ವಿಜಯಪುರ 22: ಪ್ರಧಾನಮಂತ್ರಿಗಳ ಹೊಸ 15 ಕಾರ್ಯಕ್ರಮಗಳಡಿಯಲ್ಲಿ ಅಲ್ಪಸಂಖ್ಯಾತರ ಜನಾಂಗದವರಿಗೆ ಗುಣಮಟ್ಟದ ಶಿಕ್ಷಣ ಒದಗಿಸುವಂತೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಪರಿಶೀಲನಾ ಸಭೆ ನಡೆಸಿದ ಅವರು, ಜಿಲ್ಲೆಯಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗಾಗಿ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಗುಣಮಟ್ಟದಲ್ಲಿ ದೊರೆಯುವಂತೆ ನೋಡಿಕೊಳ್ಳಲು ತಿಳಿಸಿದ ಅವರು, ಶೈಕ್ಷಣಿಕ ವ್ಯವಸ್ಥೆ ಸುಧಾರಣೆಗೆ ಸಂಬಂಧಪಟ್ಟಂತೆ ಅವಶ್ಯಕವಿರುವ ಅನುದಾನ ಹಾಗೂ ಇತರೆ ಶಾಲಾ ಕೊಠಡಿಗಳ ಪ್ರಸ್ತಾವನೆ ನೀಡುವಂತೆ ತಿಳಿಸಿ, ಈ ಕುರಿತು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಹೇಳಿದರು.
ಅದರಂತೆ ಸರ್ಕಾರಿ ಉರ್ದು ಶಾಲೆಗಳು ಮತ್ತು ಮದರಸಾ ಶಿಕ್ಷಣ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಮರ್ಪಕವಾಗಿ ಅನುದಾನ ಬಳಕೆಯಾಗಬೇಕು. ಮದರಸಾ ಶಿಕ್ಷಣ ಸಂಸ್ಥೆಗಳ ಆಧುನೀಕರಣ, ಔಪಚಾರಿಕ ಮತ್ತು ಗಣಕೀಕೃತ ಶಿಕ್ಷಣಕ್ಕೆ ಸಂಬಂಧಪಟ್ಟಂತೆ ಅನುದಾನ ಸಮರ್ಪಕವಾಗಿ ಬಳಸುವಂತೆ ಸೂಚಿಸಿದ ಅವರು, ಅನುದಾನ ಲ್ಯಾಪ್ಸ್ ಆಗದಂತೆ ಮುನ್ನೆಚ್ಚರಿಕೆ ವಹಿಸಲು ಸೂಚಿಸಿದರು.
ಜಿಲ್ಲೆಯ ವಿವಿಧ ಮದರಸಾ, ಅರೆಬಿಕ್ ಶಾಲೆ ಹಾಗೂ ಉದರ್ು ಶಾಲೆಗಳಲ್ಲಿ ನೀಡಲಾಗುತ್ತಿರುವ ಗುಣಮಟ್ಟದ ಶಿಕ್ಷಣದ ಬಗ್ಗೆ ಪರಿಶೀಲಿಸಿದ ಅವರು, ಮಕ್ಕಳ ದಾಖಲಾತಿ ಹೆಚ್ಚಿಸಲು ಹಾಗೂ ಶಿಕ್ಷಕರಿಗೆ ಪಾಠ ಬೋಧನೆ ಅನುಕೂಲಕ್ಕಾಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಸ್ಮಾರ್ಟ ಕ್ಲಾಸ್ ವ್ಯವಸ್ಥೆ ಬಗ್ಗೆ ಖುದ್ದಾಗಿ ಪರಿಶೀಲಿಸುವುದಾಗಿ ತಿಳಿಸಿದ ಅವರು, ಜಿಲ್ಲೆಯಾದ್ಯಂತ ಸಧ್ಯಕ್ಕೆ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರ ಸಂಖ್ಯೆ, ಶಿಕ್ಷಕರ ಕೊರತೆ, ವಿದ್ಯಾರ್ಥಿಗಳ ಸಂಖ್ಯೆ, ಹೊಸ ಕೊಠಡಿಗಳ ಅವಶ್ಯಕತೆ ಕುರಿತ ಮಾಹಿತಿಯನ್ನು ಸಮಗ್ರ ರೀತಿಯಲ್ಲಿ ಸಲ್ಲಿಸುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಅದರಂತೆ ವಿವಿಧ ಸಾಲ-ಸೌಲಭ್ಯಗಳನ್ನು ಸಕಾಲಕ್ಕೆ ದೊರಕಿಸಲು ಲೀಡ್ ಬ್ಯಾಂಕ್ ವ್ಯವಸ್ಥಾಪಕರು ಹಾಗೂ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಸ್ವಸಹಾಯ ಸಂಘಗಳಿಗೆ ಸುತ್ತುನಿಧಿ ಬಿಡುಗಡೆ, ಸ್ವಯಂ ಉದ್ಯೋಗ, ಶ್ರಮಶಕ್ತಿ ಸಾಲ ಯೋಜನೆಗಳು ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು.
ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ ಸುರೇಶ ಲೋಕರೆ ಸ್ವಾಗತಿಸಿದರು. ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಅನುಷ್ಠಾನ ಪರಿಶೀಲನಾ ಸಮಿತಿ ಸದಸ್ಯ ಸುಲೇಮಾನ ಉಮರ್ ಸೇರಿದಂತೆ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತೋಟಗಾರಿಕೆ, ಕೈಗಾರಿಕಾ ಇಲಾಖೆ ಅಧಿಕಾರಿಗಳೂ, ಸಹಕಾರ ಸಂಘದ ಉಪನಿಬಂಧಕರು, ಲೀಡ್ ಬ್ಯಾಂಕ್ ವ್ಯವಸ್ಥಾಪಕರು ಉಪಸ್ಥಿತರಿದ್ದರು.