ವಿಜಯಪುರ 28: ಜಿಲ್ಲೆಯಲ್ಲಿ ಬಾಕಿ ಉಳಿದಿರುವ ಬಹುಹಳ್ಳಿ ಕುಡಿಯುವ ನೀರಿನ ಯೋಜನೆಗಳನ್ನು ಪೂರ್ಣಗೊಳಿಸುವಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಆಯುಕ್ತ ಆರ್.ವಿಶಾಲ್ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಬಹುಹಳ್ಳಿ ಕುಡಿಯುವ ನೀರಿನ ಯೋಜನೆ ಘನ-ದ್ರವ ತ್ಯಾಜ್ಯ ನಿರ್ವಹಣೆ ಕುರಿತು ನಡೆಸಿದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು ಜಿಲ್ಲೆಯಲ್ಲಿ ಬಾಕಿ ಉಳಿದಿರುವ ಬಹುಹಳ್ಳಿ ಕುಡಿಯುವ ನೀರಿನ ಯೋಜನೆ ಶೀಘ್ರ ಪೂರ್ಣಗೊಳಿಸಬೇಕು. ಘನ-ತ್ಯಾಜ್ಯ ನಿರ್ವಹಣೆ ಕುರಿತು ನೀಡಿದ ಅನುದಾನ ಸಮರ್ಪಕವಾಗಿ ಬಳಸುವಂತೆ ಸೂಚಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಪ್ರಸನ್ನಕುಮಾರ್ ಎಚ್. ಸೆಕ್ಷನ್ ಅಧಿಕಾರಿಗಳು ಪಿ.ಡಿ.ಓಗಳು ಸೇರಿದಂತೆ ಇತರ ಅಧಿಕಾಕಾರಿಗಳು ಉಪಸ್ಥಿತರಿದ್ದರು.