ವಿಜಯಪುರ 25: ವಾತರ್ಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವಿಜಯಪುರ ಹಾಗೂ ಕರ್ನಾಟಕ ಚಲನಚಿತ್ರ ಅಕಾಡಿಮಿ ಸಹಯೋಗದಲ್ಲಿ ಗಣರಾಜ್ಯೋತ್ಸವ ಅಂಗವಾಗಿ ದಿನಾಂಕ 25-1-2020 ರಂದು ಅಟೆನ್ ಬರೋ ನಿರ್ದೇಶನದ ``ಗಾಂಧಿ' ಹಾಗೂ ಡಾ: ಜಬ್ಬಾರ್ ಪಟೇಲ ನಿರ್ದೇ ಶನದ ಡಾ: ಬಿ.ಆರ್.ಅಂಬೇಡ್ಕರ ಚಲನಚಿತ್ರಗಳ ಉಚಿತ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು
ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಇವೆರಡೂ ಚಲನಚಿತ್ರಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಕಾಲೇಜು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಹಾಗೂ ವಿವಿಧ ಶಾಲಾ ಕಾಲೇಜುಗಳ ಶಿಕ್ಷಕರು ಚಲನ ಚಿತ್ರಗಳನ್ನು ವೀಕ್ಷಿಸಿದರು. ಚಲನಚಿತ್ರಗಳ ಉಚಿತ ಪ್ರದರ್ಶನ ಕಾರ್ಯಕ್ರಮ ಯಶಸ್ವಿಯಾಯಿತು.