇಳಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಉದ್ಯೋಗ ಮೇಳ ಕುರಿತ ಪೂರ್ವಭಾವಿ ಸಿದ್ಧತಾ ಸಭೆ ನಡೆಸಿದ ಅವರು, ಸೋಲಾಪೂರ ರಸ್ತೆಯ ಬಿಎಲ್ಡಿಇ ಕಾಲೇಜ್ ಹತ್ತಿರ ಇರುವ ಸರ್ಕಾರಿ ಐಟಿಐ ಕಾಲೇಜ್ ಆವರಣದಲ್ಲಿ ಉದ್ಯೋಗ ಮೇಳ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದ್ದು, ಸಂಬಂಧಿಸಿದ ಇಲಾಖಾ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಉದ್ಯೋಗ ಮೇಳವನ್ನು ಯಶಸ್ವಿಗೊಳಿಸಬೇಕು. ಉದ್ಯೋಗ ಮೇಳದಲ್ಲಿ ಸುಮಾರು 5 ಸಾವಿರಕ್ಕಿಂತ ಹೆಚ್ಚು ಉದ್ಯೋಗಾಕಾಂಕ್ಷಿಗಳು ಆಗಮಿಸುವ ನಿರೀಕ್ಷೆ ಇದ್ದು ಈ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಸೂಚನೆ ನೀಡಿದರು.
ಉದ್ಯೋಗ ಮೇಳಕ್ಕಾಗಿ ವ್ಯವಸ್ಥಾಪಕ ಸಮಿತಿ, ಪ್ರಚಾರ ಮತ್ತು ಪ್ರಕಟನಾ ಉಪ ಸಮಿತಿ, ಆಹಾರ, ವಸತಿ ಉಪಸಮಿತಿ, ನೊಂದಣಿ ಮತ್ತು ಮಾರ್ಗದರ್ಶನ ಸಮಿತಿ, ಉದ್ಯೋಗದಾತರ ಮತ್ತು ಉದ್ಯೋಗಾಕಾಂಕ್ಷಿಗಳ ಸಂಪರ್ಕ ಸಮಿತಿ, ಸ್ಟಾಲ್ಗಳ ವಿತರಣಾ ಮ್ತತು ನಿರ್ವಹಣಾ ಸಮಿತಿ ಸೇರಿದಂತೆ ಇನ್ನಿತರ ಸಮಿತಿಗಳ ಅಧಿಕಾರಿಗಳು ಮುಂಬರುವ ಈ ಬೃಹತ್ ಉದ್ಯೋಗಮೇಳ ಯಶಸ್ವಿಗೆ ಕಾರ್ಯ ನಿರ್ವಹಿಸುವಂತೆ ಸೂಚಿಸಿದರು.
ಅದರಂತೆ ಹೆಚ್ಚು ಹೆಚ್ಚು ಯುವಕ-ಯುವತಿ ಅಭ್ಯಥರ್ಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸುವಂತೆ ನೋಡಿಕೊಳ್ಳಬೇಕು. ಉದ್ಯೋಗಾಕಾಂಕ್ಷಿಗಳಿಗೆ ಮತ್ತು ಉದ್ಯೋಗದಾತರಿಗೆ ಅವಶ್ಯಕ ಸೌಲಭ್ಯಗಳನ್ನು ಈ ಸಂದರ್ಭದಲ್ಲಿ ಕಲ್ಪಿಸುವಂತೆ ಅವರು ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ,ಅಪರ ಜಿಲ್ಲಾಧಿಕಾರಿ ಔದ್ರಾಮ, ಮಹಾನಗರ ಪಾಲಿಕೆ ಆಯುಕ್ತ ಹರ್ಷಾ ಶೆಟ್ಟಿ, ಜಿಲ್ಲಾ ಕೈಗಾರಿಕಾ ಕೇಂದ್ರ ಜಂಟಿ ನಿರ್ದೇಶಕ ಟಿ.ಸಿದ್ದಣ್ಣ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಸುಲೈಮಾನ ನದಾಫ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ಕೌಶಲ್ಯ ಅಭಿವೃದ್ಧಿ ಅಧಿಕಾರಿ ರಮೇಶ ದೇಸಾಯಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 